logo
ಕನ್ನಡ ಸುದ್ದಿ  /  ಕರ್ನಾಟಕ  /  Bmtc Chikkaballapura: ಬೆಂಗಳೂರು ಬಿಟ್ಟು ಬಿಎಂಟಿಸಿ ಎಲ್ಲೂ ಹೋಗದು ಅನ್ನೋ ಹಾಗಿಲ್ಲ, ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌!

BMTC Chikkaballapura: ಬೆಂಗಳೂರು ಬಿಟ್ಟು ಬಿಎಂಟಿಸಿ ಎಲ್ಲೂ ಹೋಗದು ಅನ್ನೋ ಹಾಗಿಲ್ಲ, ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌!

HT Kannada Desk HT Kannada

Mar 17, 2023 05:33 PM IST

google News

ಬೆಂಗಳೂರು ಬಿಟ್ಟು ಬಿಎಂಟಿಸಿ ಎಲ್ಲೂ ಹೋಗದು ಅನ್ನೋ ಹಾಗಿಲ್ಲ, ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌!

    • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ.
ಬೆಂಗಳೂರು ಬಿಟ್ಟು ಬಿಎಂಟಿಸಿ ಎಲ್ಲೂ ಹೋಗದು ಅನ್ನೋ ಹಾಗಿಲ್ಲ, ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌!
ಬೆಂಗಳೂರು ಬಿಟ್ಟು ಬಿಎಂಟಿಸಿ ಎಲ್ಲೂ ಹೋಗದು ಅನ್ನೋ ಹಾಗಿಲ್ಲ, ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್‌!

ಬೆಂಗಳೂರು: ಕೊನೆಗೂ ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ ಸಂಚಾರಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಮತಿ ನೀಡಿದೆ. ಬೆಂಗಳೂರು ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿರುವುದಕ್ಕೆ ಪೂರಕವಾಗಿ ಇನ್ಮುಂದೆ ಬಿಎಂಟಿಸಿ ಬಸ್‌ಗಳು ಬೆಂಗಳೂರು-ಚಿಕ್ಕಮಗಳೂರು ನಡುವೆ ಸಂಚಾರ ಕೈಗೊಳ್ಳಲಿವೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಾಚೆಗೂ ಬಿಎಂಟಿಸಿ ಬಸ್‌ಗಳು ಸಂಚರಿಸಲಿವೆ.

"ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ" ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ.

ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಚಿಕ್ಕಬಳ್ಳಾಪುರದ ಜನತೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆಗಳು. ಈ ಬೇಡಿಕೆಯನ್ನು ಸಾಕಾರಗೊಳಿಸಲು ಶ್ರಮಿಸಿದ ಬಿಎಂಟಿಸಿ ಉಪಾಧ್ಯಕ್ಷರಾದ ಶ್ರೀ ನವೀನ್ ಕಿರಣ್ ಅವರಿಗೆ ಅಭಿನಂದನೆಗಳು ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಂಬಂಧಪಟ್ಟ ಆದೇಶಪತ್ರವನ್ನೂ ಸುಧಾಕರ್‌ ಟ್ವೀಟ್‌ ಮಾಡಿದ್ದಾರೆ. "ಬೆಂಗಳೂರು - ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆಗಳನ್ನು ಕಾರ್ಯಾಚರಿಸಲು ಸಹಮತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂ.ಮ.ಸಾ.ಸಂಸ್ಥೆಯ ಸಾರಿಗೆಗಳನ್ನು ಪ್ರಾಯೋಗಿಕವಾಗಿ ಕಾರ್ಯಾಚರಿಸಲು ಯೋಜಿಸಿರುವುದಾಗಿ ತಿಳಿಸಿ, ಸದರಿ ಸಾರಿಗೆಯನ್ನು ಕಾರ್ಯಾಚರಿಸಲು ಸಹಮತಿ ನೀಡಲು ಕೋರಿ ಕಳುಹಿಸಲಾಗಿರುವ ಉಲ್ಲೇಖಿತ ಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಬೆಂಗಳೂರು-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂ.ಮ.ಸಾ.ಸಂಸ್ಥೆಯ ವತಿಯಿಂದ 2 ಎ.ಸಿ ಬಸ್ಸುಗಳನ್ನು ಪ್ರಾಯೋಗಿಕವಾಗಿ ಕಾರ್ಯಾಚರಣೆ ಮಾಡಲು ಸಹಮತಿ ನೀಡಲಾಗಿದೆ" ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಬಿಎಂಟಿಸಿ ಬಸ್‌ ಸೇವೆಯನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವುದಕ್ಕೆ ಕೆಎಸ್‌ಆರ್‌ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರು-ಚಿಕ್ಕಬಳ್ಳಾಪುರ ನಡುವೆ 60 ಕಿ.ಮೀ. ದೂರವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಬಸ್‌ ಪ್ರಯಾಣಿಸಲಿ. ಚಿಕ್ಕಬಳ್ಳಾಪುರಕ್ಕೆ ಸಂಚಾರ ವಿಸ್ತರಿಸಲು ಅವಕಾಶವಿಲ್ಲ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಎಂಟಿಸಿ ಬಸ್‌ ವಿಸ್ತರಣೆಯಿಂದ ಕೆಎಸ್‌ಆರ್‌ಟಿಸಿ ಆದಾಯ ಕಡಿಮೆಯಾಗಬಹುದು ಎನ್ನುವ ಆತಂಕ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗಿತ್ತು.

ಪ್ರಯಾಣಿಕನಿಗೆ ಒಂದು ರೂ. ಚಿಲ್ಲರೆ ನೀಡದ ಕಂಡೆಕ್ಟರ್‌ಗೆ ಮೂರು ಸಾವಿರ ರೂ. ದಂಡ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಲೇಡಿ ಕಂಡೆಕ್ಟರ್‌ ಪ್ರಯಾಣಿಕರೊಬ್ಬರಿಗೆ ಒಂದು ರೂಪಾಯಿ ಬಾಕಿ ನೀಡಿರಲಿಲ್ಲ. ಬಾಕಿ ಕೇಳಿದ್ದಕ್ಕೆ ಅಪಹಾಸ್ಯ ಮಾಡಿದ್ದರು. ಇದರಿಂದ ಬೇಸರಗೊಂಡ ಆ ವ್ಯಕ್ತಿಯು ಗ್ರಾಹಕ ನ್ಯಾಯಾಲಯಕ್ಕೆ ಹೋಗಿ ಪರಿಹಾರ ಪಡೆದಿದ್ದಾರೆ. ಸುಮಾರು ಮೂರು ವರ್ಷಗಳ ನಂತರ ಗ್ರಾಹಕ ನ್ಯಾಯಾಲಯವು ಪ್ರಯಾಣಿಕರ ಪರ ತೀರ್ಪು ನೀಡಿದ್ದು, ಮೂರು ಸಾವಿರ ರೂಪಾಯಿ ಪರಿಹಾರ ನೀಡುವಂತೆ ಸೂಚಿಸಿತ್ತು. ಈ ವರದಿ ಇಲ್ಲಿದೆ ಓದಿ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ