Hebbal service road: ಬೆಂಗಳೂರಿಗರೇ ಗಮನಿಸಿ; 15 ದಿನಗಳವರೆಗೆ ಹೆಬ್ಬಾಳ ಸರ್ವೀಸ್ ರಸ್ತೆ ಬಂದ್
Jul 02, 2023 08:02 PM IST
ಹೆಬ್ಬಾಳ ಸರ್ವೀಸ್ ರಸ್ತೆ ಬಂದ್
- Bengaluru news: ಬೆಂಗಳೂರಿನ ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗಿನ ಮೇಲ್ಸೇತುವೆಯಲ್ಲಿ ಬಿಡಿಎ ಹೆಚ್ಚುವರಿ ರ‍್ಯಾಂಪ್ ನಿರ್ಮಿಸುತ್ತಿದೆ. ಹೀಗಾಗಿ ಬೆಂಗಳೂರಿನ ಹೆಬ್ಬಾಳ ಪ್ರದೇಶದಲ್ಲಿನ ಸರ್ವೀಸ್ ರಸ್ತೆಯಲ್ಲಿ ಮುಂದಿನ 15 ದಿನಗಳ ಕಾಲ ಸಂಚಾರ ನಿಷೇಧಿಸಲಾಗಿದೆ.
ಬೆಂಗಳೂರು: ನಗರದ ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗಿನ ಮೇಲ್ಸೇತುವೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ವು ಹೆಚ್ಚುವರಿ ರ‍್ಯಾಂಪ್ ನಿರ್ಮಿಸುತ್ತಿದೆ. ಹೀಗಾಗಿ ಬೆಂಗಳೂರಿನ ಹೆಬ್ಬಾಳ ಪ್ರದೇಶದಲ್ಲಿನ ಸರ್ವೀಸ್ ರಸ್ತೆಯಲ್ಲಿ ಮುಂದಿನ 15 ದಿನಗಳ ಕಾಲ ಸಂಚಾರ ನಿಷೇಧಿಸಲಾಗಿದೆ.
ಟ್ರಾಫಿಕ್ ಜಾಮ್ ತಗ್ಗಿಸುವ ಸಲುವಾಗಿ ಮೇಲ್ಸೇತುವೆಗೆ ಸುಮಾರು 700 ಅಡಿ ಉದ್ದದ ಇನ್ನೊಂದು ರ‍್ಯಾಂಪ್ ಅಳವಡಿಕೆ ಕಾಮಗಾರಿಯನ್ನು ಬಿಡಿಎ ಕೈಗೆತ್ತಿಕೊಂಡಿದೆ. ಈ ರ‍್ಯಾಂಪ್ ಕೊನೆಯಾಗುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗ ಕಾಮಗಾರಿ ಸಲುವಾಗಿ ಗುಂಡಿ ಅಗೆಯಲಾಗಿದೆ. ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗಿನ ಸರ್ವಿಸ್ ರಸ್ತೆಯಲ್ಲಿ ಜುಲೈ 1 ರಿಂದ ಜುಲೈ 15ರವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಉಪ ಪೊಲೀಸ್ ಆಯುಕ್ತ (ಸಂಚಾರ-ಉತ್ತರ) ಸಚಿನ್ ಘೋರ್ಪಡೆ ಮಾತನಾಡಿ, ಒಂದು ತಿಂಗಳಿನಿಂದ ತಳಹದಿಯ ಕೆಲಸಗಳು ನಡೆಯುತ್ತಿದ್ದರೂ, ಇದುವರೆಗೆ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಈಗ ಹೆಬ್ಬಾಳ ಪೊಲೀಸ್ ಠಾಣೆಯಿಂದ ನಗರದ ಕಡೆಗೆ ಹೋಗುವ ಸರ್ವಿಸ್ ರಸ್ತೆಯನ್ನು ಅಗೆಯಲಾಗಿದ್ದು, ಸಂಚಾರ ನಿಷೇಧಿಸಲಾಗಿದೆ. ಹೆಬ್ಬಾಳ ಸರ್ವಿಸ್ ರಸ್ತೆಯ ಎಲ್ಲಾ ಟ್ರಾಫಿಕ್ ಮುಖ್ಯ ರಸ್ತೆಯೊಂದಿಗೆ ವಿಲೀನಗೊಳ್ಳುವುದರಿಂದ ಸ್ವಲ್ಪ ದಿನಗಳವರೆಗೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ವಾಹನ ಸವಾರರು ಸಹಕರಿಸಬೇಕಾಗಿ ವಿನಂತಿ ಎಂದು ಹೇಳಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿರುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಯಾವಾಗಲೂ ಟ್ರಾಫಿಕ್ ಜಾಮ್ ಇದ್ದೇ ಇರುತ್ತದೆ. ಜುಲೈ 15ರ ಒಳಗೆ ಮೇಲ್ಸೇತುವೆಯಲ್ಲಿ ಹೆಚ್ಚುವರಿ ರ‍್ಯಾಂಪ್ ನಿರ್ಮಾಣವಾಗುವ ಸಾಧ್ಯತೆಯಿದ್ದು, ಸಂಚಾರ ದಟ್ಟಣೆ ಸುಧಾರಿಸಲಿದೆ.
ಕಳೆದ ವರ್ಷ ದುಷ್ಕರ್ಮಿಗಳಿಂದ ಭೀಕರವಾಗಿ ಹತ್ಯೆಗೊಳಗಾಗಿದ್ದ ಪ್ರವೀಣ್ ನೆಟ್ಟಾರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್.ಐ.ಎ. ಆರೋಪಿಗಳ ಶರಣಾಗತಿಗೆ ನೀಡಿದ ಗಡುವು ಜೂನ್ 30ರಂದು ಅಂತ್ಯಗೊಂಡಿದೆ. ಮನೆ ಮನೆಗೆ ಪೋಸ್ಟರ್, ಮೈಕ್ ನಲ್ಲಿ ಅನೌನ್ಸ್ ಮಾಡಿದರೂ ಆರೋಪಿಗಳು ಕೋರ್ಟಿಗೆ ಹಾಜರಾಗದ ಕಾರಣ ನೇರವಾಗಿ ಎನ್.ಐ.ಎ. ಅಧಿಕಾರಿಗಳು ಫೀಲ್ಡಿಗಿಳಿದಿದ್ದು, ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್ ಮಾಡಿ