logo
ಕನ್ನಡ ಸುದ್ದಿ  /  ಕರ್ನಾಟಕ  /  Hd Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

HD Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

Raghavendra M Y HT Kannada

May 17, 2024 02:50 PM IST

google News

ಜೆಡಿಎಸ್ ಎಂಎಲ್‌ಎ ಹೆಚ್‌ಡಿ ರೇವಣ್ಣ.

    • ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 4 ರಂದು ಹೆಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದು. ತಂದೆ ಹಾಗೂ ಮಾಜಿ ಪ್ರಧಾನಿ ದೆೇವೇಗೌಡರ ಮನೆಯಲ್ಲೇ ಉಳಿದುಕೊಂಡಿದ್ದಾರೆ.
ಜೆಡಿಎಸ್ ಎಂಎಲ್‌ಎ ಹೆಚ್‌ಡಿ ರೇವಣ್ಣ.
ಜೆಡಿಎಸ್ ಎಂಎಲ್‌ಎ ಹೆಚ್‌ಡಿ ರೇವಣ್ಣ.

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ವಿಡಿಯೊದಲ್ಲಿ (Prajwal Revanna Sexually Assulted Video Case) ಇದ್ದರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಹೊರ ಬಂದಿರುವ ಜೆಡಿಎಸ್ (JDS) ನಾಯಕ, ಹೊಳೆನರಸೀಪುರ ಶಾಸಕ ಹೆಚ್‌ಡಿ ರೇವಣ್ಣ (HD Revanna) ಬೆಂಗಳೂರಿನ ತಮ್ಮ ಮನೆಯಿಂದ ಅಂತರವನ್ನು ಕಾಯ್ದುಕೊಂಡಿದ್ದು, ತಂದೆಯಾದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ (Former Prime Minister HD Deve gowda) ಮನೆಯಲ್ಲಿ ತಂಗಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ರೇವಣ್ಣ ಕೇವಲ ಒಂದು ಬಾರಿ ಮಾತ್ರ ಬಸವನಗುಡಿಯಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ.

ಹೀಗಿ ತಮ್ಮ ಬೆಂಗಳೂರಿನ ನಿವಾಸದಿಂದ ದೂರ ಉಳಿಯಲು ಜ್ಯೋತಿಷಿಗಳ ಸಲಹೆಯೂ ಕಾರಣ ಇರಬಹುದು ಎಂದು ಹೇಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ತಕ್ಷಣವೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಎಚ್.ಡಿ.ರೇವಣ್ಣ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಬಳಿಕ ಟೆಂಪಲ್ ರನ್ ಆರಂಭಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇವರಿಗೆ ಮಂಗಳವಾರ (ಮೇ 14) ಷರತ್ತುಬದ್ಧ ಜಾಮೀನು ನೀಡಿದ ನಂತರ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ನಗರದ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ಹೆಚ್‌ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 4 ರಂದು ಬಂಧಿಸಿದ್ದರು. ಮೇ 8ರಂದು ಅಶ್ಲೀಲ ವಿಡಿಯೋ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಮೇ 4 ರಂದು ರೇವಣ್ಣ ಅವರನ್ನು ಬಂಧಿಸಲಾಗಿತ್ತು.

ಎಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತನಿಖೆಯನ್ನು ಎದುರಿಸುತ್ತಿದೆ. ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮತ್ತು ಅವರ ಸಹಚರರ ವಿರುದ್ಧ ಐಪಿಸಿ ಸೆಕ್ಷನ್ 364 ಎ (ಹಣಕ್ಕಾಗಿ ಅಪಹರಣ), 365 (ಹಾನಿ ಮಾಡುವ ಉದ್ದೇಶದಿಂದ ಅಪಹರಣ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆ.ಆರ್.ನಗರ ಪೊಲೀಸರು ದಾಖಲಿಸಿರುವ ಎಫ್ಐಆರ್‌ನಲ್ಲಿ ಎಚ್.ಡಿ.ರೇವಣ್ಣ ಅವರನ್ನು ಮೊದಲ ಆರೋಪಿ ಮತ್ತು ಬಾಬಣ್ಣ ಅವರನ್ನು ಎರಡನೇ ಆರೋಪಿ ಎಂದು ಹೆಸರಿಸಲಾಗಿದೆ. ಆದರೆ, ಎಚ್.ಡಿ.ರೇವಣ್ಣ ಅವರು ಈ ಪ್ರಕರಣವನ್ನು ತಮ್ಮ ವಿರುದ್ಧದ ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಇದು ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಪಿತೂರಿ. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹದ್ದನ್ನು ನಾನು ನೋಡಿಲ್ಲ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್.ಡಿ.ರೇವಣ್ಣ ಅವರ ಮನೆಯಲ್ಲಿನ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಕರ್ನಾಟಕ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಯನ್ನು ಎದುರಿಸುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನುವಾದ ಪೆನ್‌ಡ್ರೈನ್ ಹಾಸನ ಜಿಲ್ಲೆಯಲ್ಲಿ ಹರಿದಾಡಿತ್ತು. ಮೇ 26 ರಂದು ನಡೆದ ಹಾಸನ ಲೋಕಸಭಾ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ. ಭಾರತಕ್ಕೆ ವಾಪಸ್ ಆಗುವುದಾಗಿ ವಿಮಾನ ಟಿಕೆಟ್ ಬುಕ್ ಮಾಡುವುದು ಮತ್ತೆ ಅದನ್ನು ರದ್ದು ಮಾಡುತ್ತಾ ದಿನಗಳನ್ನು ಮುಂದೂಡುತ್ತಾ ಪ್ರಕರಣದಿಂದ ಬಚ್ಚಾವ್ ಆಗುವುದು ಹೇಗೆ ಅನ್ನೋದರ ಬಗ್ಗೆ ತಂತ್ರಗಳನ್ನ ರೂಪಿಸುತ್ತಿದ್ದಂತೆ ಕಾಣುತ್ತಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ