logo
ಕನ್ನಡ ಸುದ್ದಿ  /  ಕರ್ನಾಟಕ  /  ಬೆಂಗಳೂರು ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ: ಮಳೆ ಕಂಡು ಖುಷಿಯಾದ ನೆಟ್ಟಿಗರು ಹಂಚಿಕೊಂಡ ಖುಷಿ ವಿಡಿಯೊಗಳು ಇಲ್ಲಿವೆ

ಬೆಂಗಳೂರು ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ: ಮಳೆ ಕಂಡು ಖುಷಿಯಾದ ನೆಟ್ಟಿಗರು ಹಂಚಿಕೊಂಡ ಖುಷಿ ವಿಡಿಯೊಗಳು ಇಲ್ಲಿವೆ

HT Kannada Desk HT Kannada

May 09, 2024 09:46 PM IST

ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ (ಪ್ರಾತಿನಿಧಿಕ ಚಿತ್ರ)

    • ಬೆಂಗಳೂರು ಮಳೆ: ನಗರದಲ್ಲಿ ಮಳೆಯಿಂದ ಕೆಲವೆಡೆ ಮರಗಳು ಉರುಳಿದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲ ರಸ್ತೆಗಳು ಜಲಾವೃತಗೊಂಡ ಕಾರಣ ಟ್ರಾಫಿಕ್ ಅಸ್ತವ್ಯಸ್ತಗೊಂಡಿತು.
ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ (ಪ್ರಾತಿನಿಧಿಕ ಚಿತ್ರ)
ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಳೆಯಾಗಿದೆ (ಪ್ರಾತಿನಿಧಿಕ ಚಿತ್ರ) (PTI Photo/Shailendra Bhojak)

ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಮಳೆ ಆರಂಭವಾಗಿದ್ದು ರಾತ್ರಿ 9:30 ರವರೆಗೂ ಸುರಿಯುತ್ತಲೇ ಇತ್ತು. ಮಳೆ ಕಂಡು ಖುಷಿಯಾಗಿರುವ ಜನರು 'ಗುಡ್‌ಗಿಂಗ್ ಅಂಡ್ ಮಿಂಚಿಂಗ್ ಹೆವಿಲಿ' (Gudging and Minching heavily) ಎಂದು ಬೆಂಗಳೂರಿನ 'ಟಿಪಿಕಲ್ ಕನ್ನಡ'ದಲ್ಲಿ ಒಕ್ಕಣೆ ಬರೆದು ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ. ಟ್ವಿಟರ್‌ನಲ್ಲಿಯೂ #BengaluruRains ಟ್ರೆಂಡ್ ಆಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

CET Results2024: ಕರ್ನಾಟಕ ಸಿಇಟಿ ಫಲಿತಾಂಶ ಇಂದು ಪ್ರಕಟ ಸಾಧ್ಯತೆ, ನಿಮ್ಮ ಅಂಕ ನೋಡುವುದು ಹೀಗೆ

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

Bangalore News: ಬೆಂಗಳೂರು ರಸ್ತೆಗಳಲ್ಲಿ ಮರ ಬೀಳುವ ಸನ್ನಿವೇಶವಿದೆಯಾ, ಈ ನಂಬರ್‌ಗಳಿಗೆ ಕರೆ ಮಾಡಿ

ನಗರದಲ್ಲಿ ಇತ್ತೀಚೆಗೆ ಉಷ್ಣಾಂಶ ವಿಪರೀತ ಹೆಚ್ಚಾಗಿದ್ದು ದಾಖಲೆ ಬರೆದಿತ್ತು. ಕಾದ ಕೆಂಡದಂತಾಗಿದ್ದ ಬೆಂಗಳೂರಿಗರು ಬಿಸಿಲಿಗೆ ಬೆವರಿ ಬಸವಳಿದಿದ್ದರು. ಮಳೆಗಾಗಿ ಕಾತರದಿಂದ ಕಾಯುತ್ತಿದ್ದ ಜನರಿಗೆ ವರುಣ ಗುರುವಾರವೂ ಖುಷಿಕೊಟ್ಟ. ಮಳೆಯಿಂದ ಕೆಲವೆಡೆ ಮರಗಳು ಉರುಳಿದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲ ರಸ್ತೆಗಳು ಜಲಾವೃತಗೊಂಡ ಕಾರಣ ಟ್ರಾಫಿಕ್ ಸಹ ಅಸ್ತವ್ಯಸ್ತಗೊಂಡಿತು.

ಬೆಂಗಳೂರಿನ ಯಲಹಂಕ, ಹೆಬ್ಬಾಳ, ಜಯನಗರ, ಹನುಮಂತನಗರ, ಬಾಣಸವಾಡಿ, ಕೋರಮಂಗಲ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೊಮ್ಮನಹಳ್ಳಿ, ಹೊರಮಾವು ಸೇರಿದಂತೆ ಹಲವು ಬಡಾವಣೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ಇನ್ನೂ 5 ದಿನ, ಅಂದರೆ ಮೇ 15 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಮಿಂಚೋ ಮಿಂಚು

ದೇಗುಲದಿಂದ ಮಳೆ ದರ್ಶನ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ