logo
ಕನ್ನಡ ಸುದ್ದಿ  /  Karnataka  /  Bjp People S Party Congress And Jds Family Parties Says Dr C N Ashwath Narayan

Minister Ashwath Narayan: ಬಿಜೆಪಿ ಜನಪರ ಪಕ್ಷ; ಕಾಂಗ್ರೆಸ್- ಜೆಡಿಎಸ್ ಕುಟುಂಬ ಪಕ್ಷಗಳು: ಸಚಿವ ಅಶ್ವಥ್ ನಾರಾಯಣ

HT Kannada Desk HT Kannada

Nov 28, 2022 01:29 PM IST

ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ ಸಿ.ಎನ್.ಅಶ್ವತ್ಥ್ ನಾರಾಯಣ

  • ಸ್ವಾರ್ಥ ರಾಜಕಾರಣ ಸಲ್ಲದು. ಜನಪರ ಕೆಲಸ ಮಾಡುವವರು ನಾಯಕ. ಜನದ್ರೋಹಿಗಳಿಗೆ ಪಾಠ ಕೊಡುವ ಕೆಲಸ ಆಗಬೇಕಿದೆ. ಗುಲಾಮಗಿರಿ ಸಹಿಸದೆ ಹಲವು ನಾಯಕರು ಈಗಾಗಲೇ ಜೆಡಿಎಸ್ ತೊರೆದಿದ್ದಾರೆ. ಮಂಡ್ಯದ ಸಮೃದ್ಧಿಯನ್ನು ಹೆಚ್ಚಿಸಲು ನಿಜ ಸ್ವಾತಂತ್ರ್ಯ ರೂಪಿಸಲು ಬಿಜೆಪಿ ಸೂಕ್ತವಾದ ಪಕ್ಷ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. 

ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ ಸಿ.ಎನ್.ಅಶ್ವತ್ಥ್ ನಾರಾಯಣ
ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ ಸಿ.ಎನ್.ಅಶ್ವತ್ಥ್ ನಾರಾಯಣ

ಬೆಂಗಳೂರು: ದೇಶದಲ್ಲಿ ಪ್ರತಿಯೊಬ್ಬರೂ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಬಿಜೆಪಿಯನ್ನು ಪ್ರೀತಿಸುತ್ತಾರೆ. ಕಾಂಗ್ರೆಸ್- ಜೆಡಿಎಸ್ ಕುಟುಂಬ ಪಕ್ಷಗಳಾದರೆ, ಬಿಜೆಪಿ ಜನಪರ ಪಕ್ಷ ಎಂದು ರಾಜ್ಯದ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವ ಡಾ ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರಿನಲ್ಲಿ ಏರಿಯೇಟರ್‌ ಅಳವಡಿಕೆ ಗಡುವು ಮೇ 7 ರವರೆಗೆ ವಿಸ್ತರಣೆ; ಮರುದಿನದಿಂದಲೇ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ

Mangalore News: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿಗಳು

Bengaluru Crime News: ಸಹಪಾಠಿ ಬಳಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಆರೋಪ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ

Udupi News: ಪಾತ್ರ ಮುಗಿಸಿ, ಬಣ್ಣ ತೆಗೆಯುವಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ್ ಪುತ್ತೂರು

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಕೆ.ಪಿ.ಸಿ.ಸಿ ಮಾಜಿ ಸದಸ್ಯ ಎಸ್. ಸಚ್ಚಿದಾನಂದ ಮತ್ತು ಇತರ ಕಾಂಗ್ರೆಸ್ ಮುಖಂಡರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂಡ್ಯವು ಹಿಂದೆ ಅಭಿವೃದ್ಧಿಗೆ ಹೆಸರುವಾಸಿಯಾಗಿತ್ತು. ಆದರೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಆ ಜಿಲ್ಲೆ ಕುಸಿತ ಕಂಡಿತು. ಆ ಜಿಲ್ಲೆಯಲ್ಲಿ ಜನರಿಂದ ಅವಕಾಶ ಪಡೆದ ಪ್ರತಿನಿಧಿಗಳು ಸಮರ್ಪಕವಾಗಿ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದರು.

ಸ್ವಾರ್ಥ ರಾಜಕಾರಣ ಸಲ್ಲದು. ಜನಪರ ಕೆಲಸ ಮಾಡುವವರು ನಾಯಕ. ಜನದ್ರೋಹಿಗಳಿಗೆ ಪಾಠ ಕೊಡುವ ಕೆಲಸ ಆಗಬೇಕಿದೆ. ಗುಲಾಮಗಿರಿ ಸಹಿಸದೆ ಹಲವು ನಾಯಕರು ಈಗಾಗಲೇ ಜೆಡಿಎಸ್ ತೊರೆದಿದ್ದಾರೆ. ಮಂಡ್ಯದ ಸಮೃದ್ಧಿಯನ್ನು ಹೆಚ್ಚಿಸಲು ನಿಜ ಸ್ವಾತಂತ್ರ್ಯ ರೂಪಿಸಲು ಬಿಜೆಪಿ ಸೂಕ್ತವಾದ ಪಕ್ಷ ಎಂದು ತಿಳಿಸಿದರು.

ಮಂಡ್ಯದ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ನಿಸ್ವಾರ್ಥವಾಗಿ ನಾವು ಕೆಲಸ ಮಾಡುತ್ತೇವೆ. ವಿಶ್ವಕ್ಕೇ ಭರವಸೆಯನ್ನು ಕರ್ನಾಟಕ ನೀಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಭೆ ಇರುವ ನಾಡು ಕರ್ನಾಟಕ. ಸ್ವಾಭಿಮಾನದಿಂದ ಕೆಲಸ ಮಾಡಲು ಅವಕಾಶವಿರುವ ಪಕ್ಷ ಬಿಜೆಪಿ ಎಂದು ಹೇಳಿದರು.

ತುಷ್ಟೀಕರಣದ ರಾಜಕೀಯ ಮಾಡುವ ಎರಡೂ ಪಕ್ಷಗಳಿಗೆ ಪಾಠ ಕಲಿಸಿಬೇಕು. ಬಿಜೆಪಿಯನ್ನು ಬೆಂಬಲಿಸಿ ಗೆಲ್ಲಿಸಬೇಕೆಂದು ಸಚಿವ ಅಶ್ವತ್ಥ್ ನಾರಾಯಣ್ ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಮಾತನಾಡಿ, ಸಚ್ಚಿದಾನಂದ ಅವರು ಪಕ್ಷ ಸೇರ್ಪಡೆಯಿಂದ ಮಂಡ್ಯ ಜಿಲ್ಲೆಯಲ್ಲಿ ಹೊಸ ಶಕ್ತಿ ಮತ್ತು ನವೀನ ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.

ಎಲ್ಲಾ ಶಾಸಕ ಸ್ಥಾನಗಳನ್ನು ಪಕ್ಷ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕುಂಭ ಮೇಳದ ಯಶಸ್ವಿಗಾಗಿ ಮೆಚ್ಚುಗೆ ಸೂಚಿಸಿದರು. ಹಿಂದುತ್ವದ ವಾತಾವರಣ ಮಂಡ್ಯ ಜಿಲ್ಲೆಯಲ್ಲಿ ಉಂಟಾಗಿದೆ ಎಂದು ತಿಳಿಸಿದರು.

ರಾಜ್ಯದ ರೇಷ್ಮೆ, ಯುವಸಬಲೀಕರಣ ಮತ್ತು ಕ್ರೀಡೆ ಖಾತೆ ಸಚಿವ ಕೆ.ಸಿ. ನಾರಾಯಣಗೌಡ ಮಾತನಾಡಿ, ಕಾಂಗ್ರೆಸ್ಸಿನ ಹಲವಾರು ಮುಖಂಡರು ಪಕ್ಷ ಸೇರಿದ್ದರಿಂದ ಬಿಜೆಪಿ ಇನ್ನಷ್ಟು ಬಲಗೊಂಡಿದೆ. ಇತರ ಪಕ್ಷಗಳ ಭದ್ರಕೋಟೆಯನ್ನು ಒಡೆಯುವ ದೊಡ್ಡ ಶಕ್ತಿ ಇದೀಗ ಬಿಜೆಪಿಗೆ ಬಂದಿದೆ ಎಂದು ಹೇಳಿದರು.

ಕನಿಷ್ಠ 7 ಶಾಸಕರ ಸ್ಥಾನವನ್ನು ನಾವು ಮಂಡ್ಯದಲ್ಲಿ ಗೆಲ್ಲುವುದು ಖಚಿತ ಎಂದ ಅವರು, ಜೆಡಿಎಸ್- ಕಾಂಗ್ರೆಸ್ ಪಕ್ಷಕ್ಕೆ ನಾವು ಭಯಪಡಬೇಕಿಲ್ಲ. ಗೂಂಡಾಗಳಿಗೆ ತಕ್ಕ ಪಾಠವನ್ನು ನಮ್ಮ ಪಕ್ಷ ಕಲಿಸಿದೆ ಎಂದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಮಾತನಾಡಿ, ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಎದುರಿಸಲು ಬಿಜೆಪಿ ಸಮರ್ಥ ಅಭ್ಯರ್ಥಿಗಳನ್ನು ಹೊಂದಿದೆ. ಪಕ್ಷಕ್ಕೆ ಹಠ- ಛಲ ಇರಬೇಕು. ಪಕ್ಷವು ಮೋದಿಜಿ- ಬೊಮ್ಮಾಯಿ ಮತ್ತು ಇತರ ಸಮರ್ಥ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿ 150ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೋವಿಡ್ ಸಂಕಷ್ಟ ನಿವಾರಣೆಗೆ ಕೇಂದ್ರ- ರಾಜ್ಯ ಸರ್ಕಾರಗಳು ಗರಿಷ್ಠ ನೆರವು ನೀಡಿವೆ. ಫಲಾನುಭವಿಗಳ ಭೇಟಿಯಿಂದ ಪಕ್ಷಕ್ಕೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಈಗ ಪಕ್ಷದ ಸರ್ಕಾರಗಳು ಅಭಿವೃದ್ಧಿಗೆ ಆದ್ಯತೆ ನೀಡಿವೆ. ಇದು ಪಕ್ಷದ ಗೆಲುವಿಗೆ ಪೂರಕ ಎಂದು ತಿಳಿಸಿದರು. ಕಾರ್ಯಕರ್ತರು ಮತ್ತು ಪಕ್ಷಕ್ಕೆ ಸೇರಿದವರು ಸರ್ಕಾರಗಳಿಂದ ಲಭಿಸಿದ ಪ್ರಯೋಜವನ್ನು ಜನರಿಗೆ ತಿಳಿಸಬೇಕಿದೆ ಎಂದು ಸಲಹೆ ನೀಡಿದರು.

ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮಾತನಾಡಿ, ಬಿಜೆಪಿಗೆ ಮಂಡ್ಯ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮಂಡ್ಯ ಜಿಲ್ಲೆಯು ಜಿದ್ದಾಜಿದ್ದಿನ ಕ್ಷೇತ್ರಗಳನ್ನು ಹೊಂದಿದೆ. ಜನರು ಬಿಜೆಪಿ ಪರ ಬರುವಂತೆ ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ಮನವಿ ಮಾಡಿದರು.

ಕೆ.ಪಿ.ಸಿ.ಸಿ ಮಾಜಿ ಸದಸ್ಯ ಎಸ್ ಸಚ್ಚಿದಾನಂದ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮತ್ತು 2013 ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಲ್. ಲಿಂಗರಾಜು, ಮುಖಂಡ ಬಾಬು ಹನುಮಾನ್, ಮಲ್ಲಿಕಾರ್ಜುನ್ (ಫೈಟರ್ ರವಿ), ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ರಾಮಲಿಂಗಯ್ಯ, ಶ್ರೀಮತಿ ಮಮತಾ ಧನಂಜಯ್, ಶ್ರೀಮತಿ ನಾಗರತ್ನ ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ರಾಮೇಗೌಡ, ತಾಲೂಕು ಪಂಚಾಯತಿ ಮಾಜಿ ಸದಸ್ಯರಾದ ನಂದಮಣಿ ಚಂದ್ರಶೇಖರ್, ಯೋಗಾನಂದ ಪಟೇಲ್, ಶ್ರೀಮತಿ ಲಕ್ಷ್ಮಮ್ಮ, ಇಂಡುವಾಳ ಗ್ರಾಮ ಪಂಚಾಯತಿ ಅಧ್ಯಕ್ಷ ಮುನಿಸ್ವಾಮಿ, ಬೇವಿನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಮಹೇಶ್, ಸೂನಗಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಮಚಂದ್ರ ಕೆ, ಇಂಡುವಾಳ ಗ್ರಾ.ಪಂ ಮಾಜಿ ಅಧ್ಯಕ್ಷ ಸ್ವಾಮಿ ಅವರು ಬಿಜೆಪಿ ಸೇರಿದರು.

ಶಾಸಕರಾದ ಸತೀಶ್ ರೆಡ್ಡಿ, ಎಲ್. ರವಿಸುಬ್ರಹ್ಮಣ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಮತ್ತು ಮಂಡ್ಯ ಜಿಲ್ಲಾ ಪ್ರಭಾರಿ ಜಗದೀಶ್ ಹಿರೇಮನಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು