logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru News: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ನಿರ್ಧಾರ

Bengaluru News: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ನಿರ್ಧಾರ

Rakshitha Sowmya HT Kannada

Feb 02, 2024 07:48 AM IST

google News

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ನಿರ್ಧಾರ

  • Bengaluru News: ಕೆಸಿ ಜನರಲ್‌ ಆಸ್ಪತ್ರೆ ಕಟ್ಟಡ ನವೀಕರಣ, ಮೇಲ್ಸೇತುವೆ ನಿರ್ಮಾಣ, ಬ್ರಿಡ್ಜ್ ನಿರ್ಮಾಣ ಸೇರಿದಂತೆ ವಿವಿಧ ಕಾಮಕಾರಿಗಳಿಗೆ ಒಟ್ಟು 150 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಸಮ್ಮತಿ ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ನಿರ್ಧಾರ
ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟು ಹೋಗಿರುವ ಗ್ರಾಮಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂತದಲ್ಲಿ 208.45 ಕೋಟಿ ಅಂದಾಜು ಮೊತ್ತದ ಕುಡಿಯುವ ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ವಿವಿಧ ಕಾಮಗಾರಿಗಳಿಗೆ 150 ಕೋಟಿ ರೂ. ಆಡಳಿತಾತ್ಮಕ ಸಮ್ಮತಿ

ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್‌ಟಿಪಿ ಉನ್ನತೀಕರಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಸಮ್ಮತಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ .2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿದೆ.

ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ರೂ.142.47 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ ನಿರ್ಮಾಣವನ್ನು ರೂ.47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ನಿರ್ಧರಿಸಲಾಗಿದೆ.

ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ

2023-24 ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದಿಸಲಾಗಿದೆ.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು 263 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು 287.55 ಕೋಟಿ ರೂ.ಗಳಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ಬಾಗೇವಾಡಿ ಕೆರೆ ತುಂಬಿಸುವ ಯೋಜನೆಯ 519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಮ್ಮತಿ ಸೂಚಿಸಿದೆ.

ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ 158.10 ಕೋಟಿ ರೂ.ಗಳ ಯೋಜನಾ ವರದಿಗೆ ಅನುಮೋದನೆ ನೀಡಲಾಗಿದೆ. ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 499 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ.

ವಿವಿಧ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ

ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಅಂದರೆ ಮಹತ್ವಾಕಾಂಕ್ಷಿ ತಾಲೂಕು (ರಾಯಚೂರು, ಬಳ್ಳಾರಿ, ವಿಜಯಪುರ)ಗಳಲ್ಲಿ 52.81 ಕೋಟಿ ರೂ. ವೆಚ್ಚದಲ್ಲಿ ಮತ್ತು ಮಹತ್ವಾಕಾಂಕ್ಷಿ ತಾಲೂಕುಗಳಲ್ಲದ (ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು) ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ರೂ. 47.18 ರೂ. ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ , ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ 120 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮತಿ ನೀಡಿ, 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ