logo
ಕನ್ನಡ ಸುದ್ದಿ  /  ಕರ್ನಾಟಕ  /  Hijab Ban Withdrawal: ಜಾತಿ ಆಧಾರದಲ್ಲಿ ಜನರನ್ನು ಒಡೆಯುವ ಬಿಜೆಪಿ, ಧರ್ಮದ ವಿಷಬೀಜ ಬಿತ್ತುವ ಸಿದ್ದರಾಮಯ್ಯ, ಕುತೂಹಲಕಾರಿ ಟ್ವೀಟ್ ವಾರ್‌

Hijab Ban Withdrawal: ಜಾತಿ ಆಧಾರದಲ್ಲಿ ಜನರನ್ನು ಒಡೆಯುವ ಬಿಜೆಪಿ, ಧರ್ಮದ ವಿಷಬೀಜ ಬಿತ್ತುವ ಸಿದ್ದರಾಮಯ್ಯ, ಕುತೂಹಲಕಾರಿ ಟ್ವೀಟ್ ವಾರ್‌

Umesh Kumar S HT Kannada

Dec 22, 2023 11:17 PM IST

google News

ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ಸೂಚಿಸಿರುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ( ಕಡತ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ)

  • ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಆದೇಶ ಹಿಂಪಡೆಯಲಾಗುವುದು. ಯಾರು ಯಾವ ಉಡುಪು ಬೇಕಾದರೂ ಧರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಲ್ಲಿ ಹೇಳಿದ್ದರು. ಇದರ ಬೆನ್ನಿಗೆ ಎಕ್ಸ್‌ನಲ್ಲಿ ಬಿಜೆಪಿಯನ್ನು ಟ್ಯಾಗ್ ಮಾಡಿ ಟ್ವೀಟ್ ಕೂಡ ಮಾಡಿದ್ದರು. ಇದಕ್ಕೆ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ಅದರ ವಿವರ ಇಲ್ಲಿದೆ.

ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ಸೂಚಿಸಿರುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ( ಕಡತ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ)
ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ಸೂಚಿಸಿರುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ. ( ಕಡತ ಚಿತ್ರವನ್ನು ಸಾಂಕೇತಿಕವಾಗಿ ಬಳಸಲಾಗಿದೆ) (HT_PRINT / PTI)

ಕರ್ನಾಟಕದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧ ಆದೇಶ (Hijab Ban Withdrawal) ಹಿಂಪಡೆಯಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಲ್ಲಿ ಹೇಳಿದ್ದರು. ಇಷ್ಟಕ್ಕೆ ಸುಮ್ಮನಾಗದ ಸಿಎಂ ಸಿದ್ದರಾಮಯ್ಯ ಅವರು, ಎಕ್ಸ್ ಖಾತೆಯಲ್ಲಿ ಬಿಜೆಪಿಯನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ ಕುಟುಕು ಟೀಕೆಯ ಟ್ವೀಟ್ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಕರ್ನಾಟಕ ಬಿಜೆಪಿ ಕಟುವಾಗಿ ಪ್ರತಿಕ್ರಿಯಿಸಿದ್ದು, ಧರ್ಮದ ವಿಷ ಬೀಜ ಬಿತ್ತುವುದೇ ಸಿದ್ದರಾಮಯ್ಯನವರ ಗ್ಯಾರೆಂಟಿ ಎಂದು ಟೀಕಿಸಿದೆ. ಬಿಜೆಪಿ ಕರ್ನಾಟಕ ಘಟಕದ ಟ್ವೀಟ್‌ನಲ್ಲಿರುವ ಅಂಶ ಹೀಗಿದೆ ನೋಡಿ -

"ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ.

ಶಾಲೆ - ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಮುಖ್ಯಮಂತ್ರಿಗಳು.

ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ" ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.

ಇದಕ್ಕೂ ಮುನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಲ್ಲಿ ಹೇಳಿದ್ದೇನು?

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಇಂದು (ಡಿ.22) ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರ ಸ್ಪಷ್ಟಪಡಿಸಿದರು. ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ವಿವಾದಿತ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. ವಿವರ ಓದಿಗೆ - ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್‌, ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

ಅದೇ ರೀತಿ, ಹಿಜಾಬ್ ನಿಷೇಧ ಆದೇಶ ಹಿಂಪಡೆಯುತ್ತಿರುವ ಕಾರಣ, ಈ ಹಿಜಾಬ್‌ ವಿವಾದ ಶುರುವಾದ ಅಂದಿನಿಂದ ಇದುವರೆಗಿನ ಘಟನಾವಳಿಗಳ ಕಿರು ಅವಲೋಕನ ಮಾಡುವುದಕ್ಕೆ ಈ ಹೊತ್ತು ಒಂದು ನಿಮಿತ್ತ. ಈ ವಿವಾದ ಶುರುವಾಗಿದ್ದು 2022ರ ಜನವರಿಯಲ್ಲಿ. ಉಡುಪಿಯ ಕಾಲೇಜಿನಿಂದ ಶುರುವಾದ ಹಿಜಾಬ್‌ ವಿವಾದ ದೇಶದ ಅಲ್ಲಲ್ಲಿ ಪುನರಾವರ್ತನೆಯಾಗಿತ್ತು. ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್ ತನಕ ಹೋಗಿತ್ತು. ಕೊನೆಗೆ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದ ತೀರ್ಪು ಪ್ರಕಟವಾಗಿತ್ತು. ವಿವರ ಓದಿಗೆ - ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಆದೇಶ ವಾಪಸ್‌ ಎಂದ ಸಿಎಂ, ಘಟನಾವಳಿಗಳ ಕಡೆಗೊಂದು ಹಿನ್ನೋಟ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ