logo
ಕನ್ನಡ ಸುದ್ದಿ  /  ಕರ್ನಾಟಕ  /  ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸುಲಿಗೆ ಪ್ರಕರಣ ದಾಖಲು: ದೂರು ಕೊಟ್ಟವರೂ ಜೆಡಿಎಸ್‌ನಲ್ಲಿ ಸಕ್ರಿಯರಾಗಿದ್ದವರೇ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸುಲಿಗೆ ಪ್ರಕರಣ ದಾಖಲು: ದೂರು ಕೊಟ್ಟವರೂ ಜೆಡಿಎಸ್‌ನಲ್ಲಿ ಸಕ್ರಿಯರಾಗಿದ್ದವರೇ

HT Kannada Desk HT Kannada

Oct 03, 2024 10:24 PM IST

google News

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಬೆಂಗಳೂರು ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ.

    • ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ನಗರದ ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ.
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಬೆಂಗಳೂರು ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ.
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ಬೆಂಗಳೂರು ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ನಗರದ ಪೊಲೀಸರು ಸುಲಿಗೆ ಪ್ರಕರಣ ದಾಖಲಿಸಿದ್ದಾರೆ. ಕುಮಾರಸ್ವಾಮಿ ಅವರೊಂದಿಗೆ ಮತ್ತೋರ್ವ ಜೆಡಿಎಸ್ ನಾಯಕ, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರೂ ಈ ಪ್ರಕರಣದಲ್ಲಿ ಸಹ ಆರೋಪಿ ಎಂದು ಅಮೃತಹಳ್ಳಿ ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ವಿಜಯ್ ಟಾಟಾ ಈ ಆರೋಪ ಮಾಡಿದ್ದಾರೆ. ಅಮೃತಹಳ್ಳಿ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ರಮೇಶ್‌ ಗೌಡ ಮೊದಲ ಆರೋಪಿಯಾಗಿದ್ದರೆ, ಎಚ್‌.ಡಿ.ಕುಮಾರಸ್ವಾಮಿ 2ನೇ ಆರೋಪಿಯಾಗಿದ್ದಾರೆ. ವಿಜಯ್ ಟಾಟಾ ಅವರು ತಮ್ಮನ್ನು ತಾವು ಜೆಡಿಎಸ್‌ನ ಸಾಮಾಜಿಕ ಮಾಧ್ಯಮ ವಿಭಾಗದ ಉಪಾಧ್ಯಕ್ಷ ಎಂದು ಕರೆದುಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು 2019 ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ ಅವರ ಪರ ಪ್ರಚಾರ ನಡೆಸಲು ಕೋಟ್ಯಂತರ ರೂಪಾಯಿ ವ್ಯಯಿಸಿದ್ದಾಗಿ ವಿಜಯ್ ಟಾಟಾ ಹೇಳಿಕೊಂಡಿದ್ದಾರೆ.

'ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ವರ್ಧಿಸುವುದು ಖಚಿತವಾಗಿದೆ. ಚುನಾವಣೆ ವೆಚ್ಚಕ್ಕಾಗಿ ರೂ 50 ಕೋಟಿ ಕೊಡಬೇಕು ಎಂದು ರಮೇಶ್ ಗೌಡ ತಾಕೀತು ಮಾಡಿದ್ದರು. ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ಕರೆ ಮಾಡಿ ಹೇಳಿದ್ದರು. ನಾನು ನಿರ್ವಹಿಸುತ್ತಿರುವ ಕೆಲ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ಗಳಿಗೆ ಹಣ ಬೇಕಿರುವುದರಿಂದ ಇಷ್ಟು ಹಣ ಹೊಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೆ' ಎಂದು ವಿಜಯ್ ಟಾಟಾ ದೂರಿನಲ್ಲಿ ಹೇಳಿದ್ದಾರೆ.

'ನನ್ನ ಮಾತು ಕೇಳಿ ಸಿಟ್ಟಿಗೆದ್ದ ಕುಮಾರಸ್ವಾಮಿ, 'ಅದೇನು ಮಾಡ್ತೀಯೋ ನನಗೆ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಮಾಡುವುದಷ್ಟೇ ಅಲ್ಲ, ಬದುಕುವುದೂ ಕಷ್ಟವಾಗುತ್ತದೆ' ಎಂದು ಬೆದರಿಕೆ ಹಾಕಿದ್ದಾಗಿ ವಿಜಯ್ ಟಾಟಾ ಹೇಳಿದ್ದಾರೆ. ಈ ಮಾತುಕತೆ ವೇಳೆ ಉಪಸ್ಥಿತರಿದ್ದ ರಮೇಶ್ ಗೌಡ, ಕುಮಾರಣ್ಣ ಹೇಳಿದಂತೆ 50 ಕೋಟಿ ರೆಡಿ ಮಾಡು. ನಾನು ಒಂದು ಶಾಲೆ ಮತ್ತು ದೇವಸ್ಥಾನ ಕಟ್ಟಿಸುತ್ತಿದ್ದೇನೆ. ಅದಕ್ಕೂ 5 ಕೋಟಿ ಕೊಡಬೇಕು' ಎಂದು ತಾಕೀತು ಮಾಡಿದ್ದಾಗಿಯೂ ವಿಜಯ್ ದೂರಿದ್ದಾರೆ.

ವಿಜಯ್ ಟಾಟಾ ಆರೋಪವನ್ನು ಜೆಡಿಎಸ್ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷ ಎಚ್‌.ಎಸ್.ಚಂದನ್ ನಿರಾಕರಿಸಿದ್ದಾರೆ. ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ವಿಜಯ್ ಟಾಟಾ ಯಾವುದೇ ಹುದ್ದೆ ಹೊಂದಿರಲಿಲ್ಲ. ಟಾಟಾ ವಿರುದ್ಧ ದೂರು ದಾಖಲಿಸಲು ಪಕ್ಷ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ