logo
ಕನ್ನಡ ಸುದ್ದಿ  /  ಕರ್ನಾಟಕ  /  ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

Raghavendra M Y HT Kannada

May 17, 2024 07:55 PM IST

google News

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡುವ ಸೂಚನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

    • ಎಸ್‌ಎಸ್‌ಎಲ್‌ಸಿಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಿಕೆ ಅವೈಜ್ಞಾನಿಕ ಎಂದು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 
ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡುವ ಸೂಚನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡುವ ಸೂಚನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ (SSLC Grace Marks 2024) ನೀಡದಿರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ (Karnataka Govt) ಕೈಗೊಂಡಿದೆ. ಕಾನೂನು ಸುವ್ಯವಸ್ಥೆ, ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ ಹಾಗೂ ರಸ ಗೊಬ್ಬರ ವಿತರಣೆ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳನ್ನು ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು (ಮೇ 17, ಶುಕ್ರವಾರ) ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಸೇರಿದಂತೆ ಅನೇಕ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಗ್ರೇಸ್ ಮಾರ್ಕ್ಸ್ ಕೊಟ್ಟಿರುವುದಕ್ಕೆ ಶೈಕ್ಷಣಿಕ ವಲಯ ಮತ್ತು ಶಿಕ್ಷಣ ತಜ್ಞರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಕೇಳಿಬರುತ್ತಿದ್ದು, ಗ್ರೇಸ್ ಮಾರ್ಕ್ಸ್ ಕೊಟ್ಟಿರುವುದು ಅಪರಾಧ ಎಂದು ಬಿಂಬಿಸಲಾಗುತ್ತಿದೆ. ಗ್ರೇಸ್ ಮಾರ್ಕ್ಸ್ ನೀಡಿಕೆ ಅವೈಜ್ಞಾನಿಕ ಎಂದು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರು ಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಅನ್ನು ಕೊಡುವ ನಿರ್ಧಾರ ಯಾರದ್ದು? ಶಿಕ್ಷಣದ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ತಿಳಿದು ಬಂದಿದೆ. ನಂತರ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸುವಾಗ ಪ್ರತಿ ವರ್ಷ ಶೇ. 5ರಷ್ಟು ಗ್ರೇಸ್‌ ಮಾರ್ಕ್ಸ್‌ ನೀಡುತ್ತಾ ಬರಲಾಗಿದೆ. ಕೋವಿಡ್ ಸಂದರ್ಭದಲ್ಲಿ ಶೇ. 10ಕ್ಕೆ ಏರಿಕೆ ಮಾಡಲಾಗಿತ್ತು. ಈ ವರ್ಷ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಶೇ. 20 ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಡಲಾಗಿದೆ.

ಮುಂದಿನ ವರ್ಷ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ-ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶೇ. 20 ರಷ್ಟು ಗ್ರೇಸ್‌ ಮಾರ್ಕ್ಸ್‌ ಈ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಮುಂದಿನ ವರ್ಷದಿಂದ ಈ ಗ್ರೇಸ್‌ ಮಾರ್ಕ್ಸ್‌ ಪದ್ಧತಿ ಮುಂದುವರಿಯುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಮುಂದಿನ 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡುವುದಾಗಿಯೂ ಅವರು ಸಭೆಗೆ ತಿಳಿಸಿದ್ದಾರೆ.

ಗ್ರೇಸ್‌ ಮಾರ್ಕ್ಸ್‌ ಕೃಪೆಯಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 2022-23 ರಲ್ಲಿ ಶೇ. 83.89 ರಷ್ಟು ಫಲಿತಾಂಶ ಬಂದಿತ್ತು. 2023-24 ರಲ್ಲಿ ಕೇವಲ ಶೇ.73.40 ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 10.49 ರಷ್ಟು ಫಲಿತಾಂಶ ಕಡಿಮೆಯಾಗಿದೆ. ವಾಸ್ತವದಲ್ಲಿ ಈ ವರ್ಷ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಶೇ. 20 ರಷ್ಟು ಗ್ರೇಸ್ ಮಾರ್ಕ್ಸ್‌ ಕೊಟ್ಟಿದ್ದರಿಂದ ಹೆಚ್ಚುವರಿಯಾಗಿ 1.70 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ವೆಬ್‌ ಕಾಸ್ಟಿಂಗ್‌ ಅಡಿಯಲ್ಲಿ ನಡೆದ ಪರೀಕ್ಷೆ

ಇದೇ ಮೊದಲ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಕೊಠಡಿಗಳ ದೃಶ್ಯಗಳನ್ನು ವೀಕ್ಷಿಸಲು ಜಿಲ್ಲಾ ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದೇ ಕಾರಣಕ್ಕೆ ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ 30ರಷ್ಟು ಕಡಿಮೆಯಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ