logo
ಕನ್ನಡ ಸುದ್ದಿ  /  ಕರ್ನಾಟಕ  /  Bites Convention: ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ನಲ್ಲಿ ಫೆ.10, 11ರಂದು 'ಬೈಟ್ಸ್‌' ಸಮಾವೇಶ

BITES convention: ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ನಲ್ಲಿ ಫೆ.10, 11ರಂದು 'ಬೈಟ್ಸ್‌' ಸಮಾವೇಶ

HT Kannada Desk HT Kannada

Feb 07, 2023 03:23 PM IST

ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ (ಫೋಟೊ- infosysmysoredotin

    • 'ಐಟಿ ಶಿಕ್ಷಣ ಮಾನದಂಡಗಳ ಮಂಡಲಿ'ಯು (ಬೈಟ್ಸ್‌) ಫೆ.10 ಮತ್ತು 11ರಂದು ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ನಲ್ಲಿ ತನ್ನ 4ನೇ ಸಮಾವೇಶವನ್ನು ಹಮ್ಮಿಕೊಂಡಿದೆ
ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ (ಫೋಟೊ- infosysmysoredotin
ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ (ಫೋಟೊ- infosysmysoredotin

ಮೈಸೂರು: ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ಗುಣಮಟ್ಟ ಸುಧಾರಣೆ ಮತ್ತು ಐಟಿ ಉದ್ದಿಮೆಗೆ ಅಗತ್ಯವಾದ ಮಾನವ ಸಂಪನ್ಮೂಲದ ಬೆಳವಣಿಗೆಯ ಗುರಿ ಹೊಂದಿರುವ 'ಐಟಿ ಶಿಕ್ಷಣ ಮಾನದಂಡಗಳ ಮಂಡಲಿ'ಯು (ಬೈಟ್ಸ್‌) ಫೆ.10 ಮತ್ತು 11ರಂದು ಮೈಸೂರಿನ ಇನ್ಫೋಸಿಸ್‌ ಲರ್ನಿಂಗ್‌ ಕ್ಯಾಂಪಸ್‌ನಲ್ಲಿ ತನ್ನ 4ನೇ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಸಂಘಟನೆಯ ಮುಖ್ಯಸ್ಥ ಪ್ರೊ.ಶಡಗೋಪನ್ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Ambulance Strike: ಅನಿರ್ಧಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿದ 108 ಆರೋಗ್ಯ ಕವಚ ಸಿಬ್ಬಂದಿ; ಸಚಿವರ ಮಾತುಕತೆ ಯಶಸ್ವಿ

ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶ, ಯಾರಿಗೆ ಉಂಟು ಅವಕಾಶ

ಕರ್ನಾಟಕದ 2ನೇ ಹಂತದ ಮತದಾನ ಮುಕ್ತಾಯ, ಘರ್ಷಣೆ, ಬಿಸಿಲ ನಡುವೆ ಭಾರೀ ಹಕ್ಕು ಚಲಾವಣೆ

Bangalore News: ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಬಂಧನ; ಎಸ್‌ಐಟಿ ವಿಚಾರಣೆಗೆ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ

ಕೈಗಾರಿಕಾ ಕ್ರಾಂತಿ 4.0: ಅವಕಾಶಗಳು ಮತ್ತು ಸವಾಲುಗಳು' ವಿಚಾರ ಕುರಿತು ನಡೆಯಲಿರುವ ಸಮಾವೇಶದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿನ ಅವರು ಮುಂದಿನ ಮೂರು ವರ್ಷಗಳಲ್ಲಿ ಸಾಧಿಸಬೇಕಾದ ಹಲವು ಮಹತ್ತ್ವದ ಗುರಿಗಳನ್ನು ಇಟ್ಟುಕೊಂಡಿರುವ 'ಬೈಟ್ಸ್‌ ಉನ್ನತಿ' ಕಾರ್ಯಕ್ರಮವಕ್ಕೂ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

'ಬೈಟ್ಸ್ ಉನ್ನತಿ'ಯಡಿಯಲ್ಲಿ ರಾಜ್ಯದ ಗ್ರಾಮೀಣ ಭಾಗಗಳ 10 ಸಾವಿರ ವಿದ್ಯಾರ್ಥಿಗಳಿಗೆ ಉದ್ಯಮಕ್ಕೆ ಅಗತ್ಯವಾದ ತರಬೇತಿ ನೀಡಲಾಗುವುದು. ಸುಮಾರು ಒಂದು ಸಾವಿರ ಕಂಪನಿಗಳು ಕೃತಕ ಬುದ್ಧಿಮತ್ತೆಯ ವ್ಯವಸ್ಥೆಯ ಮೂಲಕ ಈ ವಿದ್ಯಾರ್ಥಿಗಳ ಮೌಲ್ಯಮಾಪನ ಮತ್ತು ಆಯ್ಕೆ ಮಾಡಿಕೊಳ್ಳಲಿವೆ. ಇದರೊಂದಿಗೆ, ಒಂದು ಸಾವಿರ ವಿದ್ಯಾರ್ಥಿನಿಯರಿಗೆ ಕಾರ್ಪೊರೇಟ್‌ ಸ್ಕಾಲರ್‍‌ಶಿಪ್‌ ಕೊಡಲಾಗುವುದು ಮತ್ತು ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ಒಂದು ಸಾವಿರ ಬೋಧಕರಿಗೆ ಪ್ರಮಾಣಪತ್ರ ಸಹಿತ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸಮಾವೇಶದಲ್ಲಿ ಉದ್ಯಮಗಳ ಪರಿಣತರು ವಿವಿಧ ಗೋಷ್ಠಿಗಳಲ್ಲಿ ಮಾತನಾಡಲಿದ್ದು, ಒಟ್ಟು 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 'ಬೈಟ್ಸ್ ಉನ್ನತಿ' ಉಪಕ್ರಮದಿಂದ 16 ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸಹಿತ ಒಟ್ಟು 100 ಎಂಜಿನಿಯರಿಂಗ್ ಕಾಲೇಜುಗಳಿಗೆ ಲಾಭವಾಗಲಿದೆ. ಇದಕ್ಕೆ ಟಿಸಿಎಸ್‌, ಇನ್ಫೋಸಿಸ್‌, ವಿಪ್ರೋ, ಪರ್ಸಿಸ್ಟೆಂಟ್‌, ನೌಕರಿ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ ಎಂದು ಶಡಗೋಪನ್‌ ವಿವರಿಸಿದ್ದಾರೆ.

ಫೆ.13 ರಿಂದ 15 ರವರೆಗೆ ಜಿಲ್ಲಾ ಮಟ್ಟದ ಕಲಿಕಾ ಹಬ್ಬ

ಕೊಡಗು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕೊಡಗು ಜಿಲ್ಲೆ ವತಿಯಿಂದ ಫೆಬ್ರವರಿ, 13 ರಿಂದ 15 ರವರೆಗೆ ಜಿಲ್ಲಾ ಮಟ್ಟದ ಕಲಿಕಾ ಹಬ್ಬ ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಸಂತೋಷದಾಯಕವಾದ ಕಲಿಕೆ ಹಾಗೂ ಕಲಿಕೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸುವುದು ಕಲಿಕಾ ಹಬ್ಬದ ಪರಿಕಲ್ಪನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪೋಷಕರು, ಶಿಕ್ಷಣಾಸಕ್ತರು ಭಾಗವಹಿಸಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕ ಪದನಿಮಿತ್ತ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕರಾದ ರಂಗಧಾಮಯ್ಯ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಕಾಲಾವಕಾಶ

ಕೊಡಗು: ಪ್ರಸಕ್ತ(2022-23) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ “ಸ್ನಾತಕೋತ್ತರ ಹಾಗೂ ವೃತ್ತಿಪರ” ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ, 11 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ http://shp.karnataka.gov.in.. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ ರೂ.1 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

ಸಹಾಯಧನಕ್ಕೆ ಅರ್ಜಿ ಆಹ್ವಾನ

ಕೊಡಗು: ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ.15 ಸಾವಿರ ವರೆಗೆ ಸಹಾಯಧನ ನೀಡಲಾಗುತ್ತದೆ.

ಕುಶಲ ಕರ್ಮಿಯು 18 ವರ್ಷ ವಯಸ್ಸಾಗಿರಬೇಕು ಹಾಗೂ ಇಲಾಖೆ ನಿಗಧಿಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂಕ್ ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) ಪಡೆಯಬೇಕು. ಅಭ್ಯರ್ಥಿಯು ನಿಗಧಿ ಪಡಿಸಿದ ಅರ್ಜಿಯ ಜೊತೆಗೆ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಕುಶಲಕರ್ಮಿ ವೃತ್ತಿಯ ಬಗ್ಗೆ ಧೃಡೀಕರಣ ಪತ್ರಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಫೆಬ್ರವರಿ, 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯನ್ನು (08272-228431 / 228746) ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು