logo
ಕನ್ನಡ ಸುದ್ದಿ  /  ಕರ್ನಾಟಕ  /  Apple Iphone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ಹೊರಕವಚ ತಯಾರಿ, 8,800 ಕೋಟಿ ರೂ ಹೂಡಿಕೆ ಮಾಡಲಿದೆ ಫಾಕ್ಸ್‌ಕಾನ್ ಅಂಗಸಂಸ್ಥೆ

Apple Iphone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ಹೊರಕವಚ ತಯಾರಿ, 8,800 ಕೋಟಿ ರೂ ಹೂಡಿಕೆ ಮಾಡಲಿದೆ ಫಾಕ್ಸ್‌ಕಾನ್ ಅಂಗಸಂಸ್ಥೆ

Praveen Chandra B HT Kannada

Jul 17, 2023 11:11 AM IST

Apple Iphone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ಹೊರಕವಚ ತಯಾರಿ, 8,800 ಕೋಟಿ ರೂ ಹೂಡಿಕೆ ಮಾಡಲಿದೆ ಫಾಕ್ಸ್‌ಕಾನ್ ಅಂಗಸಂಸ್ಥೆ

    • Apple Karnataka Factory: ಕರ್ನಾಟಕದಲ್ಲಿ ಆಪಲ್‌ ಐಫೋನ್‌ ಉತ್ಪಾದನೆಗೆ ಸಂಬಂಧಪಟ್ಟಂತೆ ಚಟುವಟಿಕೆಗಳು ಬಿರುಸುಪಡೆದಿವೆ. ಇದೀಗ ಫಾಕ್ಸ್‌ಕಾನ್‌ ಕಂಪನಿಯ ಅಂಗಸಂಸ್ಥೆ ಫಾಕ್ಸ್‌ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಕರ್ನಾಟಕದಲ್ಲಿ 8800 ರೂ ಹೂಡಿಕೆ ಮಾಡುವ ಆಸಕ್ತಿ ತೋರಿಸಿದೆ.
Apple Iphone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ಹೊರಕವಚ ತಯಾರಿ, 8,800 ಕೋಟಿ ರೂ ಹೂಡಿಕೆ ಮಾಡಲಿದೆ ಫಾಕ್ಸ್‌ಕಾನ್ ಅಂಗಸಂಸ್ಥೆ
Apple Iphone: ಕರ್ನಾಟಕದಲ್ಲಿ ಆ್ಯಪಲ್ ಐಫೋನ್ ಹೊರಕವಚ ತಯಾರಿ, 8,800 ಕೋಟಿ ರೂ ಹೂಡಿಕೆ ಮಾಡಲಿದೆ ಫಾಕ್ಸ್‌ಕಾನ್ ಅಂಗಸಂಸ್ಥೆ

ಬೆಂಗಳೂರು: ಕರ್ನಾಟಕದಲ್ಲಿ ಆಪಲ್‌ ಐಫೋನ್‌ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮನ್ನು ವಿಧಾನಸೌಧದಲ್ಲಿ ಭೇಟಿಯಾದ ಫಾಕ್ಸ್‌ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯ ಸಿ ಇ ಓ ಬ್ರಾಂಡ್ ಚೆಂಗ್ ನೇತೃತ್ವದ ನಿಯೋಗದ ಜತೆ ಮಾತುಕತೆ ನಡೆಸಿದ್ದಾರೆ. ಫಾಕ್ಸ್ ಕಾನ್ ಇಂಡಸ್ಟ್ರೀಯಲ್ ಇಂಟರ್ನೆಟ್ ಸಂಸ್ಥೆಯು ಫಾಕ್ಸ್‌ಕಾನ್ ಸಂಸ್ಥೆಯ ಅಂಗ ಸಂಸ್ಥೆಯಾಗಿದೆ. ಇದು ಸುಮಾರು 8,800 ಕೋಟಿ ರೂಪಾಯಿ ಹೂಡಿಕೆ ಮಾಡಲು ಆಸಕ್ತಿ ತೋರಿಸಿದೆ.

ಟ್ರೆಂಡಿಂಗ್​ ಸುದ್ದಿ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ತುಮಕೂರಿನ ಬಳಿ ಇರುವ ಜಪಾನೀಸ್ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಅಗತ್ಯ 100 ಎಕರೆ ಭೂಮಿ ಇದ್ದು, ಉದ್ದಿಮೆ ಸ್ಥಾಪಿಸಲು ಒಳ್ಳೆಯ ವಾತಾವರಣ ಇದೆ. ಇದಕ್ಮೆ ರಾಜ್ಯ ಸರ್ಕಾರ ಕೂಡ ಪೂರ್ಣ ಸಹಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ. ಪಾಟೀಲ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫಾಕ್ಸ್‌ಕಾನ್‌ ಕಂಪನಿಗೆ ಕರ್ನಾಟಕದಲ್ಲಿ 300 ಎಕರೆ ಭೂಮಿ

ಐಫೋನ್ ತಯಾರಿಸುವ ಬಹುರಾಷ್ಟ್ರೀಯ ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ ಹಸ್ತಾಂತರಿಸುವ ಸಂಬಂಧ ಇದ್ದ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಶೀಘ್ರವೇ ಕಂಪನಿಗೆ ಜಾಗ ಬಿಟ್ಟುಕೊಡಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಇತ್ತೀಚೆಗೆ ಹೇಳಿದ್ದರು.

ಕಂಪನಿಗೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ಹೋಬಳಿಗೆ ಸೇರಿದ ಮಾಹಿತಿ ತಂತ್ರಜ್ಞಾನ ಹೂಡಿಕೆ ವಲಯ (ಐ ಟಿ ಐ ಆರ್) ದಲ್ಲಿ 300 ಎಕರೆ ಜಾಗ ಕೊಡಲಾಗುತ್ತದೆ. ಕಂಪನಿ ಸುಮಾರು 8,500 ಕೋಟಿ ರೂ. ಹೂಡಿ, ತಯಾರಿಕಾ ಘಟಕ ಸ್ಥಾಪಿಸಲಿದೆ. ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಂಪನಿಯು ನಿರ್ಮಾಣ ಕಾಮಗಾರಿ ಶುರು ಮಾಡಬಹುದು. ನಿರೀಕ್ಷೆ ಪ್ರಕಾರ ಮುಂದಿನ ವರ್ಷ ಉತ್ಪಾದನೆ ಕೂಡ ಆರಂಭಿಸಲಿದೆ. 50 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಈ ಯೋಜನೆಯ ಬಗ್ಗೆ ಸರ್ಕಾರ ಮುತುವರ್ಜಿ ವಹಿಸಿದೆ ಎಂದು ಅವರು ಹೇಳಿದ್ದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ 3 ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಇವು ಸುಮಾರು 110 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, 1,450ಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಅವರು ಹೇಳಿದ್ದಾರೆ.

ಕೈಗಾರಿಕಾ ನೀತಿ (2020-25), ಕರ್ನಾಟಕ ಏರೋಸ್ಪೇಸ್ & ಡಿಫೆನ್ಸ್ ನೀತಿ (2022-27) ಮತ್ತು ವಿದ್ಯುತ್‌ ಚಾಲಿತ ವಾಹನ & ಇಂಧನ ಸಂಗ್ರಹಣೆ ನೀತಿ (2017)ಯಡಿ ನಿಗದಿಗೊಳಿಸಿರುವ ಉತ್ತೇಜಕ ಕ್ರಮಗಳು ಈ ವಲಯದಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಲು ಪೂರಕವಾಗಿವೆ ಎಂದು ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ