logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಬಜೆಟ್ ಅಧಿವೇಶನ; ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಕರ್ನಾಟಕ ಬಜೆಟ್ ಅಧಿವೇಶನ; ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Umesh Kumar S HT Kannada

Feb 29, 2024 01:50 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಎದುರು ಪ್ರತಿಭಟನೆ ನಡೆಸಿದರು.(ಎಡ ಚಿತ್ರ), ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಭಂಗಿ (ಬಲಚಿತ್ರ).

  • ಕರ್ನಾಟಕ ಬಜೆಟ್ ಅಧಿವೇಶನ ಕೊನೆಯ ಹಂತಕ್ಕೆ ಬಂದಿದ್ದು, ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು. ಇದೇ ವೇಳೆ ಅವರು ಬಜೆಟ್‌ನ ಗಾತ್ರ, ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. (ವರದಿ- ಎಚ್. ಮಾರುತಿ, ಬೆಂಗಳೂರು)

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಎದುರು ಪ್ರತಿಭಟನೆ ನಡೆಸಿದರು.(ಎಡ ಚಿತ್ರ), ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಭಂಗಿ (ಬಲಚಿತ್ರ).
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಎದುರು ಪ್ರತಿಭಟನೆ ನಡೆಸಿದರು.(ಎಡ ಚಿತ್ರ), ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಭಂಗಿ (ಬಲಚಿತ್ರ).

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಮಾಡದೆ ಬರೀ ಲೂಟಿ ಹೊಡೆದರು. ಆದರೆ ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕರಾವಳಿಯಲ್ಲಿ ಹೃದಯಾಘಾತದಿಂದಾಗಿ ಇಬ್ಬರ ಸಾವು; ಖೋಟಾ ನೋಟು ಪ್ರಕರಣ ಆರೋಪಿಗಳಿಂದ ಮಹತ್ವದ ಮಾಹಿತಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಅವರು ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುತ್ತಾ ತಮ್ಮ ಸರ್ಕಾರದ ಸಾಧನೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು.

ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದ್ದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ.

ಹಾಗೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

2024-25ನೇ ಆಯವ್ಯಯದಲ್ಲಿ ಒಟ್ಟು ಬಜೆಟ್‌ ಗಾತ್ರ 3,71,343 ಕೋಟಿ ರೂ. ಗಳಾಗಿದ್ದು, ಇದರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ, ಬಂಡವಾಳ ವೆಚ್ಚವಾಗಿದೆ. ಇದು ನಾವು ಅಭಿವೃದ್ಧಿಗೆ ಆದ್ಯತೆ ನೀಡಿರುವುದಕ್ಕೆ ಸಾಕ್ಷಿ. ರಾಜ್ಯದ ಜಿಡಿಪಿ 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು ಎಂದು ವಿವರಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಕರ್ನಾಟಕದಿಂದ 1.40 ಸಾವಿರ ಕೋಟಿ ರೂಪಾಯಿ ಕೇಂದ್ರ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಹೋಗುತ್ತದೆ. 100 ರೂ.ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ ಕೇಂದ್ರದಿಂದ ವಾಪಸ್ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿ ಗೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.

ಬಿಜೆಪಿಗೆ ಕಾಳಜಿ ಎಲ್ಲಿದೆ ?

14 ನೇ ಹಣಕಾಸು ಆಯೋಗದಲ್ಲಿ ಶೇ. 4.7 ಹಾಗೂ 15 ನೇ ಹಣಕಾಸು ಆಯೋಗದಲ್ಲಿ ಶೇ. 3.6 ರಾಜ್ಯಕ್ಕೆ ನಿಗಡಿಯಾಗಿ ಶೇ 1.07 ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು.

ನರೇಂದ್ರ ಮೋದಿಯವರು ಗುಜರಾತ್ ಮುಖ್ಯ ಮಂತ್ರಿಯಾಗಿದ್ದಾಗ ಗುಜರಾತಿನಿಂದ ತೆರಿಗೆ ಸಂಗ್ರಹಿಸಿಸಬೇಡಿ ಎಂದಿದ್ದರು. ನಾವು ಆ ಮಾತು ಹೇಳಿಲ್ಲ ಎಂದು ಲೇವಡಿ ಮಾಡಿದರು. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾಗಿದ್ದು, ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ ಎಂದರು.

ಕಾಂಗ್ರೆಸ್‌ ನ 9 , ಬಿಜೆಪಿಯ 13 ಜನ ಹಾಗೂ ಜೆಡಿಎಸ್‌ ಮೂವರು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಕೆಲವು ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇವರ ಎಲ್ಲ ಸಲಹೆ ಸೂಚನೆಗಳನ್ನು ಸ್ವಾಗತಿಸುತ್ತೇವೆ ಎಂದರು.

ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ವಿರೋಧ ಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದರು.

ಕನ್ನಡಿಗರ ತೆರಿಗೆ ಹಣಕ್ಕೆ ಆಗುತ್ತಿರುವ ದ್ರೋಹ: ಸಿಎಂ

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಮೋದಿ ಮೋದಿ, ಜೈ ಶ್ರೀ ರಾಮ್ ಎಂದು ಕೂಗು ಹಾಕಿದರು. ಆಗ ವಿರೋಧಪಕ್ಷದವರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ನಿಮ್ಮದು ಕೇವಲ ನಿಶ್ಯಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ. ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದೀರಿ. ನಾವು ಜೈ ಸೀತಾ ರಾಮ್ ಎನ್ನುತ್ತೇವೆ ಎಂದು ಮುಖ್ಯ ಮಂತ್ರಿಗಳು ಘೋಷಣೆ ಕೂಗಿದರು.

(ವರದಿ- ಎಚ್. ಮಾರುತಿ, ಬೆಂಗಳೂರು)

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ