logo
ಕನ್ನಡ ಸುದ್ದಿ  /  ಕರ್ನಾಟಕ  /  Cabinet Decisions: ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ

Cabinet Decisions: ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಅನುಮೋದನೆ

HT Kannada Desk HT Kannada

Aug 25, 2022 05:20 PM IST

ಸಚಿವ ಗೋವಿಂದ ಕಾರಜೋಳ

    • Cabinet Decisions: ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಪ್ರಸ್ತಾವನೆಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಲಸಂಪನ್ಮುಲ ಸಚಿವ ಗೋವಿಂದ ಕಾರಜೋಳ ಹೇಳಿದರು. 
ಸಚಿವ ಗೋವಿಂದ ಕಾರಜೋಳ
ಸಚಿವ ಗೋವಿಂದ ಕಾರಜೋಳ (@GovindKarjol)

ಬೆಂಗಳೂರು: ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಟ್ರೆಂಡಿಂಗ್​ ಸುದ್ದಿ

HD Revanna: ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಅಪಹರಣ ಆರೋಪ ಪ್ರಕರಣ; ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲೇ ಉಳಿದಿರುವ ಹೆಚ್‌ಡಿ ರೇವಣ್ಣ

ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ, ಇ-ಸಿಗರೇಟ್, ವಿದೇಶಿ ಸಿಗರೆಟ್‌, ಎಂಡಿಎಂಎ ಮಾರಾಟಗಾರರ ಬಂಧನ, ಮಾದಕ ವಸ್ತುಗಳ ಜಪ್ತಿ

ದೊಡ್ಡಬಳ್ಳಾಪುರ: ಹೇಮಂತಗೌಡ ಹತ್ಯೆ ಪ್ರಕರಣದ 2ನೇ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆಗೆತ್ನಿಸಿದ್ದ ಕಾರಣ ಕಾಲಿಗೆ ಗುಂಡೇಟು

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ಪ್ರಸ್ತುತ ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಪ್ರತ್ಯೇಕವಾಗಿ 3,245 ಟಿ.ಎಂ.ಸಿ. ನೀರನ್ನು ಲಿಫ್ಟ್ ಮಾಡಿ (ಆರ್.ಎಲ್.504.75 ಮೀ.ನಿಂದ ಆರ್.ಎಲ್.660.00 ಮೀ.ವರೆಗೆ) ಪೈಪ್ ಲೈನ್ ಅಳವಡಿಕೆಯೊಂದಿಗೆ ಇಂಡಿ ಮತ್ತು ವಿಜಯಪುರ ತಾಲ್ಲೂಕುಗಳ (ನಾಗಠಾಣ ಮತಕ್ಷೇತ್ರ ಒಳಗೊಂಡಂತೆ) 28,000 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಿರುವ 3 ಹಂತಗಳ ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯ ಪ್ರಸ್ತಾವನೆಗೆ ಸಂಪುಟ ಸಭೆ ಅನುಮೋದಿಸಿದೆ. ಇದರ ಅಂದಾಜು ಮೊತ್ತ 2,638.00 ಕೋಟಿ ರೂಪಾಯಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಇಂಡಿ ಮತ್ತು ವಿಜಯಪುರ ತಾಲ್ಲೂಕುಗಳಡಿ ನೀರಾವರಿ ವಂಚಿತ ಸುಮಾರು 64,000 ಹೆಕ್ಟೇರ್ ಪ್ರದೇಶವು ಕೃಷ್ಣಾ ಮೇಲ್ದಂಡೆ ಯೋಜನೆಯ ಯಾವುದೇ ಸ್ಕೀಂನಿಂದ ನೀರಾವರಿ ಸೌಲಭ್ಯಕ್ಕೆ ಒಳಪಟ್ಟಿರಲಿಲ್ಲ. ಆ ಕೊರತೆಯನ್ನು ನೀಗಿಸಲು ಈ ಯೋಜನೆಯನ್ನು ಹಂತ ಹಂತವಾಗಿ 3 ಹಂತಗಳಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ.

ಯೋಜನೆಯ ಮೊದಲನೇ ಹಂತದಲ್ಲಿ ರೂ.760.00 ಕೋಟಿ ಅಂದಾಜು ಮೊತ್ತದಲ್ಲಿ ಇಲೆಕ್ಟ್ರೋ-ಮೆಕಾನಿಕಲ್‌ ಕಾಮಗಾರಿ ಸೇರಿದ ಮುಖ್ಯ ಕಾಮಗಾರಿ, ಜ್ಯಾಕ್‌ವೆಲ್‌ / ಪಂಪ್‌ಹೌಸ್‌, Intake through & forebay and Raising Main upto Kupagaddi Tank for length of 15.00 KM length ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ವಿವರಿಸಿದರು.

ಸರ್ಕಾರವು 2019-20ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರೂ.250.00 ಕೋಟಿ ವೆಚ್ಚದಲ್ಲಿ ಇಂಡಿ ಹಾಗೂ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ 28,000 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಹೊರ್ತಿ-ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.

ಯೋಜನೆಯನ್ನು 3 ಹಂತಗಳಲ್ಲಿ ಅಂದರೆ, ಮೊದಲನೇ ಹಂತದಲ್ಲಿ ರೂ.760.00 ಕೋಟಿ, 2ನೇ ಹಂತದಲ್ಲಿ ರೂ.939.00 ಕೋಟಿ ಮತ್ತು 3ನೇ ಹಂತದಲ್ಲಿ ರೂ.939.00 ಕೋಟಿ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವುದಾಗಿ ಸಚಿವರು ವಿವರಣೆ ಕೊಟ್ಟರು.

ನಾಗಮಂಗಲ ಶಾಖಾ ನಾಲೆ ನೀರು ಚನ್ನರಾಯಪಟ್ಟಣ ನುಗ್ಗೇಹಳ್ಳಿಗೆ

ನಾಗಮಂಗಲ ಶಾಖಾ ನಾಲೆಯ ಸರಪಳಿ 5.100 ಕಿಮೀ.ನಿಂದ ಲಿಫ್ಟ್ ಮುಖೇನ ನೀರನ್ನು ಎತ್ತಿ ಚನ್ನರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಹಾಗೂ ಇತರೆ ಎರಡು ಕೆರೆಗಳನ್ನು ಕುಡಿಯುವ ನೀರಿಗಾಗಿ ತುಂಬಿಸುವ ಕಾಮಗಾರಿಯ ರೂ.25.00 ಕೋಟಿ ಮೊತ್ತದ ವಿವರವಾದ ಯೋಜನಾ ವರದಿಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕು, ನುಗ್ಗೇಹಳ್ಳಿ ಹೋಬಳಿಯ ಸಂತೇಶಿವರ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಸಂತೇಶಿವರ ಗ್ರಾಮದ ಬಳಿ ಇರುವ ಸಂತೀಶಿವರ ಹಾಗೂ ಅಗ್ರಹಾರ ಬೆಳಗುಲಿ ಕೆರೆಗಳೇ ಆಶ್ರಯವಾಗಿರುತ್ತದೆ. ಈ ಕೆರೆಗಳಿಗೆ ಮಳೆಯ ನೀರು ಆಧಾರವಾಗಿರುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಮಳೆಯ ಅನಿಶ್ಚಿತತೆಯಿಂದ ನೀರಿನ ಒಳಹರಿವು ಕಡಿಮೆಯಾಗಿ ಈ ಕೆರೆಗಳು ಬಹಳ ವರ್ಷಗಳಿಂದ ತುಂಬುತ್ತಿಲ್ಲ. ಮಳೆ ಮಾಪನ ಕೇಂದ್ರದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ಮಳೆಯು ಸರಾಸರಿ ಮಟ್ಟಕ್ಕಿಂತ ಕಡಿಮೆಯಿರುತ್ತದೆ. ಇದರಿಂದ ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟವು ಕಡಿಮೆಯಾಗಿರುತ್ತದೆ.

ಮಳೆಯ ಅಭಾವದಿಂದ ಬಹುತೇಕ ಗ್ರಾಮಗಳು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿವೆ. ಈ ಪ್ರದೇಶದಲ್ಲಿ ಬಹಳಷ್ಟು ಕೊಳವೆ ಬಾವಿಗಳನ್ನು ಕೊರೆಯಲಾಗಿದ್ದು, ಕೆಲವೇ ಕೊಳವೆ ಬಾವಿಗಳಲ್ಲಿ ನೀರು ದೊರೆತಿರುತ್ತದೆ. ಅಂರ್ತಜಲಮಟ್ಟ ಕಡಿಮೆಯಾಗಿರುವುದರಿಮದ ಇನ್ನುಳಿದ ಕೊಳವೆ ಬಾವಿಗಳಲ್ಲಿ ನೀರು ದೊರೆತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಪ್ರಸ್ತಾಪಿಸಲಾಗಿದೆ ಎಂದು ಸಚಿವರು ವಿವರ ನೀಡಿದರು.

ಕುಂದಾಪುರ ತಾಲೂಕಿನ ಗ್ರಾಮಗಳಿಗೆ ನೀರಾವರಿ

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿನ ಅಜ್ರೆ, ಕೊಡ್ಲಾಡಿ, ಅಂಪಾರು, ಕರ್ಕುಂಜೆ, ಸಿದ್ದಾಪುರ ಹಾಗೂ ಇತರೆ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಇಂದು ರಾಜ್ಯ ಸಚಿವ ಸಂಪುಟ ತನ್ನ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯಲ್ಲಿನ ಸಿದ್ದಾಪುರ, ಅಂಪಾರು, ಅಜ್ರಿ ಮತ್ತು ಕೊಡ್ಲಾಡಿ ಗ್ರಾಮಗಳ ಪ್ರದೇಶವು ವಾರಾಹಿ ಬಲದಂಡೆ ನಾಲೆಯ ಬಲ ಭಾಗದಲ್ಲಿ ಬರುವುದರಿಮದ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುತ್ತದೆ. ಈ ಪ್ರದೇಶದ ಬಹುಭಾಗವು ಕೃಷಿ ಭೂಮಿಯಾಗಿದ್ದು, ನೀರಾವರಿಯು ಅಗತ್ಯವಾಗಿರುವುದರಿಂದ, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ನೀರಾವರಿ ಸೌಲಭ್ಯವನ್ನು ಒದಗಿಸುವಂತೆ ಒತ್ತಾಯಿಸುತ್ತಿರುತ್ತಾರೆ. ಆದುದರಿಂದ ಸದರಿ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿರುತ್ತದೆ ಎಂದು ಸಚಿವರು ವಿವರಿಸಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ