logo
ಕನ್ನಡ ಸುದ್ದಿ  /  ಕರ್ನಾಟಕ  /  Hd Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

HD Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

Raghavendra M Y HT Kannada

May 05, 2024 08:22 AM IST

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.

    • ಪ್ರಜ್ವಲ್ ರೇವಣ್ಣ ಮಹಿಳೆಗೆ ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆ ಅಪಹರಣ ಪ್ರಕರಣ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಅವರನ್ನು ಎಸ್ಐಟಿ ವಶಕ್ಕೆ ಪಡೆದಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ. (AFP File photo)

ಬೆಂಗಳೂರು: ಜೆಡಿಎಸ್‌ನಿಂದ (JDS) ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Sex Scandal Case) ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಗೆ ಕಿರುಕುಳ ಹಾಗೂ ಅಪಹರಣ ಪ್ರಕರಣಗಳಲ್ಲಿ ಆರೋಪಿಯಾಗಿರುವ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ (JDS MLA HD Revanna) ಅವರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಎಚ್.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ತಿರಸ್ಕೃತಗೊಂಡ ಕೆಲವೇ ನಿಮಿಷಗಳಲ್ಲಿ ಎಸ್ಐಟಿ ಅಧಿಕಾರಿಗಳು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ತೆರಳಿ ಅವರ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Environment day: ವಿಶ್ವ ಪರಿಸರ ದಿನಕ್ಕೆ ಜಾಗತಿಕ ತಾಪಮಾನದ ಮೇಲೆ ಪ್ರಬಂಧ ಬರೆಯಿರಿ, 5000 ರೂ. ಬಹುಮಾನ ಪಡೆಯಿರಿ

Vijayapura News: ವಿಜಯಪುರ ಬಿಎಲ್‌ಡಿಇಯಲ್ಲಿ ಕೌಶಲ್ಯಗಳ ಸಂಗಮ, ತಾಂತ್ರಿಕ ಹಬ್ಬದ ಸಡಗರ

Museums Day 2024: ಬೆಂಗಳೂರು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ಮೈಸೂರು ಮ್ಯೂಸಿಯಂಗಳಿಗೆ ಹೊಸ ರೂಪ, ಏನಿದರ ವಿಶೇಷ

Bangalore Mysore Expressway: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಮೊಬೈಲ್ ನಲ್ಲಿ ಮಾತಾಡಿಕೊಂಡು ಡ್ರೈವ್ ಮಾಡಿದರೆ ದಂಡ ಗ್ಯಾರಂಟಿ

ಮುಂದೆ ಏನಾಗಬಹುದು?

ಎಚ್.ಡಿ.ರೇವಣ್ಣ ಅವರನ್ನು ನಿನ್ನೆ (ಮೇ 4, ಶನಿವಾರ) ಎಸ್ಐಟಿ ಕಚೇರಿಗೆ ಕರೆತಂದು ಶಿವಾಜಿನಗರದಲ್ಲಿರುವ ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಮತ್ತೆ ಎಸ್‌ಐಟಿ ಕಚೇರಿಗೆ ಕರೆದುಕೊಂಡು ಬರಲಾಗಿದೆ. ಇಂದು (ಮೇ 5, ಭಾನುವಾರ) ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ಲೈಂಗಿಕ ಕಿರುಕುಳ ಮತ್ತು ಅಪಹರಣ ಆರೋಪಗಳ ತನಿಖೆಗಾಗಿ ಅವರ ಹೆಚ್ಚಿನ ಕಸ್ಟಡಿಗೆ ಎಸ್ಐಟಿ ಅನುಮತಿ ಕೋರಲಿದೆ. ಒಂದು ವೇಳೆ ಕಸ್ಟಡಿಗೆ ನೀಡಿದರೆ ತಕ್ಷಣವೇ ಎಸ್ಐಟಿ ತನಿಖೆ ಆರಂಭಿಸುವ ನಿರೀಕ್ಷೆಯಿದ್ದು, ಒಂದು ವೇಳೆ ಕಸ್ಟಡಿ ನಿರಾಕರಿಸಿದರೆ ಎಚ್.ಡಿ.ರೇವಣ್ಣ ಅವರನ್ನು ನ್ಯಾಯಾಂಗ ಬಂಧನದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗುತ್ತದೆ.

ಎಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಬೆನ್ನಲ್ಲೇ ಎಚ್.ಡಿ.ರೇವಣ್ಣ ಹಾಗೂ ಅವರ ಆಪ್ತ ಸತೀಶ್ ವಿರುದ್ಧ ಮೈಸೂರಿನಲ್ಲಿ ಗುರುವಾರ ರಾತ್ರಿ ಹೊಸ ಪ್ರಕರಣ ದಾಖಲಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿತ್ತು.

ದೇಶದಿಂದ ಪಲಾಯನ ಮಾಡಿರುವ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ಕೋರಿದ್ದರು. ಶುಕ್ರವಾರ ಅವರಿಗೆ ಎರಡನೇ ಲುಕ್ ಔಟ್ ನೋಟಿಸ್ ನೀಡಲಾಗಿದ್ದು, ಸಿಬಿಐ ಕೂಡ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆಯಿದೆ. ಪ್ರಜ್ವಲ್ ರೇವಣ್ಣ ಅವರು ಲೋಕಸಭಾ ಚುನಾವಣೆಯ ಮರುದಿನವೇ ಜರ್ಮನಿಗೆ ಪಲಾಯನ ಮಾಡಿದ್ದರು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ವೀಸಾವನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪವನ್ನು ಪ್ರಜ್ವಲ್ ರೇವಣ್ಣ ಎದುರಿಸುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದ್ದು, ವಿಶೇಷ ತನಿಖಾ ತಂಡ-ಎಸ್‌ಐಟಿ ಶೀಘ್ರದಲ್ಲೇ ಪ್ರಜ್ವಲ್‌ರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯ ಮಾತ್ರವಲ್ಲದೆ, ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಗಿದೆ. ಆರೋಪಿ ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಹಿಡಿಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದೆ. ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ ನೀಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ