logo
ಕನ್ನಡ ಸುದ್ದಿ  /  ಕರ್ನಾಟಕ  /  Independence Day: ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಜ್ಜು; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಧ್ವಜಾರೋಹಣ

Independence Day: ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಜ್ಜು; ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಧ್ವಜಾರೋಹಣ

HT Kannada Desk HT Kannada

Aug 13, 2023 08:24 PM IST

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

    • Bengaluru Independence Day: ಆಗಸ್ಟ್ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಆ ದಿನದ ಎಲ್ಲಾ ಕಾರ್ಯಕ್ರಮಗಳ ವಿವರ ಹೀಗಿದೆ.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭ ನಡೆಯುವುದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ ಪೂರೈಸುತ್ತಿದ್ದ ನಾರಾ ಶ್ರೀನಿವಾಸ್ ರಾವ್ ಬಂಧನ; ಗೋವಾ ಮಹಿಳೆಯ ಬ್ಲಾಕ್ ಮೇಲ್, ಬೆಂಗಳೂರಿನ ವ್ಯಕ್ತಿ ಸೆರೆ

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಕರ್ನಾಟಕ ಹವಾಮಾನ ಮೇ 20; ದಕ್ಷಿಣ ಕನ್ನಡ, ಉಡುಪಿ ಸೇರಿ 8ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ತುಷಾರ್ ಗಿರಿನಾಥ್ ಮಾತನಾಡಿದರು. ಕಾರ್ಯಕ್ರಮಗಳ ವಿವರ ಹೀಗಿದೆ.

ಆಗಸ್ಟ್ 15ರಂದು ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈದಾನಕ್ಕೆ ಆಗಮಿಸಲಿದ್ದಾರೆ. 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ನಂತರ ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಲಿದ್ದಾರೆ.

ಬೃಹತ್‌ ಪಥಸಂಚಲನ

ಪಂಥಸಂಚಲನದಲ್ಲಿ ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್‌ಎಫ್, ಕೆಎಸ್‌ಐಎಸ್ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ಯಾಡ್ ಮತ್ತು ಬ್ಯಾಂಡ್‌ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಸೇರಿ ಒಟ್ಟು 38 ತುಕಡಿಗಳಲ್ಲಿ ಸುಮಾರು 1,350 ಮಂದಿ ಭಾಗವಹಿಸಲಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಕುರಿತು ಪತ್ರಿಕಾಗೋಷ್ಠಿ

ಸಾಂಸ್ಕೃತಿಕ ಕಲರವ

ಶ್ರೀಪದ ದೇವರಾಜ್ ಅವರ ತಂಡದಿಂದ ನಾಡಗೀತೆ ಮತ್ತು ರೈತ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ದಕ್ಷಿಣ ವಲಯದ ಜೆಪಿ ನಗರದ ಕರ್ನಾಟಕ ಪಬ್ಲಿಕ್ ಶಾಲೆಯ 750 ಮಕ್ಕಳು ವೀರ ನಮನ ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿಯ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳಿಂದ 'ವೀರ ಭೂಮಿ ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ' ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 50 ಮಕ್ಕಳಿಂದ 'ರೋಪ್ ಸ್ಕಿಪಿಂಗ್' ಕಾರ್ಯಕ್ರಮಗಳನ್ನು ನಡೆಸಿಕೊಳ್ಳಲಿದ್ದಾರೆ. ಎಂಇಜಿ ಸೆಂಟರ್ ತಂಡದವರು ಕಲಾರಿಪಯಟ್ಟು, ಎಎಸ್‌ಸಿ ತಂಡದವರಿಂದ ಟೆಂಟ್ ಪೆಗ್ಗಿಂಗ್ ಹಾಗೂ ಎಎಸ್‌ಸಿ ತಂಡ ಇವರಿಂದ ಮೋಟಾರ್ ಸೈಕಲ್ ಸಾಹಸ ಪ್ರದರ್ಶನ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು ನಗರದ ಪೊಲೀಸ್ ಆಯುಕ್ತ ಬಿ ದಯಾನಂದ ಮಾತನಾಡಿ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತಾ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಒಟ್ಟು 8000 ಆಸನಗಳ ವ್ಯವಸ್ಥೆ

ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಳೆದ ಮೂರು ದಿನಗಳಿಂದ ತಾಲೀಮು ನಡೆಯುತ್ತಿದೆ. ಸಾರ್ವಜನಿಕರಿಗಾಗಿ 3000 ಆಸನಗಳು, ಅತಿಗಣ್ಯರಿಗೆ 2000 ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ರಕ್ಷಣಾ ಇಲಾಖೆ ಅಧಿಕಾರಿಗಳಿಗೆ 750 ಆಸನಗಳು, ಇತರೆ ಇಲಾಖೆ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗಾಗಿ 2000 ಆಸನಗಳು ಸೇರಿದಂತೆ ಒಟ್ಟು 8000 ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಗಿದೆ. ಮೈದಾನದ ಸಮೀಪದಲ್ಲಿರುವ ಎತ್ತರದ ಕಟ್ಟಡಗಳು, ಕಾಮಗಾರಿ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಜತೆಗೆ ನಗರದ 108 ಪೊಲೀಸ್ ಠಾಣೆಗಳ ಮೂಲಕ ಆಯಾ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ, ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದರು.

ಈ ವಸ್ತುಗಳನ್ನು ತರುವಂತಿಲ್ಲ

ಹೆಲ್ಮೆಟ್, ಕರಪತ್ರಗಳು, ಎಲ್ಲಾ ವಿಧದ ಕ್ಯಾಮರಾಗಳು, ನೀರಿನ ಬಾಟಲ್, ಸಿಗರೇಟ್, ಬೆಂಕಿಪೊಟ್ಟಣ, ಶಸ್ತ್ರಾಸ್ತ್ರಗಳು, ಹರಿತವಾದ ವಸ್ತುಗಳು, ಕಪ್ಪು ಕರವಸ್ತ್ರ, ತಿಂಡಿ ತಿನಿಸು, ಮದ್ಯದ ಬಾಟಲ್, ಬಾವುಟಗಳು, ಪಟಾಕಿ ಮತ್ತು ನ್ಪೋಟಕ ವಸ್ತುಗಳನ್ನು ನಿಷೇಧಿಸಲಾಗಿದೆ.

ಪಾರ್ಕಿಂಗ್‌ ನಿಷೇಧ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿ ನಗರ ಬಸ್ ನಿಲ್ದಾಣವರೆಗೆ, ಕಬ್ಬನ್ ರಸ್ತೆ, ಸಿಟಿಒ ವೃತ್ತ, ಕೆಆರ್ ರಸ್ತೆ, ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ವರದಿ: ಎಚ್ ಮಾರುತಿ, ಬೆಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ