logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಫೆ 29; ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು ಸಾಧ್ಯತೆ, ಕರಾವಳಿ, ಉತ್ತರ ಒಳನಾಡಲ್ಲಿ ಉಷ್ಣಾಂಶ ಹೆಚ್ಚಳ, ರಾಜ್ಯದಲ್ಲಿ ಒಣಹವೆ

ಕರ್ನಾಟಕ ಹವಾಮಾನ ಫೆ 29; ಬೆಂಗಳೂರು ಸುತ್ತಮುತ್ತ ಮುಂಜಾನೆ ಮಂಜು ಸಾಧ್ಯತೆ, ಕರಾವಳಿ, ಉತ್ತರ ಒಳನಾಡಲ್ಲಿ ಉಷ್ಣಾಂಶ ಹೆಚ್ಚಳ, ರಾಜ್ಯದಲ್ಲಿ ಒಣಹವೆ

Umesh Kumar S HT Kannada

Feb 29, 2024 06:10 AM IST

google News

ಫೆಬ್ರವರಿ 29 ರ ಕರ್ನಾಟಕ ಹವಾಮಾನ ವರದಿ

  • ಕರ್ನಾಟಕ ಹವಾಮಾನ ಇಂದು: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತ ಕೆಲವೆಡೆ ಮುಂಜಾನೆ ಮಂಜು ಇದ್ದರೂ, ಹಗಲು ನಿರ್ಮಲ ಆಕಾಶವಿರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆ ತಾಪಮಾನ ಹೆಚ್ಚಳವಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ನೀಡಿರುವ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಫೆಬ್ರವರಿ 29 ರ ಕರ್ನಾಟಕ ಹವಾಮಾನ ವರದಿ
ಫೆಬ್ರವರಿ 29 ರ ಕರ್ನಾಟಕ ಹವಾಮಾನ ವರದಿ

ಕರ್ನಾಟಕದಾದ್ಯಂತ ಇಂದು (ಫೆ.29) ಮತ್ತು ನಾಳೆ (ಮಾ.1) ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ ಕೆಲವು ಕಡೆ ಮುಂಜಾನೆ ಮಂಜು ಮುಸುಕಬಹುದು. ಹಗಲು ಹೊತ್ತಿನಲ್ಲಿ ನಿರ್ಮಲ ಆಕಾಶ ಇರಲಿದೆ. ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದಲ್ಲಿ ವ್ಯತ್ಯಾಸ ಉಂಟಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ 24 ಗಂಟೆಗಳ ಅವಧಿಗೆ ರಾಜ್ಯದಲ್ಲಿ ಎಲ್ಲೂ ಮಳೆ ಮುನ್ಸೂಚನೆ ಇಲ್ಲ. ತಾಪಮಾನದ ಮುನ್ಸೂಚನೆ ಪ್ರಕಾರ, ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಅದೇ ರೀತಿ, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ ಎನ್‌ ಪುವಿಯರಸನ್‌ ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಹೀಗಿತ್ತು ಹವಾಮಾನ: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿತ್ತು. ಎಲ್ಲೂ ಮಳೆಯಾಗಿಲ್ಲ. ತಾಪಮಾನ ಗಮನಿಸುವುದಾದರೆ ರಾಜ್ಯದ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರಲಿಲ್ಲ. ಆದಾಗ್ಯೂ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ 3.1 – 5 ಡಿಗ್ರಿ ಸೆಲ್ಶಿಯಸ್ ತನಕ ಹೆಚ್ಚಳವಾಗಿತ್ತು. ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ 1.6- 3 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ಹೆಚ್ಚಳವಾಗಿತ್ತು. ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯ ಉಷ್ಣಾಂಶವಿದ್ದರೆ, ಒಂದರೆಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಅಂದರೆ 1.6 -3 ಡಿಗ್ರಿ ಸೆಲ್ಶಿಯಸ್‌ ಉಷ್ಣಾಂಶ ಕಡಿಮೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಶಿಯಸ್‌ ಚಾಮರಾಜನಗರದಲ್ಲಿ ದಾಖಲಾಯಿತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಹವಾಮಾನ ಇಂದು (ಫೆ. 29) ಮತ್ತು ನಾಳೆ (ಮಾ.1)

ಬೆಂಗಳೂರು ನಗರದಲ್ಲಿ ಗುರುವಾರ (ಫೆ 29) ಸಹಜ ವಾತಾವರಣ, ನಿರ್ಮಲ ಆಕಾಶ ವಿರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಪ್ರಬಲ ಗಾಳಿ ಅನುಭವಕ್ಕೆ ಬಂದೀತು. ನಾಳೆ (ಮಾ.1) ಕೂಡ ಬಹುತೇಕ ಸಹಜ ವಾತಾವರಣ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ಹೇಳಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು (ಫೆ. 29) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಅನುಭವಕ್ಕೆಬರಲಿದೆ. ನಿನ್ನೆ (ಫೆ.28) 31.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 19 ಡಿಗ್ರಿಸೆಲ್ಶಿಯಸ್ ಇತ್ತು. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಶಿಯಸ್ ಇರಲಿದೆ. ನಿನ್ನೆ (ಫೆ. 28) ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಫೆ.29 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68)

ಮಂಗಳೂರು – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)

ಚಿತ್ರದುರ್ಗ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)

ಗದಗ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 43)

ಹೊನ್ನಾವರ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)

ಕಲಬುರಗಿ – 35 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 34)

ಬೆಳಗಾವಿ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 25)

ಕಾರವಾರ – 33.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 54)

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ