logo
ಕನ್ನಡ ಸುದ್ದಿ  /  ಕರ್ನಾಟಕ  /  Bs Yediyurappa: ಚುನಾವಣೆ ಗೆಲ್ಲಲು ಬಿಎಸ್‌ವೈ ಜನಪ್ರಿಯತೆಯ ಮೊರೆ ಹೋಗಲಿದೆ ಬಿಜೆಪಿ: ಹೈಕಮಾಂಡ್‌ ಲೆಕ್ಕಾಚಾರವೇನು?

BS Yediyurappa: ಚುನಾವಣೆ ಗೆಲ್ಲಲು ಬಿಎಸ್‌ವೈ ಜನಪ್ರಿಯತೆಯ ಮೊರೆ ಹೋಗಲಿದೆ ಬಿಜೆಪಿ: ಹೈಕಮಾಂಡ್‌ ಲೆಕ್ಕಾಚಾರವೇನು?

HT Kannada Desk HT Kannada

Jan 09, 2023 10:28 PM IST

ಸಂಗ್ರಹ ಚಿತ್ರ

    • ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಜಯವನ್ನು ಖಾತರಿಪಡಿಸಿಕೊಳ್ಳಲು, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಜನಪ್ರಿಯತೆ ಮೊರೆ ಹೋಗಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ. ಬಿಎಸ್‌ವೈ ರಾಜ್ಯ ಬಿಜೆಪಿಯ ಅತ್ಯಂತ ಉನ್ನತ ನಾಯಕರಾಗಿದ್ದು, ಅವರ ಜನಪ್ರಿಯತೆಯ ಬೆಂಬಲದೊಂದಿಗೆ, ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಹೈಕಮಾಂಡ್‌ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (PTI)

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಜಯವನ್ನು ಖಾತರಿಪಡಿಸಿಕೊಳ್ಳಲು, ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಜನಪ್ರಿಯತೆ ಮೊರೆ ಹೋಗಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ. ಬಿಎಸ್‌ವೈ ರಾಜ್ಯ ಬಿಜೆಪಿಯ ಅತ್ಯಂತ ಉನ್ನತ ನಾಯಕರಾಗಿದ್ದು, ಅವರ ಜನಪ್ರಿಯತೆಯ ಬೆಂಬಲದೊಂದಿಗೆ, ರಾಜ್ಯದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಹೈಕಮಾಂಡ್‌ ಲೆಕ್ಕಾಚಾರವಾಗಿದೆ ಎನ್ನಲಾಗಿದೆ.

ಟ್ರೆಂಡಿಂಗ್​ ಸುದ್ದಿ

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

ಬಿಎಸ್‌ ಯಡಿಯೂರಪ್ಪ ರಾಜ್ಯದ ಅತ್ಯಂತ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರು. ಲಿಂಗಾಯತ ಸಮುದಾಯವು ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ. ೧೭ರಷ್ಟನ್ನು ಪ್ರತಿನಿಧಿಸುತ್ತದೆ. ಈ ಸಮುದಾಯ ಬಿಎಸ್‌ವೈ ನಾಯಕತ್ವಕ್ಕೆ ಮನ್ನಣೆ ನೀಡುತ್ತದೆಯಲ್ಲದೇ, ಬಿಎಸ್‌ವೈ ಅವರ ಕಾರಣಕ್ಕಾಗಿಯೇ ಬಿಜೆಪಿಗೆ ಮತ ನೀಡುತ್ತಾ ಬಂದಿದೆ. ಹೀಗಾಗಿ ಬಿಎಸ್‌ವೈ ಅವರು ಈ ಸಮುದಾಯದ ಮೇಲೆ ಹೊಂದಿರುವ ಪ್ರಬಲ ಹಿಡಿತವನ್ನು ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಬಿಜೆಪಿ, ಲಿಂಗಾಯತ ಸಮುದಾಯದ ಅಸಮಾಧಾನವನ್ನು ತಣಿಸಲು ಅದೇ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ಆದಾಗ್ಯೂ ಅಧಿಕಾರದಿಂದ ಕೆಳಗಿಳಿದ ಮೇಲೂ ಬಿಎಸ್‌ವೈ ಪಕ್ಷ ಮತ್ತು ಸಮುದಾಯದಲ್ಲಿ ತಮ್ಮ ಗಾಢ ಪ್ರಭಾವವನ್ನು ಈಗಲೂ ಉಳಿಸಿಕೊಂಡಿದ್ದಾರೆ. ಈ ಸತ್ಯವನ್ನು ಅರಿತಿರುವ ಬಿಜೆಪಿ, ಬಿಎಸ್‌ವೈ ಅವರಿಗೆ ಪಕ್ಷದ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ.

ರಾಜ್ಯ ಬಿಜೆಪಿ ನಾಯಕರೂ ಕೂಡ ನಾವು ಯಡಿಯೂರಪ್ಪ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲೇ ಮುಂದುವರೆಯುತ್ತಿರುವುದಾಗಿ ಹೇಳುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ, ಸರ್ಕಾರ ಬಿಎಸ್‌ವೈ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತದೆ ಎಂದು ಹಲವು ಬಾರಿ ಹೇಳಿದ್ದಾರೆ.

ಇದು ಅಧಿಕಾರದಲ್ಲಿ ಇರಲಿ ಅಥವಾ ಇಲ್ಲದಿರಲಿ, ಪಕ್ಷ ಮತ್ತು ಲಿಂಗಾಯತ ಸಮುದಾಯದಲ್ಲಿ ಬಿಎಸ್‌ವೈ ಅವರ ಜನಪ್ರಿಯತೆ ಹಾಗೆಯೇ ಇರುತ್ತದೆ ಎಂಬ ಸಂದೇಶವನ್ನು ಸ್ಪಷ್ಟವಾಗಿ ಸಾರುತ್ತದೆ. ಇದೇ ಕಾರಣಕ್ಕೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಬಿಎಸ್‌ವೈ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ಬಿಜೆಪಿ ಹೈಕಮಾಂಡ್‌ನ ಉನ್ನತ ನಾಯಕರೊಬ್ಬರು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಗೆಲ್ಲಲು, ಬಿಎಸ್‌ ಯಡಿಯೂರಪ್ಪ ಅವರ ನಾಯಕತ್ವ ಮತ್ತು ಮಾರ್ಗದರ್ಶನ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಎಸ್‌ ಯಡಿಯೂರಪ್ಪ ಅವರು ತಳಮಟ್ಟದಲ್ಲಿ ಹೊಂದಿರುವ ಸಂಪರ್ಕ ಅಮೋಘವಾದುದು. ಚುನಾವಣೆ ಗೆಲ್ಲಲು ಅವರ ಸುದೀರ್ಘ ರಾಜಕೀಯ ಅನುಭವದ ಲಾಭ ಪಡೆಯುವುದು ಹೈಕಮಾಂಡ್‌ ಉದ್ದೇಶ ಎಂದು ಈ ನಾಯಕರು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ ಸೂಚನೆ ಮೇರೆಗೆ ಬಿಎಸ್‌ವೈ ಅವರು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರು. ಈ ವೇಳೆ ಯಾವುದೇ ಗೊಂದಲ, ಅಸಮಾಧಾನಕ್ಕೆ ಅವರು ಆಸ್ಪದ ಕೊಡಲಿಲ್ಲ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸುವುದು ಮತ್ತು ಪಕ್ಷದ ಆದೇಶ ಪಾಲಿಸುವುದು ನನ್ನ ಕರ್ತವ್ಯ ಎಂದು ಬಿಎಸ್‌ವೈ ಹೇಳಿದ್ದರು, ಇದು ಪಕ್ಷದ ಬಗ್ಗೆ ಅವರು ಹೊಂದಿರುವ ಅಪಾರ ಗೌರವವನ್ನು ಸೂಚಿಸುತ್ತದೆ. ಹೈಕಮಾಂಡ್‌ ಇದನ್ನು ಮರೆಯುವ ಪ್ರಶ್ನೆಯೇ ಇಲ್ಲ ಎನ್ನುತ್ತಾರೆ ಈ ನಾಯಕರು.

ಕರ್ನಾಟಕದ ಬಿಜೆಪಿ ಮಟ್ಟಿಗೆ ಬಿಎಸ್‌ ಯಡಿಯೂರಪ್ಪ ಅವರೇ ಪ್ರಶ್ನಾತೀತ ನಾಯಕ. ಅವರ ಮಾರ್ಗದರ್ಶನ ಪಕ್ಷಕ್ಕೆಅತ್ಯಗತ್ಯವಾಗಿದ್ದು, ಅವರ ಜನಪ್ರಿಯತೆಯು ಪಕ್ಷವು ಚುನಾವಣೆ ಗೆಲ್ಲಲು ನೆರವಾಗಲಿದೆ ಎಂದು ಹೈಕಮಾಂಡ್‌ ನಾಯಕರು ಭರವಸೆ ಹೊಂದಿದ್ದಾರೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಬಿಜೆಪಿ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿರುವ ಬಿಎಸ್‌ ಯಡಿಯೂರಪ್ಪ, ಈಗ ಅಧಿಕಾರದಲ್ಲಿ ಇರದಿದ್ದರೂ ಪಕ್ಷದೊಳಗೆ ಆಳವಾದ ಪ್ರಭಾವ ಹೊಂದಿರುವುದಕ್ಕೆ ಹೈಕಮಾಂಡ್‌ ಅವರಿಗೆ ನೀಡುತ್ತಿರುವ ಪ್ರಾಮುಖ್ಯತೆಯಿಂದಲೇ ತಿಳಿಯುತ್ತದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ