logo
ಕನ್ನಡ ಸುದ್ದಿ  /  ಕರ್ನಾಟಕ  /  Hsrp: ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಡೆಡ್‌ಲೈನ್ ಫೆಬ್ರವರಿ 17ರವರೆಗೆ ವಿಸ್ತರಣೆ, ಏನಿದು ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌

HSRP: ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಡೆಡ್‌ಲೈನ್ ಫೆಬ್ರವರಿ 17ರವರೆಗೆ ವಿಸ್ತರಣೆ, ಏನಿದು ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌

HT Kannada Desk HT Kannada

Nov 16, 2023 11:17 PM IST

google News

ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಡೆಡ್‌ಲೈನ್ ಫೆಬ್ರವರಿ 17ರವರೆಗೆ ವಿಸ್ತರಣೆ ಆಗಿದೆ. (ಸಾಂಕೇತಿಕ ಚಿತ್ರ)

  • ಕರ್ನಾಟಕದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮೊದಲು ರಿಜಿಸ್ಟರ್ ಆಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸುವುದಕ್ಕೆ ವಿಧಿಸಲಾಗಿದ್ದ ಗಡುವನ್ನು ಫೆ.17ರ ತನಕ ವಿಸ್ತರಿಸಲಾಗಿದೆ.

ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಡೆಡ್‌ಲೈನ್ ಫೆಬ್ರವರಿ 17ರವರೆಗೆ ವಿಸ್ತರಣೆ ಆಗಿದೆ. (ಸಾಂಕೇತಿಕ ಚಿತ್ರ)
ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಡೆಡ್‌ಲೈನ್ ಫೆಬ್ರವರಿ 17ರವರೆಗೆ ವಿಸ್ತರಣೆ ಆಗಿದೆ. (ಸಾಂಕೇತಿಕ ಚಿತ್ರ) (X/@HubliCityeGroup)

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಅಳವಡಿಸಲು ನಿಗದಿ ಮಾಡಿದ್ದ ಗಡುವನ್ನು ಸರ್ಕಾರ 2024ರ ಫೆಬ್ರವರಿ 17ರ ತನಕ ವಿಸ್ತರಿಸಿದೆ.

2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸುವುದಕ್ಕೆ ಈ ಮೊದಲು ನವೆಂಬರ್ 17ರ ಗಡುವನ್ನು ಸಾರಿಗೆ ಇಲಾಖೆ ನೀಡಿತ್ತು. ಈಗ ಈ ಗಡುವು ವಿಸ್ತರಣೆಯಾಗಿದೆ.

ಇದುವರೆಗೆ ಕರ್ನಾಟಕದಲ್ಲಿ 2.30 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆಯಾಗಿದೆ. ರಾಜ್ಯದಲ್ಲಿ 1950ರಿಂದಲೂ ಆಗಿರುವ ನೋಂದಣಿ ಪ್ರಕಾರ ರಾಜ್ಯದಲ್ಲಿ 2.15 ಕೋಟಿ ಹಳೇ ವಾಹನಗಳಿವೆ. 2019ರಿಂದ ಹಿಂದಿನ 15 ವರ್ಷದಲ್ಲಿ ನೋಂದಣಿಯಾಗಿರುವ ವಾಹನಗಳ ಸಂಖ್ಯೆಯನ್ನು ಪರಿಗಣಿಸಿದರೆ ಅಂದಾಜು 1.70 ಕೋಟಿ ವಾಹನಗಳಿವೆ. ಇದಕ್ಕೆ ಹೋಲಿಸಿದರೆ ಎಚ್‌ಎಸ್‌ಆರ್‌ಪಿ ಅಳವಡಿಸುವ ವಿಚಾರದಲ್ಲಿ ವಾಹನ ಮಾಲೀಕರಲ್ಲಿ ಜಾಗೃತಿ ಇಲ್ಲದೇ ಇರುವುದು ಗೋಚರಿಸಿದೆ. ಆದ್ದರಿಂದ 3 ತಿಂಗಳ ಮಟ್ಟಿಗೆ ಅವಧಿ ವಿಸ್ತರಣೆ ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಚಿತಪಡಿಸಿದ್ದಾರೆ.

ಹೈಕೋರ್ಟ್‌ನಲ್ಲಿದೆ ಎಚ್‌ಎಸ್‌ಆರ್‌ಪಿಯ ಅಳವಡಿಕೆ ಗುತ್ತಿಗೆ ಕುರಿತಾದ ದಾವೆ...

ಎಚ್‌ಎಸ್‌ಆರ್‌ಪಿ ಅಳವಡಿಸಲು ರಾಜ್ಯಾದ್ಯಂತ 4,000ಕ್ಕೂ ಅಧಿಕ ಡೀಲರ್ ಪಾಯಿಂಟ್‌ಗಳನ್ನು ಸಾರಿಗೆ ಇಲಾಖೆ ಗುರುತಿಸಿದೆ. ಕೆಲವೇ ಕಂಪನಿಗಳಿಗಷ್ಟೇ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಹೊಣೆಗಾರಿಕೆಯನ್ನು ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ದಾಖಲಾಗಿದೆ.

ಕರ್ನಾಟಕದಲ್ಲಿ ಹೆಚ್‌ಎಸ್‌ಆರ್‌ಪಿ ಹೊಸ ಪ್ಲೇಟ್ ಹಾಕಿಸುವುದು ಹೇಗೆ

ಕರ್ನಾಟಕದಲ್ಲಿ ಹೆಚ್‌ಎಸ್‌ಆರ್‌ಪಿ ಅಥವಾ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಸ್ ಅನ್ನು ಪಡೆಯಲು ಈ ರೀತಿ ಮಾಡಬಹುದು.

1. ಕರ್ನಾಟಕ ಸಾರಿಗೆ ಇಲಾಖೆಯ ವೆಬ್‌ಸೈಟ್‌ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬೇಕು.

2. ಅಲ್ಲಿ ಬುಕ್‌ ಹೆಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ವಾಹನದ ಉತ್ಪಾದಕ ಕಂಪನಿಯನ್ನು ಆಯ್ಕೆ ಮಾಡಬೇಕು.

3. ಬಳಿಕ ಅಲ್ಲಿ ಬೇಸಿಕ್ ವೆಹಿಕಲ್ ಡಿಟೇಲ್ಸ್ ಕೇಳಿರುವುದನ್ನು ಭರ್ತಿ ಮಾಡಬೇಕು.

4. ಅದಾದ ಬಳಿಕ ಡೀಲರ್ ಲೊಕೇಶನ್‌ ಅನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಸೆಲೆಕ್ಟ್ ಮಾಡಿಕೊಳ್ಳಬೇಕು.

5. ಹೆಚ್‌ಎಸ್‌ಆರ್‌ಪಿಯನ್ನು ಫಿಕ್ಸ್ ಮಾಡುವುದಕ್ಕಾಗಿ ಡೀಲರ್‌ ಲೊಕೇಶನ್ ಸೆಲೆಕ್ಟ್ ಮಾಡಬೇಕಾಗಿರುವಂಥದ್ದು.

6. ಹೆಚ್‌ಎಸ್‌ಆರ್‌ಪಿಗೆ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ನಗದು ಪಾವತಿ ಮಾಡಬೇಕಾದ್ದಿಲ್ಲ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ