logo
ಕನ್ನಡ ಸುದ್ದಿ  /  ಕರ್ನಾಟಕ  /  Bs Yediyurappa On Koppal Issue: ನನ್ನನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ: ಬಿಎಸ್‌ ಯಡಿಯೂರಪ್ಪ

BS Yediyurappa on Koppal Issue: ನನ್ನನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ, ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ: ಬಿಎಸ್‌ ಯಡಿಯೂರಪ್ಪ

HT Kannada Desk HT Kannada

Dec 15, 2022 11:01 AM IST

ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ)

    • "ಬಿಜೆಪಿ ನಾಯಕರು ನನ್ನನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ನಿನ್ನೆ ಬೇರೆ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಬರುವ ಸ್ಥಿತಿಯಲ್ಲಿರಲ್ಲಿಲ್ಲ. ಬರಬೇಕೆಂದು ಒತ್ತಾಯಿಸಿದ್ದರು. ಅದಕ್ಕೆ ಹೊರಟಿದ್ದೇನೆʼʼ ಎಂದು ಬಿಎಸ್‌ವೈ ಹೇಳಿದ್ದಾರೆ.
ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿಎಸ್‌ ಯಡಿಯೂರಪ್ಪ (ಸಂಗ್ರಹ ಚಿತ್ರ) (PTI)

ಕೊಪ್ಪಳ: "ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವು ಒಗ್ಗಟ್ಟಾಗಿದ್ದೇವೆ" ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಕೊಪ್ಪಳಕ್ಕೆ ಆಗಮಿಸುವ ಬಿಜೆಪಿ ಕಚೇರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಬಿಎಸ್‌ವೈ ಅವರನ್ನು ಆರಂಭದಲ್ಲಿ ಆಹ್ವಾನಿಸಿರಲಿಲ್ಲ. ಬಳಿಕ ಹೈಕಮಾಂಡ್‌ ಮಧ್ಯಪ್ರವೇಶಿಸಿ ಇವರಿಗೆ ಆಹ್ವಾನ ನೀಡಿತ್ತು. ಈ ಕಾರ್ಯಕ್ರಮಕ್ಕೆ ಇಂದು ಹೋಗುವ ಸಮಯದಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಈ ಮೇಲಿನಂತೆ ಸ್ಪಷ್ಟಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Bus Accident: ಫ್ಲೈ ಓವರ್‌ಗೆ ಹಾರಿದ ಸಾರಿಗೆ ಬಸ್‌ ಪ್ರಯಾಣಿಕರು ಪಾರಾಗಿದ್ದೇ ರೋಚಕ; ನೆಲಮಂಗಲದಲ್ಲಿ ಸಿನಿಮಾ ಸ್ಟಂಟ್ ನಂತೆ ಸಂಭವಿಸಿದ ಅಪಘಾತ

Hassan Scandal: 100 ಕೋಟಿ ರೂ. ಆಫರ್ ವಿಚಾರವನ್ನು ಎಸ್‌ಐಟಿ ನೋಡಿಕೊಳ್ಳುತ್ತೆ, ದೇವರಾಜೇಗೌಡ ಜೈಲಲ್ಲೇ ಇರ್ತಾರೆ: ಗೃಹ ಸಚಿವ

Hassan Scandal : ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ

Wildlife News: ಹುಲಿ ಉಗುರು ಪ್ರಕರಣ, ವನ್ಯಜೀವಿಗಳ ಅಂಗಾಂಗ ಹಸ್ತಾಂತರ ಇನ್ನಷ್ಟು ವಿಳಂಬ ಸಾಧ್ಯತೆ

"ಬಿಜೆಪಿ ನಾಯಕರು ನನ್ನನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಆದರೆ, ನಿನ್ನೆ ಬೇರೆ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಬರುವ ಸ್ಥಿತಿಯಲ್ಲಿರಲ್ಲಿಲ್ಲ. ಬರಬೇಕೆಂದು ಒತ್ತಾಯಿಸಿದ್ದರು. ಅದಕ್ಕೆ ಹೊರಟಿದ್ದೇನೆʼʼ ಎಂದು ಅವರು ಹೇಳಿದ್ದಾರೆ.

"ನಮ್ಮ ನಡುವೆ ಗೊಂದಲಗಳು, ಭಿನ್ನಾಭಿಪ್ರಾಯಗಳು ಇಲ್ಲ. ಇದೆಲ್ಲ ಮಾಧ್ಯಮ ಸೃಷ್ಟಿ. ನಮ್ಮ ಮುಂದಿನ ಗುರಿ 2023ರ ಚುನಾವಣೆಯನ್ನು ಒಗ್ಗಟ್ಟಿನಿಂದ ಗೆಲ್ಲುವುದು. ನನಗೆ ನನ್ನದೇ ಆದ ಶಕ್ತಿಯಿದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ" ಎಂದು ಅವರು ಹೇಳಿದ್ದಾರೆ.

"ನಾನು ಇಲ್ಲೇ ಇರಬೇಕಿತ್ತು. ಕೊಪ್ಪಳಕ್ಕೆ ಹೋಗುವ ಯೋಜನೆ ಇರಲಿಲ್ಲ. ಆದರೆ, ಬರಬೇಕೆಂದು ಒತ್ತಾಯಿಸಿದ್ದಾರೆ. ಹಾಗಾಗಿ ಹೋಗುತ್ತಿದ್ದೇನೆ. ಬಿಜೆಪಿ ಪಕ್ಷದದ ಎಲ್ಲಾ ಕಾರ್ಯಕ್ರಮಗಳಿಗೂ ಹೋಗುತ್ತಿದ್ದೇನೆ. ಸರಕಾರಿ ಕಾರ್ಯಕ್ರಮಕ್ಕೆ ಹೋಗುವುದು ಸರಿಯಲ್ಲವೆಂದು ಹೋಗುತ್ತಿಲ್ಲ. ಪಕ್ಷದ ಉಳಿದ ಎಲ್ಲಾ ಕಾರ್ಯಕ್ರಮಗಳಿಗೂ ಹೋಗುತ್ತೇನೆ. ಪಕ್ಷದ ಬಲವರ್ಧನೆಗೆ ಬೇಕಾದ ಎಲ್ಲಾ ಪ್ರಯತ್ನ ಮಾಡುವೆʼʼ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.

"ಯಾರಿಗೂ ಯಾರನ್ನೂ ಮುಗಿಸಲು ಸಾಧ್ಯವಿಲ್ಲ. ಯಾರನ್ನೂ ಮೂಲೆಗುಂಪು ಮಾಡುವುದು ಸಾಧ್ಯವಿಲ್ಲ. ಪಕ್ಷ ಬಲಪಡಿಸಿದ್ದೇನೆ, ಪಕ್ಷ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಈ ವಿಚಾರ ರಾಜ್ಯದ ಜನರಿಗೆ ಗೊತ್ತಿರುವಂತದ್ದು. ನಮ್ಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳು ಇಲ್ಲʼʼ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಕೊಪ್ಪಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರನ್ನು ಆಹ್ವಾನಿಸಲಾಗಿರಲಿಲ್ಲ. ಇದು ಬಿಎಸ್‌ವೈ ಅವರಿಗೆ ಕೋಪ ತಂದಿತ್ತು ಎನ್ನಲಾಗಿದೆ. "ಕೊಪ್ಪಳ ಕಾರ್ಯಕ್ರಮಕ್ಕೆ ಬಿಎಸ್‌ ಯಡಿಯೂರಪ್ಪ ಆಗಮಿಸುವುದಿಲ್ಲʼʼ ಎಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೊಡ್ಡನಗೌಡ ಹೇಳಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಮತ್ತು ಬಿಎಸ್‌ವೈ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿತ್ತು.

ಇದರಿಂದ, ಬಿಎಸ್‌ವೈ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಚರ್ಚೆ ಮತ್ತೆ ಮುನ್ನಲೆಗೆ ಬಂದಿತ್ತು. ಈ ಕುರಿತು ಸೋಷಿಯಲ್‌ ಮೀಡಿಯಾಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಸಾರವಾಗಿದ್ದವು. ತಕ್ಷಣ ಎಚ್ಚೆತ್ತುಕೊಂಡ ಸ್ಥಳೀಯ ಮುಖಂಡರು ಬಿಜೆಪಿ ರಾಜ್ಯ ನಾಯಕರ ಗಮನಕ್ಕೆ ತಂದಿದ್ದರು.

ಬಳಿಕ ಬಿಜೆಪಿ ನಾಯಕರಾದ ರವಿಕುಮಾರ್ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರು ಬಿಎಸ್‌ ಯಡಿಯೂರಪ್ಪನವರ ನಿವಾಸಕ್ಕೆ ತೆರಳಿ ಕೊಪ್ಪಳದ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ಬಿಎಸ್‌ವೈ ಒಪ್ಪಿರಲಿಲ್ಲ. ಡಿಸೆಂಬರ್‌ ಹದಿನೈದರಂದು ಬೇರೆ ಕಾರ್ಯಕ್ರಮಗಳು ನಿಗದಿಯಾಗಿವೆ ಎಂದು ಹೇಳಿ ಕಳುಹಿಸಿದ್ದರು.

ಬಿಎಸ್‌ವೈ ಕೋಪಗೊಂಡಿದ್ದರೆ ಎನ್ನುವುದು ಸ್ಪಷ್ಟವಾಗಿತ್ತು. ಬಳಿಕ ಈ ಮಾಹಿತಿಯನ್ನು ಹೈಕಮಾಂಡ್‌ ನಾಯಕರ ಗಮನಕ್ಕೆ ತರಲಾಗಿತ್ತು. ದೆಹಲಿ ನಾಯಕರೇ ಕರೆ ಮಾಡಿ ಬಿಎಸ್‌ವೈ ಅವರಿಗೆ ಕೊಪ್ಪಳ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಕೊನೆಗೂ ಬಿಎಸ್‌ವೈ ಇಂದು ಕೊಪ್ಪಳದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದರು.

ಇದೀಗ ಈ ವಿಷಯದ ಕುರಿತು ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ