logo
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 6: ರಾಜ್ಯದಲ್ಲಿ ಒಣಹವೆ, ಬೆಂಗಳೂರಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಹೆಚ್ಚಳ

ಕರ್ನಾಟಕ ಹವಾಮಾನ ಮಾರ್ಚ್ 6: ರಾಜ್ಯದಲ್ಲಿ ಒಣಹವೆ, ಬೆಂಗಳೂರಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಹೆಚ್ಚಳ

Umesh Kumar S HT Kannada

Mar 06, 2024 06:14 AM IST

google News

ಕರ್ನಾಟಕ ಹವಾಮಾನ ಮಾರ್ಚ್ 6

  • ಕರ್ನಾಟಕ ಹವಾಮಾನ ಮಾರ್ಚ್ 6: ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದ್ದು, ವಿವಿಧೆಡೆ ಬೇಸಗೆಯ ಬೇಗೆ ಕಾಡತೊಡಗಿದೆ. ರಾಜಧಾನಿ ಬೆಂಗಳೂರಲ್ಲಿ ನೀಲಾಕಾಶ ಇದ್ದು, ಉಷ್ಣಾಂಶ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗಬಹುದು. ಒಳನಾಡುಗಳಲ್ಲಿ ಕೆಲವು ಕಡೆ ಉಷ್ಣಾಂಶ ಅಧಿಕವಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ. 

ಕರ್ನಾಟಕ ಹವಾಮಾನ ಮಾರ್ಚ್ 6
ಕರ್ನಾಟಕ ಹವಾಮಾನ ಮಾರ್ಚ್ 6

ಬೆಂಗಳೂರು: ಕರ್ನಾಟಕದಲ್ಲಿ ಫೆಬ್ರವರಿ ಮಧ್ಯಭಾಗದಲ್ಲೇ ಬೇಸಿಗೆ ಶುರುವಾಗಿದ್ದು, ಒಣಹವೆ ಮುಂದುವರಿಯಲಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಕಡೆ ಉಷ್ಣಮಾರುತದ ಪ್ರಭಾವ ಇರಲಿದೆ. ಬೆಂಗಳೂರು ಸುತ್ತಮುತ್ತ ನಿರ್ಮಲ ಆಕಾಶ ಇರಲಿದ್ದು, ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಿನ್ನೆ (ಮಾ.5) ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37.8 ಡಿಗ್ರಿ ಸೆಲ್ಶಿಯಸ್‌ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 16.9 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ ಎಂದು ಹವಾಮಾನ ಕೇಂದ್ರದ ವರದಿ ಹೇಳಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಇಂದಿನ (ಮಾರ್ಚ್ 06) ಹವಾಮಾನ

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಹಜವೆನಿಸುವ ಬೇಸಿಗೆ ವಾತಾವರಣ ಇದ್ದು, ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚಳವಾಗಲಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ ನಾಳೆ (ಮಾ.7) ಮಧ್ಯಾಹ್ನ ತನಕವೂ ನಿರ್ಮಲ ಆಕಾಶ ಮತ್ತು ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಶಿಯಸ್‌, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಎನ್‌ ಪುವಿಯರಸನ್‌ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಲ ಆಕಾಶ ಇರಲಿದೆ. ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಇರಬಹುದು. ನಿನ್ನೆ (ಮಾ.5)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 5) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 06 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64)

ಗದಗ – 27.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64)

ಹೊನ್ನಾವರ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಕಲಬುರಗಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 38)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)

ಕಾರವಾರ – 32 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)

----------------------

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ