ಕನ್ನಡ ಸುದ್ದಿ  /  ಕರ್ನಾಟಕ  /  Bengaluru News: ಇಂದಿನಿಂದ ಮಾರ್ಚ್ 21ರ ತನಕ ಆಯ್ದ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಯಾವ್ಯಾವ ರೈಲುಗಳು ಇಲ್ಲಿದೆ ವಿವರ

Bengaluru News: ಇಂದಿನಿಂದ ಮಾರ್ಚ್ 21ರ ತನಕ ಆಯ್ದ ರೈಲುಗಳ ಸಂಚಾರ ತಾತ್ಕಾಲಿಕ ರದ್ದು; ಯಾವ್ಯಾವ ರೈಲುಗಳು ಇಲ್ಲಿದೆ ವಿವರ

Umesh Kumar S HT Kannada

Mar 06, 2024 08:32 AM IST

ಬೆಂಗಳೂರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಸಾಂದರ್ಭಿಕ ಚಿತ್ರ)

  • ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿರುವ ಕಾರಣ ಇಂದಿನಿಂದ ಮಾರ್ಚ್ 31ರ ತನಕ ಬೆಂಗಳೂರಿನಿಂದ  ಮತ್ತು ಬೆಂಗಳೂರಿಗೆ ಬರುವ ಆಯ್ದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಕೆಲವು ರೈಲುಗಳ ಸಂಚಾರ ರದ್ದುಗೊಂಡಿದೆ. ಆ ವಿವರ ಈ ವರದಿಯಲ್ಲಿದೆ.

ಬೆಂಗಳೂರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಸಾಂದರ್ಭಿಕ ಚಿತ್ರ)
ಬೆಂಗಳೂರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಸಾಂದರ್ಭಿಕ ಚಿತ್ರ)

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ 15ರ ಬಳಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಆಯ್ದ ರೈಲುಗಳನ್ನು ಮಾರ್ಚ್‌ 6, 7, 8, 12 ಮತ್ತು 13ರ ತನಕ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

Bangalore News: ಬೆಂಗಳೂರು ಉದ್ಯಮಿ ಪುತ್ರಿ ಪ್ರೇಮಕಥನ; ಮನೆಯಲ್ಲಿದ್ದ1 ಕೋಟಿ ರೂ. ಜತೆ ಪರಾರಿ

Bangalore rains: ಬೆಂಗಳೂರಿನಲ್ಲಿ ನಿಲ್ಲದ ಮಳೆ, ಇನ್ನೂ ಎರಡು ದಿನ ಮಳೆ ಮುನ್ಸೂಚನೆ

Hassan Scandal: ಹಾಸನ ಸಂತ್ರಸ್ತೆ ಅಪಹರಣ ಪ್ರಕರಣ, ಮಾಜಿ ಸಚಿವ ರೇವಣ್ಣಗೆ ಜಾಮೀನು ಮಂಜೂರು, ಬಿಡುಗಡೆ ಯಾವಾಗ?

Vande Bharath Train: ತಿರುವನಂತಪುರಂ ಮಂಗಳೂರು ವಂದೇ ಭಾರತ್‌ ರೈಲು ಸಂಚಾರ ಸಮಯದಲ್ಲಿ ಬದಲಾವಣೆ

ಈ ಪೈಕಿ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಎಂಜಿಆರ್‌ ಚೆನ್ನೈ ಸೆಂಟ್ರಲ್ - ಮೈಸೂರು ಪ್ರತಿ ದಿನದ ಎಕ್ಸ್‌ಪ್ರೆಸ್ (ರೈ. ಸಂ 16021) ಮಾರ್ಚ್‌ 6, 7 (ಇಂದು ಮತ್ತು ನಾಳೆ) ರಂದು ರದ್ದುಗೊಳಿಸಲಾಗಿದೆ.

ಮೈಸೂರು- ಕೆಎಸ್ ಆರ್ ಬೆಂಗಳೂರು ಪ್ರತಿದಿನದ ಎಕ್ಸ್‌ಪ್ರೆಸ್ (ರೈ. ಸಂ 20623 ). ಬೆಂಗಳೂರು-ಮೈಸೂರು ಪ್ರತಿ ದಿನದ ಎಕ್ಸ್‌ಪ್ರೆಸ್ (ರೈ. ಸಂ.20624), ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್‌ ಎಕ್ಸ್‌ಪ್ರೆಸ್ (ರೈ. ಸಂ.16022) ಮಾರ್ಚ್‌ 7, 8 (ನಾಳೆ ಮತ್ತು ನಾಡಿದ್ದು) ಇರಲ್ಲ.

ಅರಸೀಕೆರೆ ಮೈಸೂರು ಪ್ರತಿ ದಿನದ ಎಕ್ ಪ್ರೆಸ್ ರೈಲು (ರೈ. ಸಂ 06267), ಮೈಸೂರು- ಎಸ್‌ಎಂವಿಟಿ ಬೆಂಗಳೂರು ಪ್ರತಿದಿನದ ಎಕ್ಸ್‌ಪ್ರೆಸ್ ಮೈಸೂರು-ಕೆಎಸ್‌ಆರ್ ಬೆಂಗಳೂರು ಮಮು (ರೈ. ಸಂ.06560), ಎಸ್‌ಎಂಪಿಟಿ ಬೆಂಗಳೂರು- ಮೈಸೂರು ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್ (ರೈ. ಸಂ. 06270) ಮಾರ್ಚ್ 7 ರಿಂದ 12ರ ವರೆಗೆ ಸಂಚಾರ ನಡೆಸಲ್ಲ.

ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈ. ಸಂ. 06268), ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆದು ವಿಶೇಷ ರೈಲು (ರೈ.ಸಂ.06559), ಕೆಎಸ್ಆರ್‌ ಬೆಂಗಳೂರು-ಚನ್ನಪಟ್ಟಣ ಮೆದು ಸ್ಪೆಷಲ್ (ರೈ.ಸಂ.01763) ಮಾರ್ಚ್‌ 8 ರಿಂದ 13ರ ವರೆಗೆ ರದ್ದಾಗಲಿದೆ.

ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು (ರೈ. ಸಂ. 06526 ) ಮಾರ್ಚ್‌ 7, 12ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕೊಂಕಣ ರೈಲು ಸಂಚಾರ ಭಾಗಶಃ ರದ್ದು

ಮುರುಡೇಶ್ವರ ಮತ್ತು ಸೇನಾಪುರ ಭಾಗದ ನಡುವೆ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಮಾರ್ಚ್ 7 ರಂದು ನಡೆಯುವ ಸಲುವಾಗಿ ಕೆಲ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆ ತಿಳಿಸಿದೆ.

1. ಮಾರ್ಚ್ 6 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರು- ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಕುಂದಾಪುರ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಕುಂದಾಪುರ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

2. ಮಾರ್ಚ್ 7 ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಕುಂದಾಪುರ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಕುಂದಾಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.

ದಕ್ಷಿಣ ಮಧ್ಯ ರೈಲ್ವೆಯ ರೈಲುಗಳ ಮಾರ್ಗ ಬದಲಾವಣೆ

ತಿರುಪತಿ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ನಿಮಿತ್ತ ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ ಮಾಡಲು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.

1. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮಾರ್ಚ್ 11 ಮತ್ತು 18 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 12890 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಟಾಟಾನಗರ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಕಟ್ಟಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ತಿರುಪತಿ ನಿಲ್ದಾಣದಲ್ಲಿ ನಿಲುಗಡೆ ಸಿಗಲ್ಲ.

2. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಮಾರ್ಚ್ 12, 14, 19, ಮತ್ತು 21, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 12836 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಹಟಿಯಾ ದ್ವಿಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಕಟ್ಟಾಡಿ, ಅರಕ್ಕೋಣಂ ಮತ್ತು ರೇಣಿಗುಂಟ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಚಿತ್ತೂರು ಮತ್ತು ತಿರುಪತಿ ನಿಲ್ದಾಣಗಳಲ್ಲಿ ನಿಲುಗಡೆ ಸಿಗಲ್ಲ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ