logo
ಕನ್ನಡ ಸುದ್ದಿ  /  ಕರ್ನಾಟಕ  /  ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಸಿಸಿಬಿ ಪೊಲೀಸರಿಂದ ಬಂಧನ

ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಸಿಸಿಬಿ ಪೊಲೀಸರಿಂದ ಬಂಧನ

HT Kannada Desk HT Kannada

Aug 12, 2023 02:15 PM IST

google News

ಪುನೀತ್‌ ಕೆರೆಹಳ್ಳಿ

    • ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖ್ಯಸ್ಥ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಪುನೀತ್‌ ಹಲವು ವರ್ಷಗಳಿಂದ ಗೋ ರಕ್ಷಣೆ, ಧರ್ಮದ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುತ್ತಿದ್ದರು ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ. 
ಪುನೀತ್‌ ಕೆರೆಹಳ್ಳಿ
ಪುನೀತ್‌ ಕೆರೆಹಳ್ಳಿ

ಬೆಂಗಳೂರು: ಬಲಪಂಥೀಯ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಮುಖ್ಯಸ್ಥ ಪುನೀತ್‌ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಬೆಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಇಂದು ಬೆಳಿಗ್ಗೆ (ಆಗಸ್ಟ್‌ 12) ಬಂಧಿಸಿದ್ದಾರೆ.

32 ವರ್ಷದ ಪುನೀತ್‌ ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನ ಜಿಲ್ಲೆಯವನು. ಈತ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ.

ಸುಲಿಗೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗಿದ್ದಕ್ಕಾಗಿ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ʼಪುನೀತ್‌ ಗೋಹತ್ಯೆ ಹಾಗೂ ಗೋ ಸಾಗಟ ಮಾಡುವವರನ್ನು ಗುರಿಯಾಗಿಸಿಕೊಂಡು ವ್ಯಾಪಾರಸ್ಥರಿಗೆ ಬೆದರಿಕೆ ಹಾಕುತ್ತಿದ್ದರು. ಆ ಮೂಲಕ ಶಾಂತಿ ಮತ್ತು ಕೋಮು ಸೌಹಾರ್ದತೆಯ ಉಲ್ಲಂಘನೆ ಮಾಡುತ್ತಿದ್ದರು. ಇದು ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಆ ಕಾರಣಕ್ಕೆ ಅವರ ಮೇಲೆ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸಲಾಗಿದೆʼ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

2013 ರಿಂದ ಇಲ್ಲಿಯವರೆಗೆ ಅವರ ವಿರುದ್ಧ 10 ಪ್ರಕರಣಗಳು ದಾಖಲಾಗಿವೆ.

ಗೂಂಡಾ ಕಾಯ್ದೆಯು ಕಾಳಧನಿಕರು, ಮಾದಕವಸ್ತುಗಳಿಗೆ ಸಂಬಂಧಿಸಿದ ಅಪರಾಧಿಗಳು, ಜೂಜುಕೋರರು, ಗೂಂಡಾಗಳು, ಸಾರ್ವಜನಿಕ ಸುವ್ಯವಸ್ಥೆಗೆ ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವ ಅವಕಾಶವನ್ನು ನೀಡುತ್ತದೆ. ಇಂತಹವರ ವಿರುದ್ಧ ಈ ಕಾಯ್ದೆಯ ಮೂಲಕ ಕ್ರಮ ಕೈಗೊಳ್ಳಬಹುದಾಗಿದೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ