logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಬಜೆಟ್ 2024; ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆ; ತೋಟಗಾರಿಕೆಗೆ ಇನ್ನೇನಿದೆ..

ಕರ್ನಾಟಕ ಬಜೆಟ್ 2024; ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆ; ತೋಟಗಾರಿಕೆಗೆ ಇನ್ನೇನಿದೆ..

Umesh Kumar S HT Kannada

Feb 16, 2024 03:07 PM IST

ಕರ್ನಾಟಕ ಬಜೆಟ್ 2024; ರೇಷ್ಮೆ ಮಾರುಕಟ್ಟೆ ನವೀಕರಣ, ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿ ಹಲವು ಹೊಸ ಉಪಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ತೋಟಗಾರಿಕೆಗೆ ಇನ್ನೇನಿದೆ ಹೊಸ ಯೋಜನೆಗಳು. ಅವುಗಳ ವಿವರ ಈ ವರದಿಯಲ್ಲಿದೆ.

  • ಕರ್ನಾಟಕ ಬಜೆಟ್ 2024 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೋಟಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿ ಹಲವು ಯೋಜನೆಗಳನ್ನು ಪ್ರಕಟಿಸಿದರು. ಇದರಲ್ಲಿ ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆಗಳು ಸೇರಿಕೊಂಡಿವೆ. ತೋಟಗಾರಿಕೆಗೆ ಇನ್ನೇನಿದೆ ಎಂಬುದರ ವಿವರ ಇಲ್ಲಿದೆ.

ಕರ್ನಾಟಕ ಬಜೆಟ್ 2024; ರೇಷ್ಮೆ ಮಾರುಕಟ್ಟೆ ನವೀಕರಣ, ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿ ಹಲವು ಹೊಸ ಉಪಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ತೋಟಗಾರಿಕೆಗೆ ಇನ್ನೇನಿದೆ ಹೊಸ ಯೋಜನೆಗಳು. ಅವುಗಳ ವಿವರ ಈ ವರದಿಯಲ್ಲಿದೆ.
ಕರ್ನಾಟಕ ಬಜೆಟ್ 2024; ರೇಷ್ಮೆ ಮಾರುಕಟ್ಟೆ ನವೀಕರಣ, ಸ್ಪೈಸ್ ಪಾರ್ಕ್‌, ಕಿಸಾನ್ ಮಾಲ್‌, ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿ ಹಲವು ಹೊಸ ಉಪಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ತೋಟಗಾರಿಕೆಗೆ ಇನ್ನೇನಿದೆ ಹೊಸ ಯೋಜನೆಗಳು. ಅವುಗಳ ವಿವರ ಈ ವರದಿಯಲ್ಲಿದೆ.

ಬೆಂಗಳೂರು: ತೋಟಗಾರಿಕೆ ಕ್ಷೇತ್ರಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ರಾಜ್ಯ ಬಜೆಟ್‌ (ಕರ್ನಾಟಕ ಬಜೆಟ್ 2024) ನಲ್ಲಿ ವಿವಿಧ ಕೊಡುಗೆಗಳನ್ನು ಘೋಷಿಸಿದರು. ಇದರಲ್ಲಿ ಚಿಕ್ಕಮಗಳೂರಿನ ಸ್ಪೈಸ್ ಪಾರ್ಕ್‌, ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು, ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ತೆರೆಯುವುದಾಗಿ ಸಿದ್ದರಾಮಯ್ಯ ಹೇಳಿದರು.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ಕರಾವಳಿಯಲ್ಲಿ ಹೃದಯಾಘಾತದಿಂದಾಗಿ ಇಬ್ಬರ ಸಾವು; ಖೋಟಾ ನೋಟು ಪ್ರಕರಣ ಆರೋಪಿಗಳಿಂದ ಮಹತ್ವದ ಮಾಹಿತಿ

ಕೊಚ್ಚಿಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಬೆಂಗಳೂರು ವಿಮಾನನಿಲ್ದಾಣದಲ್ಲಿ ತುರ್ತುಭೂಸ್ಪರ್ಶ, 150 ಪ್ರಯಾಣಿಕರು ಸೇಫ್

ಅವರು ಇಂದು (ಫೆ.16) ವಿಧಾನಸಭೆಯಲ್ಲಿ ಬಜೆಟ್ ಭಾಷಣ ಮಾಡುತ್ತ, ಈ ವಿಚಾರಗಳನ್ನು ತಿಳಿಸಿದರು. ತೋಟಗಾರಿಕೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್‌ಗಳನ್ನು ಸ್ಥಾಪಿಸಲಾಗುವುದು ಎಂದು ಇದೇ ವೇಳೆ ಹೇಳಿದರು.

ಕರ್ನಾಟಕದಲ್ಲಿ ಸಾಂಬಾರು ಪದಾರ್ಥ ಬೆಳೆಗಳನ್ನು ಬೆಳೆಯುವ ರೈತರನ್ನು ಪ್ರೋತ್ಸಾಹಿಸಲು ಹಾಗೂ ಬೆಳೆಗಳ ರಫ್ತನ್ನು ಉತ್ತೇಜಿಸಲು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್‌ (Spice Park) ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ತೋಟಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿ ಕರ್ನಾಟಕ ಬಜೆಟ್ 2024 ರಲ್ಲಿ ಉಲ್ಲೇಖವಾದ 5 ಅಂಶಗಳು

1) ಪುಷ್ಪ ಮಾರುಕಟ್ಟೆ: ಕರ್ನಾಟಕಲ್ಲಿ 40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಪುಷ್ಪ ಬೆಳೆಗಳ ಮಾರಾಟ ಮತ್ತು ರಫ್ತನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಇದು ಅನುಷ್ಠಾನವಾಗಲಿದೆ.

2) ಸಂಸ್ಕರಣಾ ಘಟಕ: ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ರಫ್ತಿನ ಪ್ರಮಾಣ ಹೆಚ್ಚಿಸಲು ಕೊಯ್ಲೋತ್ತರ ನಿರ್ವಹಣಾ ಕೇಂದ್ರ (Packhouse) ಹಾಗೂ ಮೌಲ್ಯವರ್ಧನ ಸಂಸ್ಕರಣಾ ಘಟಕಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

3) ಅಡಕೆ ರೋಗ ಸಂಶೋಧನೆಗೆ ಕ್ರಮ: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕದಲ್ಲಿ ಅಡಕೆ ಬೆಳೆಯಲ್ಲಿ ಕಂಡು ಬರುವ ಮಾರಕ ರೋಗಗಳನ್ನು ನಿಯಂತ್ರಿಸಲು ಪೂರಕವಾದ ಸಂಶೋಧನೆ ಹಾಗೂ ಸಸ್ಯ ಸಂರಕ್ಷಣೆ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು.

4) ಕಾರ್ಬನ್ ಕ್ರೆಡಿಟ್‌: ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಇಂಗಾಲವನ್ನು ಹಿಡಿದಿಟ್ಟುಕೊಳ್ಳುವ ಬೆಳೆಗಳನ್ನು ಗುರುತಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ Carbon Credit ರೂಪದಲ್ಲಿ ಮಾರಾಟ ಮಾಡುವ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಲು ಅನುಕೂಲವಾಗುವಂತೆ ಉತ್ತೇಜನ ನೀಡಲಾಗುವುದು.

5) ತೋಟಗಾರಿಕಾ ಕಾಲೇಜು: ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು.

ರಾಮನಗರ, ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನವೀಕರಣ

ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ನವೀಕರಣ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಲದ ಬಜೆಟ್‌ನಲ್ಲಿ ಘೋಷಿಸಿದರು.

ಇದರ ಪ್ರಕಾರ, ರಾಮನಗರ ಮತ್ತು ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.\

ಇನ್ನೊಂದೆಡೆ, ರೇಷ್ಮೆ ನೂಲು ಬಿಚ್ಚಾಣಿಕೆದಾರರು ಉತ್ಪಾದಿಸಿದ ಕಚ್ಚಾ ರೇಷ್ಮೆಗೆ ಪ್ರೋತ್ಸಾಹಧನವನ್ನು ನೀಡಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ವಾರ್ಷಿಕ 12 ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಅವರು ಹೇಳಿದರು.

ಅದೇ ರೀತಿ, ಬೈವೋಲ್ಟೀನ್ ರೇಷ್ಮೆಗೂಡುಗಳಿಗೆ ಪ್ರಸ್ತುತ ನೀಡುತ್ತಿರುವ ಪ್ರೋತ್ಸಾಹಧನವನ್ನು ಪ್ರತಿ ಕಿಲೋಗೆ ಈಗ ನೀಡುತ್ತಿರುವ10 ರೂಪಾಯಿಯನ್ನು 30 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಸಿಎಂ ಹೇಳಿದರು.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ