logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Umesh Kumar S HT Kannada

Feb 07, 2024 09:43 AM IST

google News

ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು (ಫೆ.7) ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಿಸಿದ್ದಾರೆ.

  • ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಯನ್ನು ಬೆಂಗಳೂರಿನಲ್ಲಿ ಇಂದು (ಫೆ.7) ನಡೆಸಲಿದೆ. ವಿಧಾನಸೌಧ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ಶಾಸಕರ ಜೊತೆಗೆ ಜೆಡಿಎಸ್‌ ಶಾಸಕರೂ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. 

ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು (ಫೆ.7) ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಿಸಿದ್ದಾರೆ.
ಕರ್ನಾಟಕದ ಬರಕ್ಕೆ ಸ್ಪಂದಿಸದೇ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು (ಫೆ.7) ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಘೋಷಿಸಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ವ್ಯಯಿಸುತ್ತಿದೆ. ರಾಜ್ಯದ ಬರ ಪರಿಸ್ಥಿತಿಗೆ ಸ್ಪಂದಿಸದೇ ಇರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಶಾಸಕರು ಇಂದು (ಫೆ.7) ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ದೆಹಲಿಯಲ್ಲಿ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ಶುರುಮಾಡುವ 11 ಗಂಟೆ ಹೊತ್ತಿಗೆ ಬೆಂಗಳೂರಿನಲ್ಲಿ ವಿಧಾನಸೌಧದ ಆವರಣದಲ್ಲಿ ಬಿಜೆಪಿ- ಜೆಡಿಎಸ್‌ ಪ್ರತಿಭಟನೆ ನಡೆಯಲಿದೆ.

“ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆವಿಗೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಫೆಬ್ರವರಿ 7 ರ ಬುಧವಾರ ನಾಳೆ ಬೆಳಗ್ಗೆ 11 ಗಂಟೆಗೆ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು" ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ ವಿಜಯೇಂದ್ರ ನಿನ್ನೆ (ಫೆ.6) ಟ್ವೀಟ್ ಮಾಡಿದ್ದರು.

ಕರ್ನಾಟಕ ಸರ್ಕಾರಿ ಪ್ರಾಯೋಜಿತ ಕಾಂಗ್ರೆಸ್ಸಿಗರ ಪ್ರತಿಭಟನೆಯನ್ನು ಟೀಕಿಸಿದ ಬಿಜೆಪಿ

ಕರ್ನಾಟಕ ಸರ್ಕಾರದ ದುಡ್ಡಿನಲ್ಲಿ ಅಂದರೆ ತೆರಿಗೆದಾರರ ದುಡ್ಡು ವ್ಯಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

ಕರ್ನಾಟಕದ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ ಎಂದು ಟೀಕಿಸಿ ಬಿಜೆಪಿ ಟ್ವೀಟ್ ಮಾಡಿದೆ.

ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್‌ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು ಎಂದೂ ಅದು ವ್ಯಂಗ್ಯವಾಡಿದೆ.

ಯುಪಿಎ ಅವಧಿಗಿಂತ ಮೂರುವರೆಪಟ್ಟು ಅನುದಾನ ಬಿಡುಗಡೆಯಾಗಿದೆ - ಮಾಜಿ ಡಿಸಿಎಂ

ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂದು ನಂಬಿರುವ ಮಹಾನ್‌ ಸುಳ್ಳುಗಾರ ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಯುಪಿಎ ಅವಧಿಗಿಂತ ಮೂರುವರೆಪಟ್ಟು ಅನುದಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಬಿಡುಗಡೆ ಮಾಡಿದೆ. ಯುಪಿಎ ಅವಧಿಯಲ್ಲಿ ಕರ್ನಾಟಕ್ಕೆ ಮೋಸ ಮಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನು 1 ಸೀಟ್‌ಗೆ ತಂದು ನಿಲ್ಲಿಸಿದ್ದಕ್ಕಾಗಿ "ಚಲೋ 10, ಜನಪಥ್‌" ಚಳವಳಿ ಮಾಡಿದರೆ ಅರ್ಥಪೂರ್ಣವಾಗಿರಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ ನಾರಾಯಣ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

ರೈತ ವಿರೋಧಿ ನೀತಿ ಧೋರಣೆಯನ್ನು ಅನುಸರಿಸುತ್ತಿರುವ ಕಾಂಗ್ರೆಸ್‌ ಸರ್ಕಾರವು ಹಾಲು ಉತ್ಪಾದಕರಿಗೆ ಬಾಕಿ ಇರುವ ಸಬ್ಸಿಡಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಂಗಳವಾರ ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಿತು.

ನಿನ್ನೆ ಬೆಂಗಳೂರಿನಲ್ಲಿ ರೈತ ಪ್ರತಿಭಟನೆಯೂ ನಡೆದಿತ್ತು. ವಿವಿಧ ಬೇಡಿಕೆ ಈಡೇರಿಸುವಂತೆ ರೈತರು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ