logo
ಕನ್ನಡ ಸುದ್ದಿ  /  ಕರ್ನಾಟಕ  /  Ct Ravi: ಅನಾರೋಗ್ಯದ ಕಾರಣದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಮುಖಂಡ ಸಿಟಿ ರವಿ

CT Ravi: ಅನಾರೋಗ್ಯದ ಕಾರಣದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ಮುಖಂಡ ಸಿಟಿ ರವಿ

Reshma HT Kannada

May 11, 2023 10:39 AM IST

google News

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (ANI)

    • CT Ravi Hospitalized: ಕಳೆದ ರಾತ್ರಿ ಧಿಡೀರ್‌ ಆರೋಗ್ಯ ವ್ಯತ್ಯಯ ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ಸಿಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (ANI)
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (ANI)

ಚಿಕ್ಕಮಗಳೂರು: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅನಾರೋಗ್ಯದ ಕಾರಣದಿಂದ ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಇವರನ್ನು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಇವರ ಆರೋಗ್ಯಕ್ಕೆ ಸಂಬಂಧಿಸಿ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಹಿಂದೆ ಕೂಡ ರವಿ ಅವರಿಗೆ ಕಿಡ್ನಿ ಸಮಸ್ಯೆ ಕಾಣಿಸಿಕೊಂಡಿತ್ತು, ಅಲ್ಲದೆ ಅವರು ಆಸ್ಪತ್ರೆಗೂ ದಾಖಲಾಗಿದ್ದರು.

ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಸಾಕಷ್ಟು ಬ್ಯುಸಿಯಾಗಿದ್ದರು ಸಿಟಿ ರವಿ. ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇವರು ಪಕ್ಷದ ಕಾರ್ಯಕರ್ತರ ಜೊತೆ ಹಲವು ಕ್ಷೇತ್ರಗಳಲ್ಲಿ ಅಬ್ಬರ ಪ್ರಚಾರ ನಡೆಸಿದ್ದರು.

ಏಪ್ರಿಲ್​ 15ರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಸಿ.ಟಿ.ರವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕಚೇರಿಯಿಂದ ಆಶ್ರಯ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದರು ರವಿ. ಆಗ ಅವರಿಗೆ ಕಿಡ್ನಿಯಲ್ಲಿ 12 ಎಂ.ಎಂ. ಕಲ್ಲು ಇದೆ ಅಂತ ವೈದ್ಯರು ತಿಳಿಸಿದ್ದರು ಎಂದು ಟಿವಿ 9 ವರದಿ ಮಾಡಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ