logo
ಕನ್ನಡ ಸುದ್ದಿ  /  ಕರ್ನಾಟಕ  /  Dk Shivakumar On Bjp List: ನಾಯಕರನ್ನ ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ: ಡಿಕೆ ಶಿವಕುಮಾರ್

DK Shivakumar on BJP List: ನಾಯಕರನ್ನ ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ: ಡಿಕೆ ಶಿವಕುಮಾರ್

Raghavendra M Y HT Kannada

Apr 09, 2023 10:37 PM IST

google News

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.

  • ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿಗಳನ್ನ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.
ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Assembly Elections) ರಾಜಕೀಯ ಪಕ್ಷಗಳು ಎರಡ್ಮೂರು ದಿನಗಳಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿ ಅಖಾಡಕ್ಕೆ ಇಳಿಸಲಿವೆ.

ಕಾಂಗ್ರೆಸ್ (Congress) ಈಗಾಗಲೇ ಎರಡು ಹಂತಗಳಲ್ಲಿ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದರೆ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು ತಮ್ಮ ಪಕ್ಷದ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಆದರೆ ಆಡಳಿತಾರೂಢ ಬಿಜೆಪಿ (BJP) ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿಲ್ಲ. ಟಿಕೆಟ್ ಸಿಗದವರು ಮುನಿಸಿಕೊಂಡು ಬೇರೆ ಪಕ್ಷಕ್ಕೆ ಹಾರುವ ಭಯ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC President DK Shivakumar) ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ( BJP Candidates List) ತಡವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ.

ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು ಕಾಯುತ್ತಿದ್ದಾರೆ ಎಂದು ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ಪಟ್ಟಿ ನೋಡಿಕೊಂಡು ಕಾಂಗ್ರೆಸ್ 3ನೇ ಪಟ್ಟಿ!

ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬಿಡುಗಡೆ ಯಾವಾಗ ಎಂದು ಕೇಳಿದಾಗ, ‘ಬಿಜೆಪಿಯ ಪಟ್ಟಿ ನೋಡೋಣ. ಅವರ ಮೊದಲ ಪಟ್ಟಿ ಬಿಡುಗಡೆ ಯಾವಾಗ ಎಂದು ನೀವು ಅವರನ್ನು ಕೇಳುತ್ತಲೇ ಇಲ್ಲ. ಅವರು ಪಟ್ಟಿ ಬಿಡುಗಡೆ ಮಾಡಲಿ ನೋಡೋಣ’ ಎಂದಿದ್ದಾರೆ.

‘ಬಿಜೆಪಿಯವರು ತಮ್ಮ ನಾಯಕರನ್ನು ಈ ರೀತಿ ಹಿಡಿದಿಟ್ಟುಕೊಳ್ಳಬಹುದು. ಆದರೆ ರಾಜ್ಯದ ಮತದಾರರು ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಸರ್ಕಾರವನ್ನು ತರಲು ತೀರ್ಮಾನ ಮಾಡಿಯಾಗಿದೆ ಎಂದು ಹೇಳಿದ್ದಾರೆ.

ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಕೇಳಿದಾಗ, ಧ್ರುವನಾರಾಯಣ ಅವರು ಇಂದು ನಮ್ಮ ಜತೆ ಇಲ್ಲ. ಅವರ ಸ್ಥಾನವನ್ನು ತುಂಬಲು ಅದೇ ಪ್ರಭಾವ ಹಾಗೂ ಅವರ ಆತ್ಮೀಯರಾದ ಚಂದ್ರಪ್ಪ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಚಂದ್ರಪ್ಪ ಅವರು ಹಿರಿಯರು, ಉತ್ತಮವಾಗಿ ಕೆಲಸ ಮಾಡುತ್ತಾರೆ. ಅವರಿಗೆ ಶುಭವಾಗಲಿ. ಅವರು ಧ್ರುವನಾರಾಯಣ ಅವರ ಜಾಗದಲ್ಲಿ ಕೂತು ಕಾಂಗ್ರೆಸ್ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಅನೇಕ ಟಿಕೆಟ್ ವಂಚಿತರಿಗೆ ಜೆಡಿಎಸ್ ಗಾಳ ಹಾಕುತ್ತಿದೆ ಎಂಬ ಪ್ರಶ್ನೆಗೆ, ಅವರು ಹಾಕಲಿ, ತೊಂದರೆ ಇಲ್ಲ. ಅವರ ಪಕ್ಷದಿಂದ ಹಾಲಿ ಶಾಸಕರುಗಳೇ ನಮ್ಮ ಪಕ್ಷ ಸೇರುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಪಕ್ಷದಿಂದ ಸ್ಪರ್ಧಿಸಿದ್ದ 20 ಮಂದಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ನಾವು ಅವರ ಪ್ರಯತ್ನವನ್ನು ಪ್ರಶ್ನಿಸುವುದಿಲ್ಲ. ರಾಜಕೀಯದಲ್ಲಿ ಇದೆಲ್ಲವೂ ಸರ್ವೇ ಸಾಮಾನ್ಯ. ರಾಜ್ಯದ ಜನರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ. ಜನರ ಸೇವೆ ಮಾಡಿ ಪ್ರಜಾಪ್ರಭುತ್ವ ರಕ್ಷಣೆ ಮಾಡುತ್ತೇವೆ ಎಂದಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ನಿಂದ ಮತ್ತಷ್ಟು ಶಾಸಕರು ಕಾಂಗ್ರೆಸ್ ಸೇರುತ್ತಾರಾ ಎಂಬ ಪ್ರಶ್ನೆಗೆ, ‘ನಾನು ಈಗಲೇ ಆ ಗುಟ್ಟನ್ನು ರಟ್ಟು ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಯಾರು ಎಂದು ತಿಳಿಸಿಲ್ಲ ಎಂಬ ಪ್ರಶ್ನೆಗೆ, ‘ನಮ್ಮ ಸಂಸ್ಕೃತಿಯೇ ನಮ್ಮ ದೇಶದ ಆಸ್ತಿ. ಪ್ರತಿಯೊಬ್ಬರಿಗೂ ಅವರದೇ ಆದ ನಂಬಿಕೆ, ಆಚರಣೆ ಇರುತ್ತದೆ. ನಮ್ಮ ದೇಶದಲ್ಲಿ ರಾಮನ ತಂದೆ ಧಶರಥನಿಗಿಂತ ರಾಮನ ಭಂಟ ಹನುಮಂತನಿಗೆ ಹೆಚ್ಚು ದೇವಾಲಯಗಳಿವೆ. ಕಾರಣ ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೋ ಅವರಿಗೆ ಜನ ಆದ್ಯತೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ