logo
ಕನ್ನಡ ಸುದ್ದಿ  /  ಕರ್ನಾಟಕ  /  Border Dispute: ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತ; ಹಿರಿಯ ವಕೀಲರ ಬಲಿಷ್ಠ ತಂಡ ರಚನೆ- ಸಿಎಂ ಬೊಮ್ಮಾಯಿ

Border dispute: ರಾಜ್ಯದ ಗಡಿ ರಕ್ಷಣೆಗೆ ನಾವು ಸಶಕ್ತ; ಹಿರಿಯ ವಕೀಲರ ಬಲಿಷ್ಠ ತಂಡ ರಚನೆ- ಸಿಎಂ ಬೊಮ್ಮಾಯಿ

HT Kannada Desk HT Kannada

Nov 22, 2022 08:18 AM IST

ಬಸವರಾಜ್‌ ಬೊಮ್ಮಾಯಿ

  • Border Dispute with Maharashtra: ರಾಜ್ಯದ ಗಡಿರಕ್ಷಣೆಗೆ ನಾವು ಸಶಕ್ತರಾಗಿದ್ದೇವೆ. ಹಿರಿಯ ವಕೀಲರ ಬಲಿಷ್ಠ ತಂಡವನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ಬಸವರಾಜ್‌ ಬೊಮ್ಮಾಯಿ
ಬಸವರಾಜ್‌ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಗಡಿವಿವಾದಗಳನ್ನು ಬಗೆಹರಿಸಲು ಹಿರಿಯ ವಕೀಲರ ಅತ್ಯಂತ ಬಲಿಷ್ಠವಾಗಿರುವ ತಂಡವನ್ನು ರಚನೆ ಮಾಡಲಾಗಿದೆ. ಗಡಿವಿವಾದದ ಬಗ್ಗೆ ಸೋಮವಾರ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟ್ರೆಂಡಿಂಗ್​ ಸುದ್ದಿ

HD Revanna: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಬಂಧನ; ಮಾಜಿ ಪ್ರಧಾನಿ ದೇವೇಗೌಡರ ಪುತ್ರನ ವಿರುದ್ಧ ಅಪಹರಣ ಕೇಸ್, ತಿಳಿಯಬೇಕಾದ 10 ಅಂಶಗಳಿವು

ಮಂಗಳೂರಿನಲ್ಲಿ ಶಾಖಾಘಾತ; ಚಲಿಸುತ್ತಿದ್ದ ಬಸ್ ಗಾಜು ಒಡೆದು ಮೂವರಿಗೆ ಗಾಯ; ಕರಾವಳಿಯಲ್ಲಿ ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು

HD Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

ಸಂಪಾದಕೀಯ: ತಲೆಮರೆಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ಹಗರಣದ ಸಂತ್ರಸ್ತೆಯರು, ವ್ಯವಸ್ಥೆಯ ಮೇಲೆ ಭರವಸೆ ಹುಟ್ಟುವುದು ಸುಲಭವಲ್ಲ

ಅವರು ರೇಸ್‌ಕೋರ್ಸ್ ನಿವಾಸದಲ್ಲಿ ಸೋಮವಾರ ಗಡಿವಿವಾದದ ಕುರಿತು ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವೇಳೆ ಈ ವಿಚಾರ ತಿಳಿಸಿದರು.

ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲ ರಘುಪತಿ ಅವರನ್ನೊಳಗೊಂಡ ಸಮಿತಿ ಇದು ಎಂದು ಅವರು ವಿವರಣೆ ನೀಡಿದರು.

ವಕೀಲರ ತಂಡವು ಈಗಾಗಲೇ 2-3 ಸಲ ಸಭೆ ಸೇರಿ ಗಡಿ ವಿವಾದ ವಿಚಾರಗಳ ಬಗ್ಗೆ ಏನು ವಾದ ಮಾಡಬೇಕು ಎಂಬುದನ್ನು ಚರ್ಚಿಸಿದೆ. ಮುಂದಿನ ಕ್ರಮಗಳ ಕುರಿತು ಸಿದ್ಧತೆ ಮಾಡಿಕೊಂಡಿದ್ದಾರೆ. ಮಂಗಳವಾರ ಸಂಜೆ ಈ ವಕೀಲರೊಂದಿಗೆ ವಿಡಿಯೋ ಸಂವಾದ ನಡೆಸುತ್ತಿದ್ದು, ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕರಿಗೆ ಹಾಗೂ ಎಲ್ಲ ಪಕ್ಷದ ನಾಯಕರಿಗೆ ಈಗಾಗಲೇ ಪತ್ರವನ್ನು ಮಂಗಳವಾರ (ಇಂದು) ಬೆಳಗ್ಗೆ ಕಳಿಸಿಕೊಡಲಾಗುತ್ತಿದೆ. ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಹಾರಾಷ್ಟ್ರ ಸಲ್ಲಿಸಿರುವ ಅರ್ಜಿಗೆ ಮಾನ್ಯತೆ ದೊರಕಿಲ್ಲ. ಮೆಂಟೇನಬಿಲಿಟಿ ಈವರೆಗೆ ಸಿಕ್ಕಿಲ್ಲ. ಸಿಗುವುದೂ ಇಲ್ಲ. ಮೆಂಟೇನಬಿಲಿಟಿ ಆಗಬೇಕೋ ಬೇಡವೋ ಎನ್ನುವ ಬಗ್ಗೆಯೇ ಇನ್ನೂ ಚರ್ಚೆಯಾಗುತ್ತಿದೆ. ಮುಖ್ಯಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯ ಇನ್ನೂ ಪರಿಗಣಿಸಿಲ್ಲ. ಮೆಂಟೇನಬಿಲಿಟಿ ಆಗುವುದಿಲ್ಲ, ಇದನ್ನು ಪರಿಗಣಿಸಬಾರದು ಎಂದು ವಾದಿಸಲು ನಾವು ಸಿದ್ಧರಿದ್ದೇವೆ. ಸಂವಿಧಾನ ಬದ್ಧವಾಗಿ 3 ನೇ ಕಲಂ ಪ್ರಕಾರ ರಾಜ್ಯ ಪುನರ್ ವಿಂಗಡನಾ ಕಾಯ್ದೆ ರಚನೆಯಾಯಿತು. ಕಾಯ್ದೆಯ ಪ್ರಕಾರ ಆಗಿದ್ದನ್ನು ಪುನರ್ ಪರಿಶೀಲನೇ ಮಾಡಿದ ಉದಾಹರಣೆ ಇಲ್ಲ ಹಾಗೂ ಅಂಥ ಸಂದರ್ಭವೂ ಒದಗಿಬಂದಿಲ್ಲ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.

ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ

ಮಹಾರಾಷ್ಟ್ರದಲ್ಲಿ ಗಡಿ ವಿವಾದವೇ ರಾಜಕೀಯ ವಸ್ತುವಾಗಿದೆ. ಯಾವುದೇ ಪಕ್ಷದ ಸರ್ಕಾರವಿದ್ದರೂ ಎಲ್ಲಾ ಪಕ್ಷಗಳು ಕೂಡ ತಮ್ಮ ರಾಜಕೀಯ ಕಾರಣಕ್ಕಾಗಿ ಇದನ್ನು ಎತ್ತುವ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ನಾವು ಕರ್ನಾಟಕದ ಗಡಿ ರಕ್ಷಣೆ ಮಾಡಲು ಎಲ್ಲಾ ರೀತಿಯಲ್ಲಿ ಸಶಕ್ತರಾಗಿದ್ದೇವೆ. ಎಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕನ್ನಡ ನಾಡು, ನುಡಿ, ನೀರಿನ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಒಂದಾಗಿ ಹೋರಾಟ ಮಾಡುವ ತೀರ್ಮಾನ ಮಾಡಿದ್ದೇವೆ. ನ್ಯಾಯ ನಮ್ಮ ಪರವಾಗಿದೆ. ರಾಜ್ಯ ಪುನರ್ ವಿಂಗಡನಾ ಕಾಯ್ದೆಯಲ್ಲಿ ಬದಲಾವಣೆ ಮಾಡುವ ಹಕ್ಕು ಯಾರಿಗೂ ಇಲ್ಲ. ಕನ್ನಡದ ಗಡಿ ರಕ್ಷಣೆ ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

    ಹಂಚಿಕೊಳ್ಳಲು ಲೇಖನಗಳು