logo
ಕನ್ನಡ ಸುದ್ದಿ  /  ಕರ್ನಾಟಕ  /  Chikmagalur Crime News: ಮೂಡಿಗೆರೆ ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Chikmagalur Crime News: ಮೂಡಿಗೆರೆ ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Praveen Chandra B HT Kannada

Apr 14, 2023 01:53 PM IST

ಮೂಡಿಗೆರೆ ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    • ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್‌ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಮೂಡಿಗೆರೆ ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ (Chikmagalur Crime News) ಮಹಿಳೆಯೊಬ್ಬರು ಪೊಲೀಸ್‌ ಠಾಣೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಇಂದು ಬೆಳಗ್ಗೆ ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬವರು ಪೊಲೀಸ್‌ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪೊಲೀಸರು ಸಮಯ ಪ್ರಜ್ಞೆಯಿಂದ ರಕ್ಷಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

KRS Dam: ಕೊಡಗಲ್ಲಿ ಉತ್ತಮ ಮಳೆ, ಕೆಆರ್‌ಎಸ್ ಜಲಾಶಯಕ್ಕೆ ಬಂತು 2 ಅಡಿ ನೀರು

ಬೆಂಗಳೂರು: ಖಾಸಗಿ ಶಾಲಾ ಶುಲ್ಕ ಶೇ 30- 40 ಹೆಚ್ಚಳ, ಶುಲ್ಕ ನಿಯಂತ್ರಣ ಬೇಕೆನ್ನುತ್ತಿರುವ ಪಾಲಕರು, ಕೈಕಟ್ಟಿ ಕುಳಿತ ಸರ್ಕಾರ- 10 ಮುಖ್ಯ ಅಂಶ

ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಮೇ 23 ರಿಂದ ಜೂನ್ 9 ರ ತನಕ ಬೃಹತ್ ಮಾವು ಹಲಸಿನ ಮೇಳ, ಒಂದೇ ಸೂರಿನಡಿ ಹತ್ತಾರು ಬಗೆಯ ಹಣ್ಣು

ಕರ್ನಾಟಕ ಬರ ಪರಿಸ್ಥಿತಿ; 32 ಲಕ್ಷಕ್ಕೂ ಅಧಿಕ ರೈತರಿಗೆ 3454 ಕೋಟಿ ರೂ ಪರಿಹಾರ, ರಾಜ್ಯದಿಂದಲೂ 16 ಲಕ್ಷ ರೈತ ಕುಟುಂಬಕ್ಕೆ ತಲಾ 3,000 ರೂ

ವಿಡಿಯೋದಲ್ಲಿ ಮಹಿಳೆಯೊಬ್ಬರು ಠಾಣೆಯ ಮಹಡಿಯ ತುದಿಯಲ್ಲಿ ಅಳುತ್ತಿರುವುದು ಕಾಣಿಸುತ್ತದೆ. ಆ ಮಹಿಳೆ ಅಲ್ಲಿಗೆ ಹೇಗೆ ಹೋದ್ರು ಎನ್ನುವ ನೋಡುಗರ ಮಾತೂ ಕೇಳಿಸುತ್ತದೆ. ಮಹಿಳೆ ಮಹಡಿ ಮೇಲಿನಿಂದ ನೆಗೆಯಲು ಯತ್ನಿಸುವುದು, ಕೆಳಗ್ಗಿದ್ದವರು ಏಯ್‌, ಸುಮ್ನಿರು ಎಂದು ಆತ್ಮಹತ್ಯೆ ತಡೆಯಲು ಯತ್ನಿಸುವುದೂ ವಿಡಿಯೋದಲ್ಲಿದೆ. ಅದೇ ಸಮಯದಲ್ಲಿ ಹಿಂದಿನಿಂದ ಬಂದ ಪೊಲೀಸರು ಮಹಿಳೆಯನ್ನು ಹಿಂದಕ್ಕೆ ಎಳೆದುಕೊಂಡಿದ್ದು, ದುರಂತವೊಂದನ್ನು ತಪ್ಪಿಸಿದ್ದಾರೆ.

ಪೊಲೀಸ್‌ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನ ಕೂಡಲೇ ಎಚ್ಚೆತ್ತ ಪೊಲೀಸರು ರಕ್ಷಿಸಿ ಸಮಾಧಾನ ಮಾಡಿದ್ದಾರೆ. ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್‌ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಮಹಿಳೆ ಯತ್ನಿಸಿರುವುದನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಈಕೆಯ ಮೇಲೆ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. 2022ರಲ್ಲಿ ಮೂಡಿಗೆರೆ ಠಾಣೆಯಲ್ಲಿ ಈಕೆಯ ಮೇಲೆ ದೂರು ದಾಖಲಾಗಿತ್ತು. ಈ ಘಟನೆಯಿಂದ ನೊಂದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕೆ ಶಿಲ್ಪ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು ಎಂದು ಹೇಳಲಾಗಿದೆ.

ಮಾನಸಿಕ ವ್ಯಥೆ ಇರುವವರಿಗೆ ಸಹಾಯ ಮಾಡಿ

ಮಾನಸಿಕ ವೇದನೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಪ್ರತಿಯೊಬ್ಬರ ಮಾನಸಿಕ ಅನುಭವವೂ ಭಿನ್ನವಾಗಿದೆ. ಯಾರನ್ನಾದರೂ ಮಾನಸಿಕವಾಗಿ ಬೆಂಬಲಿಸಬೇಕು ಎಂದರೆ ಅವರ ಅಗತ್ಯತೆಗಳನ್ನು ಅರಿಯಿರಿ. ತಜ್ಞರ ಬೆಂಬಲ ಪಡೆಯಲು ಅವರನ್ನು ಪ್ರೋತ್ಸಾಹಿಸಿ.

ನಿಮ್ಮ ಪರಿಚಯದವರಲ್ಲಿ ಯಾರಾದರೂ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದರೆ, ಅವರ ಪರವಾಗಿ ಸಹಾನುಭೂತಿ ತೋರಿಸಿ ಪ್ರತಿಕ್ರಿಯಿಸುವುದು ಅವಶ್ಯ. ಚಿಂತೆ, ಒತ್ತಡ, ಖಿನ್ನತೆಯಂತಹ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರಿಗೆ ಈ ಮಾರ್ಗಗಳ ಮೂಲಕ ಮಾರ್ಗದರ್ಶನ ಮಾಡಬಹುದು. ಅವರು ಒಂಟಿಯಾಗಿಲ್ಲ, ಅವರೊಂದಿಗೆ ನೀವಿದ್ದೀರಿ ಎಂಬ ಭರವಸೆ ಅವರಲ್ಲಿ ಮೂಡಿಸಿ. ಅಗತ್ಯವಿದ್ದರೆ ಕೌನ್ಸಿಲರ್‌ ಅಥವಾ ಮನೋರೋಗ ತಜ್ಞರ ಸಹಾಯ ಪಡೆಯಲು ಅವರನ್ನು ಪ್ರೋತ್ಸಾಹಿಸಿ. ಸೂಕ್ತ ತಜ್ಞರನ್ನು ಹುಡುಕಲು ಅವರಿಗೆ ಬೆಂಬಲ ನೀಡಿ.

ನಿಮ್ಮ ಸಹಕಾರ ಅವರಿಗಿದೆ ಎಂಬುದನ್ನು ಮನವರಿಕೆ ಮಾಡಿಸಿ. ಈ ಕುರಿತಾದ ಸಲಹೆಗಳು ಇಲ್ಲಿವೆ.

ಆತ್ಮಹತ್ಯೆ ತಪ್ಪಿಸಿ- ಐಕಾಲ್‌ ಹೆಲ್ಪ್‌ ಲೈನ್‌ಗೆ ಕರೆ ಮಾಡಿ: 9152987821

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ