logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ; ಹವಾಮಾನ ಇಲಾಖೆ ಎಚ್ಚರಿಕೆ

Bengaluru Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆಯ ನಿರೀಕ್ಷೆ; ಹವಾಮಾನ ಇಲಾಖೆ ಎಚ್ಚರಿಕೆ

Raghavendra M Y HT Kannada

May 09, 2024 02:19 PM IST

ಮೇ 9ರ ಗುರುವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    • ಬೆಂಗಳೂರಿನಲ್ಲಿ ಇಂದು (ಮೇ 9, ಗುರುವಾರ) ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬೇಸಿಗೆಯ ಮಳೆಯ ಭಾರಿ ಅವಾಂತರಗಳನ್ನೇ ಸೃಷ್ಟಿಸಿದೆ.
ಮೇ 9ರ ಗುರುವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 9ರ ಗುರುವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಐಎಂಡಿ ಹೇಳಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. (PTI)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru Rain) ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಗಣನೀಯವಾಗಿ ತಾಪಮಾನ ಕಡಿಮೆಯಾಗುತ್ತಿದೆ. ಬಿಸಿಲು ಸ್ವಲ್ಪ ಕಡಿಮೆಯಾಗಿರುವುದರಿಂದ ಜನರು ನೆಮ್ಮೆದಿಯ ನಿಟ್ಟುಸಿರುವ ಬಿಟ್ಟಿರುವ ನಡುವೆ ಬಿರುಗಾಳಿಯ ಸಹಿತ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಇದರ ನಡುವೆ ಇಂದು (ಮೇ 9, ಗುರುವಾರ) ನಗರದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಟೆಕ್ ರಾಜಧಾನಿಯಲ್ಲಿ ಮಧ್ಯಮದಿಂದ ಕೂಡಿದ ಭಾರಿ ಮಳೆಯ ಜೊತೆಗೆ ಹೆಚ್ಚಿನ ತೀವ್ರತೆಯ ಗಾಳಿಯನ್ನು ಸಹ ನಿರೀಕ್ಷಿಸಲಾಗಿದೆ. ಬೆಂಗಳೂರು ನಗರದ ಜೊತೆಗೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರು, ಕೋಲಾರ, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ (Bengaluru Weather).

ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಆತ್ಮಹತ್ಯೆ ಯತ್ನ, ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ ಸಂಬಂಧಿಸಿದ ಇತ್ತೀಚಿನ 10 ವಿದ್ಯಮಾನಗಳು

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

ಮಂಗಳವಾರ (ಮೇ 7) ಹಾಗೂ ಬುಧವಾರ (ಮೇ 8) ನಗರದಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತಿ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಮರುಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆಗಳಲ್ಲಿ ಮಳೆನೀರು ಉಕ್ಕಿಹರಿದ ಪರಿಣಾಮ ಜನ ಸಂಚಾರಕ್ಕೆ ಅಡ್ಡಿಯುಂಟಾಯಿತು. ಪ್ರಮುಖ ರಸ್ತೆಗಳಲ್ಲಿ ವಾಹನ ಸವಾರರು ತೊಂದರೆ ಅನುಭವಿಸಿದರು.

ನಗರದಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಲವು ತಿಂಗಳುಗಳ ಒಣಹವೆಯ ನಂತರ, ಬೆಂಗಳೂರಿನಲ್ಲಿ 35 ಡಿಗ್ರಿಗಳಿಗಿಂತ ಕಡಿಮೆ ತಾಪಮಾನ ದಾಖಲಾಗಿದ್ದು, ಮೇ ತಿಂಗಳಲ್ಲಿ ಹವಾಮಾನವು ಇದೇ ರೀತಿ ಮುಂದುವರಿಯುವ ನಿರೀಕ್ಷೆಯಿದೆ. ನಗರದಾದ್ಯಂತ ಕಡಿಮೆ ತಾಪಮಾನ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಂತ ತಂಪಾದ ದಿನಗಳಲ್ಲಿ ಮಂಗಳವಾರ (ಮೇ 7) ಒಂದಾಗಿದೆ ಎಂದು ವರದಿಯಾಗಿದೆ.

ಏಪ್ರಿಲ್ 19, 20 ರಂದು ಮಳೆಯಾಗಿದ್ರೂ ವೀಕ್ಷಣಾಲಯದಲ್ಲಿ ದಾಖಲಾಗಿಲ್ಲ

ಏಪ್ರಿಲ್‌ನಲ್ಲಿ ನಗರದ ತಾಪಮಾನವು ತೀವ್ರ ಏರಿಕೆಯನ್ನು ಕಂಡಿತ್ತು. ನಗರದ ಹವಾಮಾನ ವೀಕ್ಷಣಾಲಯದ ಪ್ರಕಾರ, ಏಪ್ರಿಲ್‌ನಲ್ಲಿ ಮಳೆಯನ್ನು ಕಂಡಿರಲಿಲ್ಲ. ಏಪ್ರಿಲ್ 19 ಮತ್ತು 20 ರಂದು ನಗರದ ಕೆಲವು ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದ್ದರೂ, ಇದನ್ನು ನಗರದ ವೀಕ್ಷಣಾಲಯದಲ್ಲಿ ದಾಖಲಿಸಲಾಗಿಲ್ಲ. ಅಂದರೆ ಮಲೆ ಅಷ್ಟು ಸಾಧಾರಣವಾಗಿತ್ತು.

ಏಪ್ರಿಲ್ 28 ರಂದು ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಕಳೆದ ಐದು ದಶಕಗಳಲ್ಲಿ ಎರಡನೇ ಅತಿ ಹೆಚ್ಚು ತಾಪಮಾನ ಎಂದು ಹೇಳಲಾಗುತ್ತದೆ. 2016ರ ಏಪ್ರಿಲ್ 25ರಂದು ಬೆಂಗಳೂರಿನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಈ ವರ್ಷ, ಏಪ್ರಿಲ್ 28 ರಂದು 38.5 ಡಿಗ್ರಿ ಸೆಲ್ಸಿಯಸ್ ಮತ್ತು ಏಪ್ರಿಲ್ 27 ರಂದು 38 ಡಿಗ್ರಿ ಸೆಲ್ಸಿಯಸ್ ಕಂಡುಬಂದಿದೆ.

ಆದರೆ, ಮೇ ಆರಂಭದಿಂದಲೇ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ನಗರದ ಕೆಲವು ಭಾಗಗಳಲ್ಲಿ ಜಲಾವೃತ ಮತ್ತು ತೀವ್ರ ಸಂಚಾರ ವರದಿಯಾಗಿದೆ. ಮುಂಬರುವ ಮಳೆಗಾಲವನ್ನು ಎದುರಿಸಲು ಬಿಬಿಎಂಪಿ ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ