logo
ಕನ್ನಡ ಸುದ್ದಿ  /  ಕರ್ನಾಟಕ  /  Ct Ravi: ಜಿಹಾದ್‌ ವಿರುದ್ಧ ಸಮರಕ್ಕೆ ಸಜ್ಜಾಗಬೇಕು; ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ

CT Ravi: ಜಿಹಾದ್‌ ವಿರುದ್ಧ ಸಮರಕ್ಕೆ ಸಜ್ಜಾಗಬೇಕು; ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ

HT Kannada Desk HT Kannada

Jul 27, 2022 07:42 PM IST

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

    • ಅಧಿಕಾರ ಅನುಭವಿಸಲಷ್ಟೇ ಬಂದಿರೋದಲ್ಲ, ಪಕ್ಷದಕಾರ್ಯಕರ್ತರ ಜತೆಗಿರ್ತೇವೆ. ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ.? ಜಿಹಾದ್‌ ವಿರುದ್ಧ ಸಮರಕ್ಕೆ ಸಜ್ಜಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಅಧಿಕಾರದಲ್ಲಿದ್ದೇವೆ; ಏನೂ ಮಾಡೋಕಾಗ್ತಿಲ್ಲ ಎಂದು ಅಸಹಾಯಕತೆಯನ್ನೂ ತೋಡಿಕೊಂಡರು. 
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

ಬೆಂಗಳೂರು: ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ.? ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ಲವೇ ಎಂಬ ಪ್ರಶ್ನೆ ಕಾಡ್ತಿದೆ. ಅವರ ಮನಸ್ಥಿತಿ ಹೇಗಿದೆ ಎಂದರೆ ನಾವು ಮಾಡ್ತಾನೆ ಇರ್ತೀವಿ, ಕಠಿಣ ಕ್ರಮ ತೆಗೆದುಕೊಳ್ಳಿ ನೋಡೋಣ ಎಂಬ ಮನಸ್ಥಿತಿಯನ್ನು ಅವರು ಪ್ರದರ್ಶಿಸುತ್ತಿದ್ದಾರೆ. ಇಡೀ ವ್ಯವಸ್ಥೆಯನ್ನ ಜಿಹಾದ್ ವಿರುದ್ಧ ಹೋರಾಟ ಮಾಡಲು ಅಣಿಗೊಳಿಸಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಟ್ರೆಂಡಿಂಗ್​ ಸುದ್ದಿ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

Bangalore News: ತಮಿಳುನಾಡಿನಲ್ಲಿ ಗುಂಡು ತಗುಲಿ ಬೆಂಗಳೂರಿನ ಯೋಧ ಸಾವು

Hassan Scandal: ಗೃಹ ಇಲಾಖೆ ಬೇರೆಯವರಿಂದ ಹೈಜಾಕ್‌‌, ಪ್ರಜ್ವಲ್‌ ರೇವಣ್ಣ ಪ್ರಕರಣ ಮುಚ್ಚಿಹಾಕಲು ಎಸ್‌ಐಟಿ ಸಿದ್ಧತೆ, ಅಶೋಕ ಆರೋಪ

Karnataka Rains: ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಹೊಸದುರ್ಗ,ಚನ್ನಗಿರಿಯಲ್ಲಿ ಭಾರೀ ಮಳೆ, ನಿಮ್ಮೂರಲ್ಲಿ ಎಷ್ಟು ಮಳೆಯಾಗಿದೆ ?

ಅಮರಾವತಿ, ಉದಯ್ ಪುರದಲ್ಲಿ ನಡೆದ ಘಟನೆಯ ಮುಂದುವರಿದ ಭಾಗ ಇದು. ನಾವು ಬಿಜೆಪಿಯವರು ಕೇವಲ ಅಧಿಕಾರ ಚಲಾಯಿಸಲು, ಅದನ್ನು ಅನುಭವಿಸಲಷ್ಟೇ ಬಂದಿಲ್ಲ. ಪಕ್ಷದ ಕಾರ್ಯಕರ್ತರೊಂದಿಗೆ ನಾವೂ ಇದ್ದೇವೆ. ಅವರ ಭಾವನೆ ಜೊತೆಗೆ ನಾವೂ ನಿಲ್ಲುತ್ತೇವೆ ಎಂದು ಸಿ.ಟಿ.ರವಿ ಹೇಳಿದರು. ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ವೇಳೆ ಈ ವಿಚಾರ ಹೇಳಿದ್ದಾಗಿ ಈ ಸಂಜೆ ವರದಿ ಮಾಡಿದೆ.

ಅಧಿಕಾರದಲ್ಲಿದ್ರೂ ಏನೂ ಮಾಡೋಕಾಗ್ತಿಲ್ಲ..

ಕೇಂದ್ರ-ರಾಜ್ಯದಲ್ಲಿ ಎರಡೂ ಕಡೆ ನಾವೇ ಅಧಿಕಾರದಲ್ಲಿದ್ದೇವೆ. ಆದರೂ ಏನೂ ಮಾಡಲಾಗ್ತಿಲ್ಲ. ಸಿಎಂ ಭೇಟಿ ಮಾಡಿ ಮನವಿ ಮಾಡುತ್ತೇನೆ. ಕಠಿಣ ಕ್ರಮ ಕೈಗೊಳ್ಳುವುದರ ಜತೆ, ಅಪರಾಧಿಗಳನ್ನ ಬಂಧಿಸಲು ಮನವಿ ಮಾಡ್ತೇನೆ ಎಂದು ತಿಳಿಸಿದರು.

ಪ್ರವೀಣ್ ನೆಟ್ಟಾರು ಮಾನವೀಯ ಕಳಕಳಿ ಇರುವ ವ್ಯಕ್ತಿ. ಪ್ರಾಣಿಗೂ ಯಾವುದೇ ಸಮಸ್ಯೆ ಮಾಡದವರು. ನಾನು ನುಡಿಗಳಲ್ಲಿ ಅವರಿಗೆ ಸಂತಾಪ ಸೂಚಿಸುವುದು ಸಾಧ್ಯವಿಲ್ಲ. ಸಿದ್ದರಾಮಯ್ಯ ಆಡಳಿತ ಕಾಲದಲ್ಲೂ ಸರಣಿ ಹತ್ಯೆ ನಡೆದಿತ್ತು. ಈಗಲೂ ಅದೇ ರೀತಿ ನಡೆಯುತ್ತಿದೆ ಎಂಬ ಆರೋಪವಿದೆ. ಹಿಂದೆ ಹಿಂದೂ ವಿರೋಧಿ ಸರ್ಕಾರವಿತ್ತು. ಈಗ ಹಿಂದೂ ಪರ ಸರ್ಕಾರವಿದೆ. ಆದರೂ, ಹೀಗಾಗ್ತಿದೆ ಎಂಬ ಆತಂಕ ನಮ್ಮ ಕಾರ್ಯಕರ್ತರದ್ದು ಎಂದು ಅಸಹಾಯಕತೆ ತೋರಿದರು.

ನಾವು ಸಮರ್ಥನೆ ಮಾಡಿ ಕೊಳ್ಳೋದಿಲ್ಲ. ಜಿಹಾದ್ ಕಿತ್ತುಹಾಕಲು ನಾವು ಬದ್ದರಿದ್ದೇವೆ. ನಾವೀಗ ಕ್ರಮ ತೆಗೆದುಕೊಳ್ಳದೇ ಹೋದರೆ, ಏನೇ ಆದರೂ ಅದಕ್ಕೆ ನಾವೇ ಹೊಣೆಗಾರರು. ಹಿಂದಿನ ಸರ್ಕಾರ ಓಟ್ ಬ್ಯಾಂಕ್‍ಗಾಗಿ ಓಲೈಕೆ ಮಾಡ್ತಿತ್ತು. ನಾವು ಆ ರೀತಿ ಯಾವುದೇ ಓಲೈಕೆ ಮಾಡಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಸಿಎಂ ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ಸಿ.ಟಿ.ರವಿ ವಿವರಿಸಿದರು.

ಪ್ರವೀಣ್‌ ಅವರದ್ದು ಜಿಹಾದಿ ಹತ್ಯೆಯಾ?

ಸಿ.ಟಿ.ರವಿ ಅವರು ಜಿಹಾದ್‌ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕು ಎಂದು ಹೇಳಿರುವುದು ಗಮನಾರ್ಹವಾಗಿದ್ದು, ವ್ಯಾಪಕ ಚರ್ಚೆಗೆ ಒಳಗಾಗಿದೆ. ಈ ನಡುವೆ, ರಾಜಸ್ಥಾನದ ಉದಯಪುರದ ಟೈಲರ್‌ ಕನ್ಹಯ್ಯಲಾಲ್‌ ಹತ್ಯೆ ಪ್ರಕರಣಕ್ಕೂ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆಗೂ ಲಿಂಕ್‌ ಇದೆಯಾ? ಇದೆ ಎನ್ನುವ ವಾದವೂ ಹುಟ್ಟಿಕೊಂಡಿದೆ. ಅದಕ್ಕೆ ಪೂರಕವಾಗಿ ಅವರ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಆಗಿದ್ದ ಜೂನ್‌ 29ರ ಸ್ಟೇಟಸ್‌ನ ಇಮೇಜ್‌ ವೈರಲ್‌ ಆಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಭಯಾನಕ ರೀತಿಯಲ್ಲಿ ಮತಾಂಧರಿಂದ ಶಿರಚ್ಛೇದಕ್ಕೆ ಒಳಗಾದ ಟೈಲರ್‌ ಕನ್ಹಯ್ಯಾಲಾಲ್ ಬೆಂಬಲಿಸಿ ಭಾರತೀಯ ಜನತಾ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕಳೆದ ತಿಂಗಳು ಪೋಸ್ಟ್ ಮಾಡಿದ್ದರು.

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಇಮೇಜ್‌ನಲ್ಲಿ ಜೂನ್‌ 29ರ ಪೋಸ್ಟ್ ಎಂಬುದು ವೇದ್ಯವಾಗುತ್ತಿದೆ. ಅದರಲ್ಲಿ ಅವರು, ಬಡ ದರ್ಜಿಯ ಶಿರಚ್ಛೇದ ಮತ್ತು ಕೊಲೆಗಾರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿರುವ ಬಗ್ಗೆ ಬರೆದಿದ್ದರು. ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ವಿರುದ್ಧವೂ ಅವರು ವಾಗ್ದಾಳಿ ನಡೆಸಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ