logo
ಕನ್ನಡ ಸುದ್ದಿ  /  ಕರ್ನಾಟಕ  /  Hijab Ban Withdrawal: ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್‌, ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Hijab Ban Withdrawal: ಕರ್ನಾಟಕದಲ್ಲಿ ಹಿಜಾಬ್ ನಿಷೇಧ ವಾಪಸ್‌, ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Umesh Kumar S HT Kannada

Dec 22, 2023 10:40 PM IST

google News

ಕರ್ನಾಟಕದಲ್ಲಿ ಈ ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಇಂದು (ಡಿ.22) ಮೈಸೂರಿನಲ್ಲಿ ಘೋ‍ಷಿಸಿದರು.

  • ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು ಇದನ್ನು ಸಮರ್ಥಿಸಿಕೊಂಡದ್ದು ಹೀಗೆ.

ಕರ್ನಾಟಕದಲ್ಲಿ ಈ ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಇಂದು (ಡಿ.22) ಮೈಸೂರಿನಲ್ಲಿ ಘೋ‍ಷಿಸಿದರು.
ಕರ್ನಾಟಕದಲ್ಲಿ ಈ ಹಿಂದಿನ ಸರ್ಕಾರ ಜಾರಿಗೊಳಿಸಿದ್ದ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಇಂದು (ಡಿ.22) ಮೈಸೂರಿನಲ್ಲಿ ಘೋ‍ಷಿಸಿದರು.

ಮೈಸೂರು: ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ವಿರೋಧ ಎದುರಿಸಿದ್ದ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾದ ಹಿಜಾಬ್ ನಿಷೇಧ (Hijab Ban Withdrawal) ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಇಂದು (ಡಿ.22) ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರ ಸ್ಪಷ್ಟಪಡಿಸಿದರು. ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ವಿವಾದಿತ ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಅದರಲ್ಲಿ ಹುರುಳಿಲ್ಲ. ಬಿಜೆಪಿಯವರು ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ ಕೆಲಸ ಮಾಡುತ್ತಾರೆ. ಸಮಾಜವನ್ನು ವಿಭಜಿಸುವ ಕೆಲಸವನ್ನು ಕೂಡ ಬಿಜೆಪಿ ನಾಯಕರೇ ಮಾಡುತ್ತಿದ್ದಾರೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕರು ಹಿಜಾಬ್ ಕುರಿತು ಪ್ರಶ್ನಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದರು. ನಾನು ಧೋತಿ, ಶರ್ಟ್ ಧರಿಸುತ್ತೇನೆ. ನೀನು ನಿನಗಿಷ್ಟ ಬಂದ ಡ್ರೆಸ್ ಹಾಕು. ಪ್ಯಾಂಟ್ ಶರ್ಟ್‌ ಏನು ಬೇಕಾದರೂ ಹಾಕು. ಉಡುಪು, ಊಟ ಎಲ್ಲ ಅವರವರ ಇಚ್ಛೆಗೆ ಸೇರಿದ್ದು. ಅದಕ್ಕೆ ನಾನೇಕೆ ಅಡ್ಡಿ ಪಡಿಸಬೇಕು. ಊಟ, ಉಡುಪು ನಿಮ್ಮ ಸ್ವಾತಂತ್ರ್ಯ. ಅದಕ್ಕೆ ನಾನೇಕೆ ಅಡ್ಡಿ ಮಾಡಬೇಕು ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಅವರು, ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು, ನಮ್ಮ ಸರ್ಕಾರ ಬಡವರಿಗಾಗಿ ಕೆಲಸ ಮಾಡುತ್ತೆ. ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ ಎಂದು ಒತ್ತಿ ಹೇಳಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ