logo
ಕನ್ನಡ ಸುದ್ದಿ  /  ಕರ್ನಾಟಕ  /  Cm Siddaramaiah: ಬೆಂಗಳೂರಲ್ಲಿ ಮಹಾಘಟಬಂಧನ್‌ ಸಭೆ; ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ಬಹುಮತ ಸಾಧಿಸಲಿದೆ ಎಂದ ಸಿದ್ದರಾಮಯ್ಯ

CM Siddaramaiah: ಬೆಂಗಳೂರಲ್ಲಿ ಮಹಾಘಟಬಂಧನ್‌ ಸಭೆ; ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ಬಹುಮತ ಸಾಧಿಸಲಿದೆ ಎಂದ ಸಿದ್ದರಾಮಯ್ಯ

HT Kannada Desk HT Kannada

Jul 17, 2023 07:00 PM IST

ಸಿಎಂ ಸಿದ್ದರಾಮಯ್ಯ

    • Bengaluru opposition meet: ಲೋಕಸಭೆ ಚುನಾವಣೆಯಲ್ಲಿ ಬಿಜೆಯನ್ನು ಸೋಲಿಸುವ ಉದ್ದೇಶದಿಂದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ರಣತಂತ್ರ ಸೂಪಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎರಡು ದಿನಗಳ ಮಹಾಘಟಬಂಧನ್‌ ಸಭೆ ಆಯೋಜಿಸಲಾಗಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಯನ್ನು ಸೋಲಿಸುವ ಉದ್ದೇಶದಿಂದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ರಣತಂತ್ರ ಸೂಪಿಸಲು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಎರಡು ದಿನಗಳ ಮಹಾಘಟಬಂಧನ್‌ ಸಭೆ ಆಯೋಜಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಸಭೆಗೂ ಮುನ್ನ ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ. ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಲೋಕಸಭಾ ಚುನಾವಣೆಯಲ್ಲಿ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು.

ಎಲ್ಲರೂ ಕೋಮುವಾದದ ಆತಂಕದಿಂದ ಬದುಕುತ್ತಿರುವುದೇ ಬಿಜೆಪಿಯ ಕೊಡುಗೆ

ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದಾಗಿ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ಕಿಡಿಕಾರಿದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ :

ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ ಎಂದರು.

ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ :

ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ ನಾವು ಎನ್​​ಡಿಎಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥ ಎಂದರು.

ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ , ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ