logo
ಕನ್ನಡ ಸುದ್ದಿ  /  ಕರ್ನಾಟಕ  /  Bjp Candidates List: ಬಿಜೆಪಿ ಫಸ್ಟ್‌ ಲಿಸ್ಟ್‌ನಲ್ಲಿ 170ರಿಂದ 180 ಹೆಸರು; ಉಳಿದ 44 ಸ್ಥಾನಗಳಲ್ಲಿ ಆಯ್ಕೆ ಸ್ವಲ್ಪ ಟಫ್‌!

BJP candidates List: ಬಿಜೆಪಿ ಫಸ್ಟ್‌ ಲಿಸ್ಟ್‌ನಲ್ಲಿ 170ರಿಂದ 180 ಹೆಸರು; ಉಳಿದ 44 ಸ್ಥಾನಗಳಲ್ಲಿ ಆಯ್ಕೆ ಸ್ವಲ್ಪ ಟಫ್‌!

Umesh Kumar S HT Kannada

Apr 10, 2023 03:11 PM IST

google News

ಕರ್ನಾಟಕ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಇಂದು ಸಂಜೆ ಪ್ರಕಟವಾಗುವ ನಿರೀಕ್ಷೆ.

  • BJP candidates List: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election)ಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (BJPʼs First List) ಬಿಡುಗಡೆ ಮಾಡಲು ಸಿದ್ಧವಾಗಿದೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಅಭ್ಯರ್ಥಿಗಳ ಹೆಸರು ಇರಲಿದೆ. ಉಳಿದ 44 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸ್ವಲ್ಪ ಟಫ್‌ ಆಗಿರುವಂತೆ ಇದೆ!

ಕರ್ನಾಟಕ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಇಂದು ಸಂಜೆ ಪ್ರಕಟವಾಗುವ ನಿರೀಕ್ಷೆ.
ಕರ್ನಾಟಕ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಇಂದು ಸಂಜೆ ಪ್ರಕಟವಾಗುವ ನಿರೀಕ್ಷೆ.

ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election)ಯಲ್ಲಿ ಸ್ಪರ್ಧಿಸುವುದಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ (BJPʼs First List) ಬಿಡುಗಡೆ ಮಾಡಲು ಸಿದ್ಧವಾಗಿದೆ. ಮೊದಲ ಪಟ್ಟಿ ಯಲ್ಲಿ 170 ರಿಂದ 180 ಅಭ್ಯರ್ಥಿಗಳ ಹೆಸರು ಇರಲಿದೆ. ಉಳಿದ 44 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸ್ವಲ್ಪ ಟಫ್‌ ಆಗಿರುವಂತೆ ಇದೆ!

ಹೌದು, ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಸುಳಿವು ನೀಡಿದ್ದಾರೆ. ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆಯೊಳಗೆ ಪ್ರಕಟವಾಗಲಿದೆ. ಇದರಲ್ಲಿ 170ರಿಂದ 180 ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಯಡಿಯೂರಪ್ಪ, “ರಾಜ್ಯದಲ್ಲಿ ಮೇ10ರಂದು ನಡೆಯಲಿರುವ ಕರ್ನಾಟಕ ಅಸೆಂಬ್ಲಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. 170ರಿಂದ 180ರ ತನಕ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿ ಇರಲಿದ್ದು, ಇಂದು ಸಂಜೆ ಬಿಡುಗಡೆ ಆಗಲಿದೆ” ಎಂದು ಹೇಳಿದರು.

ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾನುವಾರ ಸಂಜೆ, ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿತು. ಪ್ರಧಾನಿ ಮೋದಿ ಜತೆಗೆ ಕೇಂದ್ರ ಸಚಿವರಾದ ಅಮಿತ್ ಶಾ, ಪ್ರಲ್ಹಾದ್ ಜೋಶಿ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದರು.

ಏತನ್ಮಧ್ಯೆ, ವಿಧಾನಸಭೆ ಚುನಾವಣೆಗೆ ಬಾಕಿ ಉಳಿದಿರುವ 58 ಟಿಕೆಟ್‌ಗಳನ್ನು ಹಂಚಿಕೆ ಮಾಡಲು ಕಾಂಗ್ರೆಸ್ ಸಿಇಸಿ ಕೂಡ ಸಭೆ ನಡೆಸುವ ಸಾಧ್ಯತೆಯಿದೆ. ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ 124 ಹೆಸರುಗಳು ಮತ್ತು ಎರಡನೆಯದು 42 ಹೆಸರುಗಳನ್ನು ಒಳಗೊಂಡಿತ್ತು. ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಎರಡನೇ ರಣರಂಗ ಎಂದೇ ಬಿಂಬಿತವಾಗಿರುವ ಕೋಲಾರ ಕ್ಷೇತ್ರದತ್ತ ಎಲ್ಲರ ಕಣ್ಣು ನೆಟ್ಟಿದೆ. ಆದರೆ, ಕೋಲಾರದ ಅಭ್ಯರ್ಥಿ ಬಗ್ಗೆ ಪಕ್ಷ ಇನ್ನೂ ಸಸ್ಪೆನ್ಸ್ ಕಾಯ್ದುಕೊಂಡಿದೆ.

ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಎಲ್ಲ 224 ಕ್ಷೇತ್ರಗಳಿಗೂ ಒಂದೇ ಬಾರಿ ಮತದಾನ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜಾತ್ಯತೀ ಜನತಾದಳ ನಡುವೆ ಚುನಾವಣಾ ಕದನ ಪ್ರಮುಖವಾಗಿ ನಡೆಯಲಿದೆ.

ಗಮನಿಸಬಹುದಾದ ಸುದ್ದಿ

YSV Datta: 'ಕಾಂಗ್ರೆಸ್​​ನಿಂದ ಅನ್ಯಾಯ': ಸ್ವತಂತ್ರ ಅಭ್ಯರ್ಥಿಯಾಗಿ ವೈಎಸ್‌ವಿ ದತ್ತ ಸ್ಪರ್ಧೆ.. ಭಿಕ್ಷೆ ಬೇಡಿದ ಜೆಡಿಎಸ್‌ ಮಾಜಿ ನಾಯಕ

ಕಾಂಗ್ರೆಸ್​​ನಿಂದ ಟಿಕೆಟ್​ ಸಿಗದ ಕಾರಣ ವೈಎಸ್‌ವಿ ದತ್ತ ಎಂದೇ ಜನಪ್ರಿಯರಾಗಿರುವ ಮಾಜಿ ಶಾಸಕ ಯಗಟಿ ಸೂರ್ಯನಾರಾಯಣ ವೆಂಕಟೇಶ ದತ್ತ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ