Tippu nija kanasugalu Book: ಟಿಪ್ಪು ನಿಜ ಕನಸುಗಳು ಪುಸ್ತಕಕ್ಕೆ ವಿಧಿಸಿದ್ದ ನಿರ್ಬಂಧ ತೆರೆವು
Dec 08, 2022 10:07 PM IST
ಟಿಪ್ಪು ಸುಲ್ತಾನ್
ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ವಿಧಿಸಿದ್ದ ತಾತ್ಕಾಲಿಕ ನಿರ್ಬಂಧವನ್ನು ತೆರೆವುಗೊಳಿಸಲಾಗಿದೆ.
ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು ಪುಸ್ತಕ ಮಾರಾಟಕ್ಕೆ ವಿಧಿಸಿದ್ದ ತಾತ್ಕಾಲಿಕ ನಿರ್ಬಂಧವನ್ನು ತೆರೆವುಗೊಳಿಸಲಾಗಿದೆ. ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶವನ್ನು ನೀಡಿದೆ.
ಬೆಂಗಳೂರು ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಬಿ. ಎಸ್ ರಫಿವುಲ್ಲಾ ಸಲ್ಲಿಸಿದ ಪ್ರಕರಣವನ್ನು ಆಕ್ಷೇಪಿಸಿರುವ ಪ್ರತಿವಾದಿಗಳ ವಾದವನ್ನು 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶ ಜೆ ಆರ್ ಮೆಂಡೋನ್ಸಾ ಅವರ ನೇತೃತ್ವದ ಮಾನ್ಯತೆ ನೀಡಲಾಗಿದೆ.
ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ಬರೆದಿರುವ 'ಟಿಪ್ಪು ನಿಜ ಕನಸುಗಳು' ಪುಸ್ತಕದ ವಿತರಣೆ ಮತ್ತು ಮಾರಾಟಕ್ಕೆ ನ್ಯಾಯಾಲಯವು ಈ ಹಿಂದೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಪುಸ್ತಕದಲ್ಲಿ ಹಿಂದಿನ ಮೈಸೂರು ಸಾಮ್ರಾಜ್ಯದ ಆಡಳಿತದ ಬಗ್ಗೆ ತಪ್ಪು ಮಾಹಿತಿ ಇದೆ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಒಳಗೊಂಡಿದೆ ಎಂದು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಡಿಸೆಂಬರ್ 3ರ ವರೆಗೆ ತಡೆಯಾಜ್ಞೆ ನೀಡಿತ್ತು. ಆನ್ಲೈನ್ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡಬಾರದು ಎಂದು ಸೂಚನೆ ನೀಡಲಾಗಿತ್ತು.
ಆದರೆ, ಪ್ರತಿವಾದಿಗಳು ಸದರಿ ಪುಸ್ತಕಗಳನ್ನು ಮುದ್ರಿಸಲು ಮತ್ತು ಈಗಾಗಲೇ ಮುದ್ರಿಸಿರುವ ಪುಸ್ತಕಗಳನ್ನು ಸಂಗ್ರಹಿಸಲು ಈ ತಡೆಯಾಜ್ಞೆಯು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಅಂದೇ ಸ್ಪಷ್ಟಪಡಿಸಿತ್ತು.
ಬೆಂಗಳೂರು ನಿವಾಸಿ ಜಿಲ್ಲಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ.ಎಸ್. ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 15ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಜೆ.ಆರ್.ಮೆಂಡೋನ್ಸಾ ಅವರ ನೇತೃತ್ವದ ಪೀಠವು ಈ ಆದೇಶ ನೀಡಿತ್ತು.
ಪುಸ್ತಕದಲ್ಲಿ ಬಳಸಲಾದ ತುರುಕರು ಎಂಬ ಪದವು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಪುಸ್ತಕದ ಪ್ರಕಟಣೆಯು ಅಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಉಂಟುಮಾಡುತ್ತದೆ, ಸಾರ್ವಜನಿಕ ಶಾಂತಿಗೆ ಭಂಗ ತರುತ್ತದೆ ಎಂದು ರಫೀವುಲ್ಲಾ ಅವರು ಪ್ರತಿಪಾದಿಸಿದ್ದರು. ಆದರೆ ಇದೀಗ ಕೋರ್ಟ್ ನಿರ್ಬಂಧ ತೆರೆವು ಮಾಡಿರುವ ಹಿನ್ನೆಲೆಯಲ್ಲಿ ರಫೀವುಲ್ಲಾ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
ವಿಭಾಗ