ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ; ಮತದಾನ ಇಂದು, ಕಣದಲ್ಲಿದ್ದಾರೆ 9 ಅಭ್ಯರ್ಥಿಗಳು, ಫೆ.23ರಂದು ಫಲಿತಾಂಶ
Feb 16, 2024 08:22 AM IST
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು (ಫೆ.16) ನಡೆಯುತ್ತಿದೆ. 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.23ರಂದು ಫಲಿತಾಂಶ ಪ್ರಕಟವಾಗಲಿದೆ.
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಮತದಾನ ಇಂದು ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಕಾಂಗ್ರೆಸ್ ಅಭ್ಯರ್ಥಿ ಸೇರಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಫೆ.23ರಂದು ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು: ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಇಂದು (ಫೆ.16) ಮತದಾನ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 19,172 ಮತದಾರರು ಇದ್ದಾರೆ. ಫೆ.23ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು ಶಿಕ್ಷಕರಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರಹಾಗೂ ರಾಮನಗರ ಜಿಲ್ಲೆಗಳ ಒಟ್ಟು 58 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆಮತದಾನ ನಡೆಯಲಿದೆ. ಪ್ರತಿ ಮತಗಟ್ಟೆಗೆ 4 ಜನರಂತೆ 230ಕ್ಕೂ ಹೆಚ್ಚು ಸಿಬ್ಬಂದಿ ಚುನಾವಣಾ ಕೆಲಸಕ್ಕೆ ನಿಯೋಜಿತರಾಗಿದ್ದಾರೆ. ಇದಲ್ಲದೆ ಕೇಂದ್ರ ಚುನಾವಣಾ ಅಯೋಗ ನಿಯೋಜಿಸಿದ ವಿಶೇಷ ಸಿಬ್ಬಂದಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಹಳೆಯ ಬ್ಯಾಲೆಟ್ ಪೇಪರ್ ಮಾದರಿ ಮತದಾನ
ವಿಧಾನಪರಿಷತ್ತಿನ ಬೆಂಗಳೂರು ಶಿಕ್ಷಕರಕ್ಷೇತ್ರದ ಉಪಚುನಾವಣೆಗೆ ಹಳೆಯ ಬ್ಯಾಲೆಟ್ ಪೇಪರ್ ಮಾದರಿ ಮತದಾನ ನಡೆಯುತ್ತಿದೆ. ಇವಿಎಂ ಯಂತ್ರವನ್ನು ಬಳಸಲಾಗುತ್ತಿಲ್ಲ. ಪ್ರಾಶಸ್ತ್ಯ ಮಾದರಿಯ ಮತದಾನವಾದ ಕಾರಣ ಹಳೆಯ ಪದ್ಧತಿಯನ್ನೇ ಅನುಸರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ಮತಗಟ್ಟೆಗಳಲ್ಲಿ ಮತದಾರರು ಸರದಿ ನಿಂತುಕೊಂಡಿದ್ದು, ಮತದಾನಕ್ಕೆ ಎಲ್ಲ ಸಿದ್ಧತೆಗಳೂ ಆಗಿವೆ. ಬೆಂಗಳೂರು ವಲಯ ಪ್ರಾದೇಶಿಕ ಆಯುಕ್ತರು ಹಾಗೂ ಬಿಬಿಎಂಪಿ ಮುಖ್ಯಆಯುಕ್ತರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ನಡುವೆ, ಮತದಾನಕ್ಕೆ 48 ಗಂಟೆ ಮುಂಚಿತವಾಗಿ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಬೆಂಗಳೂರು ಕ್ಷೇತ್ರದಿಂದಬಿಜೆಪಿಯಿಂದ ಆಯ್ಕೆಯಾದ್ದ ಪುಟ್ಟಣ ಈ ಬಾರಿ ಕಾಂಗ್ರೆಸ್ ಸೇರಿದ್ದು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ 2023ರ ಮಾ.16 ರಿಂದಈ ಸ್ಥಾನ ತೆರವುಗೊಂಡಿತ್ತು. ಅದಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ. ಗೆದ್ದವರ ಅವಧಿ 2026ರ ನ.11 ರವರೆಗೆಇರಲಿದೆ. ಪುಟ್ಟಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಎನ್ ಡಿಎ ಮೈತ್ರಿ ಕೂಟದಅಭ್ಯರ್ಥಿಯಾಗಿ ವಕೀಲ ಎ.ಪಿ. ರಂಗನಾಥ್ ಸ್ಪರ್ಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ದೂರು
ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆ-2024 ಕ್ಕೆ ಸಂಬಂಧಿಸಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಮತದಾರರಿಗೆ ಉಡುಗೊರೆ ಇತ್ಯಾದಿ ಆಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಇ-ಮೇಲ್ ದೂರು ರವಾನೆಯಾಗಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಆಯೋಗದ ಮೂಲಗಳು ತಿಳಿಸಿವೆ.
ದೂರು ನೀಡಿದವರು ಯಾರು ಎಂಬುದು ಬಹಿರಂಗವಾಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ತನಿಖೆ ನಡೆಸಿದ್ದು ಕ್ರಮ ಜರುಗಿಸುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ.
ಹೈಕೋರ್ಟ್ ಮೆಟ್ಟಿಲೇರಿತ್ತು ಮದ್ಯ ಮಾರಾಟ ನಿಷೇಧ ಪ್ರಕರಣ
ವಿಧಾನಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿಮತದಾನದ ದಿನಕ್ಕೂ ಮುಂಚಿತವಾಗಿ 48 ಗಂಟೆ ಅವಧಿಯಲ್ಲಿ ಮದ್ಯಮಾರಾಟ ನಿಷೇಧಿಸಿದ್ದ ಜಿಲ್ಲಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಜಿಲ್ಲಾಧಿಕಾರಿಗಳ ಆದೇಶ ಮಾರ್ಪಡಿಸಿಮತದಾನದ ದಿನ ಮತ್ತು ಮತಎಣಿಕೆಯ ದಿನಕ್ಕೆ ಸೀಮಿತವಾಗಿ ಮದ್ಯ ಮಾರಾಟ ನಿಷೇಧಿಸಿ ಆದೇಶ ನೀಡಿತ್ತು. ರಾಜ್ಯ ಸರ್ಕಾರ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು. ಇದರ ವಿಚಾರಣೆಯ ನಡೆಸಿದನ್ಯಾಯಮೂರ್ತಿ ಕೆ. ಸೋಮಶೇಖರ್ ನೇತೃತ್ವದವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿ, ಜಿಲ್ಲಾಧಿಕಾರಿಗಳಕ್ರಮ ಎತ್ತಿಹಿಡಿಯಿತು.
ವಿಚಾರಣೆವೇಳೆ ಸರ್ಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಅಡ್ವಕೆಟ್ ಜನರಲ್ ಪ್ರತಿಮಾ ಹೊನ್ನಾಪುರ, ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 153(ಸಿ) ಪ್ರಕಾರ ಯಾವುದೇಚುನಾಚಣೆ ಘೋಷಣೆ ಆದರೂ, ಮತದಾನ ದಿನಕ್ಕೆ ಮುನ್ನ 48 ಗಂಟೆಗಳ ಕಾಲ ಮದ್ಯ ಮಾರಾಟಕ್ಕೆನಿರ್ಬಂಧ ವಿಧಿಸಬೇಕು ಎಂದು ತಿಳಿಸಲಾಗಿದೆ. ಅದರಂತೆ, ಜಿಲ್ಲಾಧಿಕಾರಿ ನೀಡಿದ ಆದೇಶದಲ್ಲಿಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ವಿವರಿಸಿದರು. ಅಲ್ಲದೆ, ಏಕಸದಸ್ಯ ನ್ಯಾಯಪೀಠ ಮದ್ಯ ಮಾರಾಟವನ್ನು ಒಂದೇದಿನಕ್ಕೆ ಸೀಮಿತಗೊಳಿಸಿರುವ ಆದೇಶವುಕಾನೂನಿಗೆ ವಿರುದ್ಧವಾಗಿದೆ. ಮದ್ಯ ಮಾರಾಟ ಮಾಡುವುದುಮೂಲಭೂತ ಹಕ್ಕು ಅಲ್ಲ ಎಂದು ಪ್ರತಿಪಾದಿಸಿದ್ದರು.
(This copy first appeared in Hindustan Times Kannada website. To read more like this please logon to kannada.hindustantimes.com)