logo
ಕನ್ನಡ ಸುದ್ದಿ  /  ಕರ್ನಾಟಕ  /  ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

HT Kannada Desk HT Kannada

Oct 18, 2023 04:32 PM IST

ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

    • ಬೀದರ್‌ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಯೋಜಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ಬೀದರ್‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ್:‌ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ ಉಪನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಕಾರ್ಯಕ್ರಮ ಸಹಾಯಕರ-1 ಹುದ್ದೆ, ಭಾಲ್ಕಿಯ ಶಿಶು ಅಭಿವೃದ್ಧಿ ಕಛೇರಿಯಲ್ಲಿ ತಾಲ್ಲೂಕು ಸಂಯೋಜಕರ-1 ಹುದ್ದೆ ಹಾಗೂ ಸಂತಪೂರ (ಔರಾದ) ಶಿಶು ಅಭಿವೃದ್ಧಿ ಕಛೇರಿಯಲ್ಲಿ ತಾಲ್ಲೂಕು ಸಂಯೋಜಕರ-1 ಹುದ್ದೆ ಸೇರಿ ಒಟ್ಟು-3 ಹುದ್ದೆಗಳನ್ನು ಯೋಜನೆಯು ಜಾರಿಯಲ್ಲಿರುವರೆಗೆ ಮಾತ್ರ ಗೌರವಧನ ಆಧಾರದಲ್ಲಿ ತಾತ್ಕಾಲಿಕವಾಗಿ ನೇಮಕಾತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ ಪೂರೈಸುತ್ತಿದ್ದ ನಾರಾ ಶ್ರೀನಿವಾಸ್ ರಾವ್ ಬಂಧನ: ಗೋವಾ ಮಹಿಳೆಯ ಬ್ಲಾಕ್ ಮೇಲ್, ಬೆಂಗಳೂರಿನ ವ್ಯಕ್ತಿ ಸೆರೆ

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಕರ್ನಾಟಕ ಹವಾಮಾನ ಮೇ 20; ದಕ್ಷಿಣ ಕನ್ನಡ, ಉಡುಪಿ ಸೇರಿ 8ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ನಿಗಧಿತ ವಿದ್ಯಾರ್ಹತೆ ಹೊಂದಿದ್ದ ಅಭ್ಯರ್ಥಿಗಳು ಅರ್ಜಿಗಳನ್ನು https://bidar.nic.in ಹಾಗೂ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಪಡೆದು ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲಾತಿಗಳು, ಸೇವಾ ಅನುಭವ ಪ್ರಮಾಣ ಪತ್ರ, ವಾಸ ಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ ಪ್ರತಿ ಹಾಗೂ ಸಂಬಂಧಿಸಿದ ಇತರೆ ದಾಖಲೆಗಳನ್ನು ಸಂಬಂಧಿಸಿದ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಅವರಿಗೆ ನವ್ಹೆಂಬರ್‌ 16 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ ಅಥವಾ ದೂರವಾಣಿ ಸಂಖ್ಯೆ: 9972137801, 8217237798 ಗೆ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ