logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಬಜೆಟ್ 2024; ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ, ಎಂಎಸ್‌ಪಿ ಖಾತರಿಗೆ ಶಾಸನ, ಸಹಕಾರ ಕ್ಷೇತ್ರಕ್ಕೆ ಕೊಡುಗೆ ಏನೇನು

ಕರ್ನಾಟಕ ಬಜೆಟ್ 2024; ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ, ಎಂಎಸ್‌ಪಿ ಖಾತರಿಗೆ ಶಾಸನ, ಸಹಕಾರ ಕ್ಷೇತ್ರಕ್ಕೆ ಕೊಡುಗೆ ಏನೇನು

Umesh Kumar S HT Kannada

Feb 16, 2024 05:09 PM IST

ಕರ್ನಾಟಕ ಬಜೆಟ್ 2024; ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ, ಎಂಎಸ್‌ಪಿ ಖಾತರಿಗೆ ಶಾಸನ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಫೆ.16) ಘೋಷಿಸಿದರು., ಸಹಕಾರ ಕ್ಷೇತ್ರಕ್ಕೆ ರಾಜ್ಯ ಬಜೆಟ್‌ನ ಕೊಡುಗೆ ಏನೇನು ಎಂಬುದರ ವಿವರ ಈ ವರದಿಯಲ್ಲಿದೆ.

  • ಕರ್ನಾಟಕ ಬಜೆಟ್ 2024 ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದು, ಸಹಕಾರಿ ಬ್ಯಾಂಕುಗಳ ಆರ್ಥಿಕ ಆರೋಗ್ಯ ಕಾಪಾಡಲು ಕ್ರಮ ತೆಗೆದುಕೊಳ್ಳುವುದಾಗಿ ಘೋಷಿಸಿದರು.  ಎಂಎಸ್‌ಪಿ ಖಾತರಿಗೆ ಶಾಸನ ರೂಪಿಸುವುದಾಗಿಯೂ ಹೇಳಿದ ಸಿಎಂ ಸಿದ್ದರಾಮಯ್ಯ ಅವರು ಸಹಕಾರ ಕ್ಷೇತ್ರಕ್ಕೆ ಘೋಷಿಸಿದ ಕೊಡುಗೆ ಏನೇನು. 

ಕರ್ನಾಟಕ ಬಜೆಟ್ 2024; ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ, ಎಂಎಸ್‌ಪಿ ಖಾತರಿಗೆ ಶಾಸನ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಫೆ.16) ಘೋಷಿಸಿದರು., ಸಹಕಾರ ಕ್ಷೇತ್ರಕ್ಕೆ ರಾಜ್ಯ ಬಜೆಟ್‌ನ ಕೊಡುಗೆ ಏನೇನು ಎಂಬುದರ ವಿವರ ಈ ವರದಿಯಲ್ಲಿದೆ.
ಕರ್ನಾಟಕ ಬಜೆಟ್ 2024; ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ, ಎಂಎಸ್‌ಪಿ ಖಾತರಿಗೆ ಶಾಸನ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಫೆ.16) ಘೋಷಿಸಿದರು., ಸಹಕಾರ ಕ್ಷೇತ್ರಕ್ಕೆ ರಾಜ್ಯ ಬಜೆಟ್‌ನ ಕೊಡುಗೆ ಏನೇನು ಎಂಬುದರ ವಿವರ ಈ ವರದಿಯಲ್ಲಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆ.16) ಕರ್ನಾಟಕ ಬಜೆಟ್ 2024 ಮಂಡಿಸಿದ್ದು, ಸಹಕಾರ ಬ್ಯಾಂಕ್‌ ಆರ್ಥಿಕ ಆರೋಗ್ಯಕ್ಕೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಅಷ್ಟೇ ಅಲ್ಲ, ಎಂಎಸ್‌ಪಿ ಖಾತರಿಗೆ ಶಾಸನ ರೂಪಿಸುವುದಕ್ಕೂ ಗಮನಹರಿಸುವುದಾಗಿ ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ. 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3 ರ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿಯಿಂದ 15 ಲಕ್ಷ ರೂಪಾಯಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಭಾಷಣ ಓದುತ್ತ ವಿವರಿಸಿದರು.

ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆ ಕಾಪಾಡಲು ಕ್ರಮ

ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡುವುದಕ್ಕಾಗಿ ಎರಡು ಪ್ರಮುಖ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

1) ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ 50,000 ರೂಪಾಯಿ ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಈ ಯೋಜನೆಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

2) ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಸುಮಾರು 57,000 ರೈತರಿಗೆ ಅನುಕೂಲವಾಗಲಿದೆ. ಇದರಿಂದ ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂಪಾಯಿ ಸಾಲ ಮರುಪಾವತಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ. ಈ ಉದ್ದೇಶಕ್ಕಾಗಿ 450 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಸಿಎಂ ತಿಳಿಸಿದರು.

ಅಡಕೆ, ಈರುಳ್ಳಿ, ದ್ರಾಕ್ಷಿಗೂ ಬೆಂಬಲ ಬೆಲೆಗೆ ಆಗ್ರಹ, ಎಂಎಸ್‌ಪಿ ಖಾತರಿಗೆ ಶಾಸನ ಎಂದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 16 ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ. ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್‌ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸುವುದಾಗಿ ಅವರು ತಿಳಿಸಿದರು.

ಬೆಂಬಲ ಬೆಲೆ ಯೋಜನೆ ಜಾರಿಗೆ ಶಾಸನಾತ್ಮಕ ಬೆಂಬಲ ನೀಡಲು ಕ್ರಮವಹಿಸಲಾಗುವುದು ಎಂದು ಇದೇ ವೇಳೆ ಅವರು ಹೇಳಿದರು.

ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ತರಲು ಅಧಿನಿಯಮಗಳಿಗೆ ತಿದ್ದುಪಡಿ ತರುವುದಾಗಿಯೂ ಸಿಎಂ ಘೋಷಿಸಿದರು.

ಸಹಕಾರ ವಲಯದ ಮೂಲಕ ಹಲವು ಉಪಕ್ರಮ

ಕೃಷಿ ಉತ್ಪನ್ನ ಸಂಸ್ಕರಣೆ, ಮಾರುಕಟ್ಟೆ ಸಂಪರ್ಕ ಮತ್ತು ಮೌಲ್ಯವರ್ಧನೆಯಲ್ಲಿಯೂ ಸಹಕಾರ ವಲಯವು ಪ್ರಮುಖ ಪಾತ್ರ ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷಿ ಮಾರಾಟ ಇಲಾಖೆಯ ಮೂಲಕ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ಹೇಳಿದರು.

1) ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ ಹಾಗೂ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ ತಲಾ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳ ನಿರ್ಮಾಣ.

2) ರಾಯಚೂರಿನಲ್ಲಿ ಅಂದಾಜು 25 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ.

3) ರಾಣೆಬೆನ್ನೂರಿನಲ್ಲಿ 112 ಕೋಟಿ ರೂ. ವೆಚ್ಚದಲ್ಲಿ 222 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ.

4) ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಮಾರುಕಟ್ಟೆಯಲ್ಲಿ 35 ಕೋಟಿ ರೂಪಾಯಿ ವೆಚ್ಚದ ಅತ್ಯಾಧುನಿಕ ಕೃಷಿ ಸಂಕೀರ್ಣ

5) ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲ ಕಾರ್ಯ ಚಟುವಟಿಕೆಗಳ ಡಿಜಿಟಲೀಕರಣಕ್ಕೆ 10 ಕೋಟಿ ರೂ.

6) ಬೆಂಗಳೂರಿನ ದಾಸನಪುರ, ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಳಗಾವಿಯ ಮಾರುಕಟ್ಟೆಗಳನ್ನು ಶೂನ್ಯ ತ್ಯಾಜ್ಯ ತರಕಾರಿ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಘಟಕ (Bio CNG Plant) ಸ್ಥಾಪನೆ.

7) ಎಪಿಎಂಸಿ ಗಳಲ್ಲಿ ಪಿಪಿಪಿ ಮಾದರಿಯಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆ.

ರೈತರ ಉತ್ಪನ್ನಗಳಿಗೆ ಉತ್ತಮ ಆದಾಯ ನೀಡಲು ಎಪಿಎಂಸಿಗಳ ಬಲವೃದ್ಧಿ

ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಆದಾಯ ಗಳಿಸಲು ನೆರವಾಗಲು ಎಪಿಎಂಸಿಗಳ ಬಲವೃದ್ಧಿಗಾಗಿ ಈ ಕ್ರಮಗಳನ್ನು ಪ್ರಸ್ತಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

1) ರೈತ ವಿರೋಧಿ ಎ.ಪಿ.ಎಂ.ಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ವಿಧೇಯಕಕ್ಕೆ ವಿಧಾನ ಸಭೆಯ ಅಂಗೀಕಾರ ಪಡೆಯಲಾಗಿದ್ದು, ವಿಧಾನ ಪರಿಷತ್ತಿನಲ್ಲಿ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ಸದರಿ ವಿಧೇಯಕಕ್ಕೆ ಶೀಘ್ರದಲ್ಲಿಯೇ ಅಂಗೀಕಾರ ಪಡೆಯಲಾಗುತ್ತದೆ.

2) ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಗೆಯನ್ನು ಪಡೆಯುವ ಮೂಲಕ ಮಾರುಕಟ್ಟೆ ಅಭಿವೃದ್ಧಿ ಸಹಾಯ ನಿಧಿ ಸ್ಥಾಪಿಸಲು ಕಾನೂನು ರಚಿಸಲಾಗುವುದು.

3) ತೂಕದಲ್ಲಿ ಆಗುತ್ತಿರುವ ಮೋಸ ತಡೆಯಲು ಮತ್ತು ಕಬ್ಬರು ಬೆಳೆಗಾರರ ಹಿತ ಕಾಪಾಡಲು ಎಪಿಎಂಸಿಗಳ ಮೂಲಕ ಎಲ್ಲ ಸಕ್ಕರೆ ಕಾರ್ಖಾನೆಗಳ ಬಳಿ ವೈ ಬ್ರಿಜ್ (Weigh Bridge) ಸ್ಥಾಪಿಸಲಾಗುತ್ತದೆ.

ಕರ್ನಾಟಕ ಉಗ್ರಾಣ ನಿಗಮಕ್ಕೆ ಏನು ಕೊಡುಗೆ

1) ಕರ್ನಾಟಕ ಉಗ್ರಾಣ ನಿಗಮವು ತೀವ್ರ ಹಣಕಾಸು ಹಾಗೂ ಆಡಳಿತಾತ್ಮಕ ಬಿಕ್ಕಟ್ಟು ಎದುರಿಸುತ್ತಿದೆ. ನಾವು ಅಧಿಕಾರಕ್ಕೆ ಬಂದ ನಂತರ 4.54 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 76 ಗೋದಾಮುಗಳ ನಿರ್ಮಾಣ ಪೂರ್ಣಗೊಳಿಸಲು 376 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಬಳಕೆಯಾಗದೇ ಇರುವ ಉಗ್ರಾಣಗಳ ಸಾಮರ್ಥ್ಯ ಬಳಸಿ ಪಿಪಿಪಿ ಮಾದರಿಯಲ್ಲಿ ಶೀತಲಗೃಹಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಇದೇ ವೇಳೆ ಘೋಷಿಸಿದರು.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ