logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Weather: ಬೆಂಗಳೂರು ನಗರ ಮತ್ತು ಗ್ರಾಮಾಂತರದ ಕೆಲವೆಡೆ ಸಾಧಾರಣ ಮಳೆ, ಮೋಡ ಕವಿದ ವಾತಾವರಣ

Bengaluru Weather: ಬೆಂಗಳೂರು ನಗರ ಮತ್ತು ಗ್ರಾಮಾಂತರದ ಕೆಲವೆಡೆ ಸಾಧಾರಣ ಮಳೆ, ಮೋಡ ಕವಿದ ವಾತಾವರಣ

HT Kannada Desk HT Kannada

Jan 08, 2024 06:14 AM IST

google News

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದ ಕೆಲವು ಭಾಗಗಳಲ್ಲಿ ಸೋಮವಾರ (ಜ.8) ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಬಾಗದಲ್ಲಿ ಸೋಮವಾರ (ಜ.8) ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಬೀಳಬಹುದು. ವಿವಿಧೆಡೆ ಮುಂಜಾನೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಚಳಿಯ ತೀವ್ರತೆಯನ್ನು ಹೆಚ್ಚಿಸಲಿದೆ. ರಾತ್ರಿ ವೇಳೆ ಕೂಡ ಚಳಿ ಇರಲಿದೆ. ಹಗಲು ವೇಳೆ ಕೆಲವು ಕಡೆ ಒಣಹವೆ, ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದ ಕೆಲವು ಭಾಗಗಳಲ್ಲಿ  ಸೋಮವಾರ (ಜ.8) ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದ ಕೆಲವು ಭಾಗಗಳಲ್ಲಿ ಸೋಮವಾರ (ಜ.8) ಸಾಧಾರಣ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸೋಮವಾರ (ಜ.8) ಕೆಲವು ಕಡೆಗೆ ಮುಂಜಾನೆ ಮಂಜು ಕವಿದ ವಾತಾವರಣ ಇರಲಿದೆ. ಉಳಿದಂತೆ ಕೆಲವು ಕಡೆ ಸಾಧಾರಣ ಚದುರಿದ ಮಳೆಯಾಗಲಿದೆ ಎಂಬ ಹವಾಮಾನ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ 24 ಗಂಟೆ ಅವಧಿಯಲ್ಲಿ ಅಂದರೆ ಸೋಮವಾರ ಬೆಳಗ್ಗೆ 8.30ರಿಂದ ಮಂಗಳವಾರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಕೆಲವು ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗೆ ಚದುರಿದ ಮಳೆಯಾಗಲಿದೆ. ಹಗಲು ಹೊತ್ತಿನಲ್ಲಿ ಒಣಹವೆ ಮುಂದುವರಿಯಲಿದೆ.

ಕೆಲವು ಪ್ರದೇಶಗಳಲ್ಲಿ ಮುಂಜಾನೆ ಹೊತ್ತು ಮಂಜುಕವಿದ ವಾತಾವರಣ ಇರಲಿದೆ. ವಾತಾವರಣದ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಶಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ನಡುವೆ ಇರಲಿದೆ ಎಂದು ಬೆಂಗಳೂರ ಹವಾಮಾನ ಕೇಂದ್ರದ ವಿಜ್ಞಾನಿ ಡಾ.ರಾಜವೇಲ್‌ ಮಣಿಕ್ಕಮ್‌ ತಿಳಿಸಿದ್ದಾರೆ.

ಇನ್ನುಳಿದ ಹಾಗೆ, ಹವಾಮಾನ ಇಲಾಖೆಯ ಪ್ರಕಾರ ದಕ್ಷಿಣ ಒಳಾನಾಡಿನಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹೊರತು ಪಡಿಸಿ,ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗಬಹುದು. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಗಳಲ್ಲಿ ಸೋಮವಾರ (ಜ.8) ಚಳಿ ಮತ್ತು ಒಣ ಹವೆ ಮುಂದುವರಿಯಲಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದ ಕೆಲವು ಕಡೆಗಳಲ್ಲಿ ನಿನ್ನೆ (ಜ.7) ಸಾಧಾರಣ ಚದುರಿದ ಮಳೆಯಾಗಿದೆ. ಚಳಿಗಾಲದಲ್ಲಿ ಮಳೆ ಬಿದ್ದ ಕಾರಣ ಗ್ರಾಮಾಂತರ ಭಾಗದ ಕೃಷಿಕರು ಬೆಳೆನಾಶದ ಆತಂಕದಲ್ಲಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಜನವರಿ 09 ರವರೆಗೆ ರಾಜ್ಯದಾದ್ಯಂತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮತ್ತು ನಂತರ ಮಳೆಯ ಚಟುವಟಿಕೆಯು ರಾಜ್ಯದಾದ್ಯಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂಬ ಮಳೆಯ ಮುನ್ಸೂಚನೆ ಲಭಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ