logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ, ತೇವಾಂಶ ಕುಸಿತ

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ, ತೇವಾಂಶ ಕುಸಿತ

Umesh Kumar S HT Kannada

Nov 24, 2024 07:25 AM IST

google News

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಕರ್ನಾಟಕದ ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15ಕ್ಕಿಂತ ಕೆಳಗೆ, ತೇವಾಂಶ ಕುಸಿತವಾಗಿದ್ದು, ಒಣಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

  • Weather Forecast: ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಕರ್ನಾಟಕ ಹವಾಮಾನ ಮುನ್ಸೂಚನೆ ವರದಿ ಪ್ರಕಾರ, ಇಂದು (ನವೆಂಬರ್ 24) ಬೆಂಗಳೂರು ಸುತ್ತಮುತ್ತ ಮಂಜು, ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ, ತೇವಾಂಶ ಕುಸಿತ ಇರಲಿದ್ದು, ಒಣಹವೆ ಕಂಡುಬರಬಹುದು. ಈ ದಿನದ ಹವಾಮಾನ ವಿವರ ಇಲ್ಲಿದೆ.

ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಕರ್ನಾಟಕದ ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15ಕ್ಕಿಂತ ಕೆಳಗೆ, ತೇವಾಂಶ ಕುಸಿತವಾಗಿದ್ದು, ಒಣಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ: ಬೆಂಗಳೂರು ಸುತ್ತಮುತ್ತ ಮಂಜು, ಕರ್ನಾಟಕದ ಒಳನಾಡಲ್ಲಿ ವಿಪರೀತ ಚಳಿ, 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15ಕ್ಕಿಂತ ಕೆಳಗೆ, ತೇವಾಂಶ ಕುಸಿತವಾಗಿದ್ದು, ಒಣಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ) (Pexels)

Karnataka Weather Today: ಕರ್ನಾಟಕದಲ್ಲಿ ಇಂದು (ನವೆಂಬರ್ 24) ಒಣಹವೆ ಇರಲಿದ್ದು, ವಿವಿಧೆಡೆ ಮುಂಜಾನೆ ಮಂಜು ಮತ್ತು ವಿಪರೀತ ಚಳಿ ಅನುಭವಕ್ಕೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನಾ ವರದಿ ಹೇಳಿದೆ. ಕರ್ನಾಟಕ ಹವಾಮಾನ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು ಆವರಿಸಲಿದ್ದು, ಚಳಿಯೂ ಇರಲಿದೆ. ಇದೇ ರೀತಿ ಕರ್ನಾಟಕದ ಒಳನಾಡಲ್ಲಿ ಹಲವೆಡೆ ವಿಪರೀತ ಚಳಿ ಇರಲಿದೆ. 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಶಿಯಸ್‌ಗಿಂತಲೂ ಕೆಳಕ್ಕೆ ಕುಸಿಯಬಹುದು. ತೇವಾಂಶ ಕುಸಿತದ ಕಾರಣ ಒಣಹವೆ ಅನುಭವಕ್ಕೆ ಬರಬಹುದು ಎಂದು ವರದಿ ಹೇಳಿದೆ. ಕರ್ನಾಟಕದಲ್ಲಿ ನಿನ್ನೆ (ನವೆಂಬರ್ 23) ಗರಿಷ್ಠ ಉಷ್ಣಾಂಶ 35.3 ಡಿಗ್ರಿ ಸೆಲ್ಶಿಯಸ್‌ ಹೊನ್ನಾವರದಲ್ಲಿ, ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಶಿಯಸ್ ವಿಜಯಪುರದಲ್ಲಿ ದಾಖಲಾಗಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ಇಂದು; 12 ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ, ತೇವಾಂಶ ಕುಸಿತ

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನಾ ವರದಿ, ಈ ದಿನಕ್ಕೆ ಸಂಬಂಧಿಸಿದ ಸಿನೊಪ್ಟಿಕ್ ಹವಾಮಾನ ಲಕ್ಷಣದಂತೆ, "ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಆಗ್ನೆಯ ಬಂಗಾಳ ಕೊಲ್ಲಿಯ ಮೇಲಿನ ವಾಯು ಸೈಕ್ಲೋನಿಕ್ ಪರಿಚಲನೆಯ ಪ್ರಭಾವದ ಅಡಿಯಲ್ಲಿ, ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೆಯ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶವು ಶನಿವಾರ ಬೆಳಗ್ಗೆ ರೂಪುಗೊಂಡಿದೆ. ಇದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುವುದನ್ನು ಮುಂದುವರೆಸುವ ಸಾಧ್ಯತೆಯಿದೆ. ಅದೇ ರೀತಿ ತೀವ್ರಗೊಳ್ಳುವ ಸಾಧ್ಯತೆ ಇದ್ದು, ನವೆಂಬರ್ 25 ರ ಸುಮಾರಿಗೆ ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಅದಾಗಿ ಮುಂದಿನ 2 ದಿನಗಳಲ್ಲಿ ಇದು ವಾಯವ್ಯ ದಿಕ್ಕಿನಲ್ಲಿ ತಮಿಳುನಾಡು-ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಪರಿಣಾಮ ದಕ್ಷಿಣ ಒಳನಾಡಿನ ಕೆಲವಡೆ ಮಳೆಯಾಗಬಹುದು.

ಹಿಂದೂ ಮಹಾಸಾಗರದ ಮೇಲಿನ ಚಂಡಮಾರುತದ ಪರಿಚಲನೆಯಿಂದ ಮನ್ನಾರ್ ಕೊಲ್ಲಿಯವರೆಗಿನ ಚಂಡಮಾರುತವು ಈಗ ಪೂರ್ವ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಕೊಮೊರಿನ್ ಪ್ರದೇಶದ ಮೇಲೆ ಕಡಿಮೆ ಒತ್ತಡದ ವ್ಯವಸ್ಥೆಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಯಿಂದ ಸಾಗುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ವರೆಗೆ ವ್ಯಾಪಿಸಿದೆ. ಎತ್ತರದೊಂದಿಗೆ ದಕ್ಷಿಣಕ್ಕೆ ವಾಲಿಕೊಂಡು ಚಲಿಸತೊಡಗಿದೆ. ದಕ್ಷಿಣ ಕೇರಳ ಮತ್ತು ನೆರೆಹೊರೆಯಲ್ಲಿ ಸಮುದ್ರ ಮಟ್ಟದಿಂದ 1.5 ಕಿಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯು ಕಡಿಮೆ ಗುರುತಿಸಲ್ಪಟ್ಟಿದೆ. ಹೀಗಾಗಿ ನವೆಂಬರ್ 27ರ ಹೊತ್ತಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಎನ್ ಪುವಿಯರಸನ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಂದು (ನವೆಂಬರ್ 24) ಒಣ ಹವೆಯಿರುವ ಸಾಧ್ಯತೆಯಿದೆ. ಒಳನಾಡಿನ ಒಂದೆರೆಡು ಕಡೆಗಳಲ್ಲಿ, ಮುಂಜಾನೆಯ ಸಮಯ ಮಂಜು/ಇಬ್ಬನಿ ಇರುವ ಸಾಧ್ಯತೆ ಇದೆ. ರಾಜ್ಯದ ಬಯಲು ಸೀಮೆಯ ಬೀದರ್, ಗುಲ್ಬರ್ಗಾ, ಧಾರವಾಡ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 13-15 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು, ಕನಿಷ್ಠ ತಾಪಮಾನ 20ಕ್ಕಿಂತ ಕಡಿಮೆ

ಬೆಂಗಳೂರು ಸುತ್ತಮುತ್ತ ಅಂದರೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನವೆಂಬರ್ 25ರ ಬೆಳಗ್ಗಿನವರೆಗೆ ನೀಲಾಕಾಶ ಇರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು/ಇಬ್ಬನಿ ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 17 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ಎನ್ ಪುವಿಯರಸನ್ ತಿಳಿಸಿದ್ದಾರೆ.

ಬೆಂಗಳೂರು ಸುತ್ತಮುತ್ತ ವಿಶೇಷವಾಗಿ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ ಸಮೀಪ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 16.8 ಡಿಗ್ರಿ ಸೆಲ್ಶಿಯಸ್‌, ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29.5, ಕನಿಷ್ಠ ತಾಪಮಾನ 17.7, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಸುಪಾಸಿನಲ್ಲಿ ಗರಿಷ್ಠ ತಾಪಮಾನ 29.3, ಕನಿಷ್ಠ ತಾಪಮಾನ 17.9, ಜಿಕೆವಿಕೆ ಬಳಿ ಗರಿಷ್ಠ ತಾಪಮಾನ 29.8, ಕನಿಷ್ಠ ತಾಪಮಾನ 18.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. ತೇವಾಂಶ ಮಟ್ಟ ಸಂಜೆ ವೇಳೆಗೆ ಶೇಕಡ 50ರ ಆಸುಪಾಸಿನಲ್ಲಿದ್ದವು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ