ಕನ್ನಡ ಸುದ್ದಿ  /  ಕರ್ನಾಟಕ  /  Hampi Utsava 2023: ಸಿಎಂ ಬೊಮ್ಮಾಯಿ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ

Hampi Utsava 2023: ಸಿಎಂ ಬೊಮ್ಮಾಯಿ ಅವರಿಂದ ಹಂಪಿ ಉತ್ಸವಕ್ಕೆ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ

HT Kannada Desk HT Kannada

Dec 28, 2022 07:26 PM IST

ಶಶಿಕಲಾ ಜೊಲ್ಲೆ

    • ಮುಂಬರು ಜನವರಿ 27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವೆ ಜೊಲ್ಲೆ, ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಶಶಿಕಲಾ ಜೊಲ್ಲೆ
ಶಶಿಕಲಾ ಜೊಲ್ಲೆ (HT)

ಬೆಳಗಾವಿ: ಮುಂಬರು ಜನವರಿ 27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಸಂಸ್ಥೆಗಳ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Viral Video: ಕುದುರೆ ಬದಲು ಏಥರ್ ರಿಝ್ತಾ ಮೇಲೇರಿ ಬಂದ ಬೆಂಗಳೂರು ಮದುಮಗನ ವರಯಾತ್ರೆ ಸಂಭ್ರಮ, ಫೋಟೋ ವಿಡಿಯೋ ವೈರಲ್‌

ಕರ್ನಾಟಕ ಹವಾಮಾನ ಮೇ 15; ಬಾಗಲಕೋಟೆ, ಬೀದರ್ ಸೇರಿ 6 ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳ ಕೆಲವೆಡೆ ಮಳೆ ನಿರೀಕ್ಷೆ, ಉಳಿದಂತೆ ಒಣಹವೆ

Hassan Scandal: ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದು ವಾಪಾಸ್‌ ನಿರೀಕ್ಷೆ, ಕಾದು ಕುಳಿತಿರುವ ಎಸ್‌ಐಟಿ ಪೊಲೀಸರು

Bangalore News: ಬೆಂಗಳೂರಿನ ಪ್ರತಿಷ್ಠಿತ ಜೈನ್ ಹೆರಿಟೇಜ್ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ; ಆತಂಕದ ವಾತಾವರಣ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವೆ ಶಶಿಕಲಾ ಜೊಲ್ಲೆ, ಹಂಪಿ ಉತ್ಸವದ ಸಿದ್ದತೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಕೋವಿಡ್‌ ನಂತರ ಹಾಗೂ ವಿಜಯನಗರ ಜಿಲ್ಲೆ ಹೊಸದಾಗಿ ನಿರ್ಮಾಣವಾದ ನಂತರ ನಡೆಸುತ್ತಿರುವ ಮೊದಲ ಉತ್ಸವ ಇದಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಅದ್ದೂರಿಯಾಗಿ ಉತ್ಸವ ಆಚರಣೆಗೆ ಸೂಚನೆ ನೀಡಲಾಗಿತ್ತು. ಇದಕ್ಕೆ ಅಗತ್ಯ ಸಿದ್ದತೆಗಳನ್ನು ಚುರುಕುಗೊಳಿಸುವಂತೆ ಇಂದು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳಿಂದ ಉದ್ಘಾಟನೆ:

ಕಳೆದ ಬಾರಿ ವಿಜಯನಗರ ಜಿಲ್ಲೆಯಲ್ಲಿ ನಡೆಸಿದ ಸಭೆಯಲ್ಲಿ, ಜನವರಿ 27, 28 ಮತ್ತು 29ರಂದು ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ವಿಷಯವಾಗಿ ಚರ್ಚಿಸಿದ್ದು, ಅವರು ಜನವರಿ 27ರಂದು ಉತ್ಸವ ಉದ್ಘಾಟನೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಶಿಕಲಾ ಜೊಲ್ಲೆ ಮಾಹಿತಿ ನೀಡಿದರು.

ದಸರಾ ಮಾದರಿಯ ದೀಪಾಲಂಕಾರ:

ದಸರಾ ಮಾದರಿಯಲ್ಲಿ ಹಂಪಿ ಹಾಗೂ ಹೊಸಪೇಟೆಯಲ್ಲಿ ದೀಪದ ಆಲಂಕಾರ ಮಾಡುವ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಹೊಸದಾಗಿ ದೀಪಾಲಂಕಾರ ಸಮಿತಿಯನ್ನು ರಚನೆ ಮಾಡಲಾಗಿದ್ದು ಸದರಿ ಸಮಿತಿಯ ಸದಸ್ಯರು ಹೊಸಪೇಟೆ, ಕಮಲಾಪುರ, ಹಂಪಿ ಈ ಮೂರು ಸ್ಥಳಗಳ ಮುಖ್ಯ ರಸ್ತೆಗಳಲ್ಲಿ ಪ್ರಮುಖ ಸ್ಥಳಗಳಲ್ಲಿ, ವಿಶೇಷ ದೀಪಾಲಂಕಾರ ಮಾಡಲು ಪ್ಲಾನ್‌ ತಯಾರಿಸಿ ಪ್ರಸ್ತುತಪಡಿಸಲು ಸೂಚನೆ ನೀಡಲಾಯಿತು.

ಸ್ಥಳೀಯ ಕಲಾತಂಡಗಳಿಗೆ ಹೆಚ್ಚಿನ ಆದ್ಯತೆ:

ಹಂಪಿ ಉತ್ಸವದಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಕೋರಿ ಸುಮಾರು 1,036 ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳ ಆಯ್ಕೆಗೆ ಸಮಿತಿಯನ್ನು ರಚಿಸಲಾಗಿದ್ದು ಇದುವರೆಗೂ ಅವಕಾಶ ಸಿಗದ ಸ್ಥಳೀಯ ಕಲಾವಿದರುಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು ಎಂದು ಸಚಿವರು ಇದೇ ವೇಳೆ ಸೂಚನೆ ನೀಡಿದ್ದಾರೆ. ಕಲಾ ತಂಡಗಖನ್ನು ಗುರುತಿಸುವ ಕೆಲಸ ಪಾರದರ್ಶಕವಾಗಿರಬೇಕು ಎಂದು ಸಚಿವರು ಇದೇ ವೇಳೆ ಅಧುಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಕಾನೂನು ಸುವ್ಯವಸ್ಥೆಗೆ ಅಗತ್ಯ ತಯಾರಿ:

ಲಕ್ಷಾಂತರ ಜನರು ಸೇರುವ ಈ ಉತ್ಸವದಲ್ಲಿ ಅಗತ್ಯ ಕಾನೂನು ಸುವ್ಯವಸ್ಥೆಗೆ ವ್ಯವಸ್ಥೆ ಮಾಡಬೇಕು. ಹಂಪಿ ಪ್ರದೇಶದಲ್ಲಿ ಸಂಪೂರ್ಣ ಸಿ.ಸಿ ಟಿವಿಗಳನ್ನು ಅಳವಡಿಸಬೇಕು. ಹಂಪಿಗೆ ಹೋಗುವ ಮಾರ್ಗವಾದ ಕಡ್ಡಿರಾಂಪುರ ಸ್ವಾಗತ ಕಮಾನಿನಿಂದ ಕಡ್ಡಿರಾಂಪೂರ, ಕೃಷ್ಣಾ ದೇವಸ್ಥಾನ, ಉದ್ದಾನ ವೀರಭದ್ರೇಶ್ವರ ದೇವಸ್ಥಾನದ ಮಾರ್ಗದ ಮೂಲಕ ಕಮಲಾಪುರದವರೆಗೆ ಏಕಮುಖ ಮಾರ್ಗ ಸಂಚಾರ ವ್ಯವಸ್ಥೆ ಮಾಡುವುದು. ಹಂಪಿ ಪ್ರದೇಶದಲ್ಲಿ ಅವಶ್ಯವಿದ್ದ ಕಡೆಗಳಲ್ಲಿ ಶಾಶ್ವತವಾಗಿ ಸಂಚಾರ ಸಂಕೇತಗಳನ್ನು ಅಳವಡಿಸುವುದು. ಸುವ್ಯವಸ್ಥಿತ ವಾಹನ ನಿಲುಗಡೆಗೆ ಅವಕಾಶ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ರಾಜ್ಯ ಮತ್ತು ರಾಷ್ಟ್ರಮಟ್ಟದ ಕಲಾತಂಡಗಳಿಂದ ಹೊಸಪೇಟೆ ನಗರದಲ್ಲಿ ವಸಂತವೈಭವ ಮೆರವಣಿಗೆ ಕಾರ್ಯಕ್ರಮ, ತುಂಗಾನದಿಯ ತಟದಲ್ಲಿ ತುಂಗಾರತಿ, ವಿಜಯನಗರ ವೈಭವದ ಕುರಿತು ಸುಮಾರು 300 ಕಲಾವಿದರನ್ನೊಳಗೊಂಡ ಧ್ವನಿ ಮತ್ತು ಬೆಳಕು ಕಾರ್ಯಕ್ರಮ, ಹಂಪಿ ಬೈ ಸ್ಕೈ, ವಿಭಿನ್ನ ರೀತಿಯ ಫಲಪುಷ್ಪ ಪ್ರದರ್ಶನ, ಅಶ್ವದಳ ಪ್ರದರ್ಶನ, ಕುಸ್ತಿ ಹಾಗೂ ಇತರೆ ಗ್ರಾಮೀಣ ಕ್ರೀಡೆಗಳ ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ಸಚಿವೆ ಜೊಲ್ಲೆ ತಿಳಿಸಿದರು.

ಸಭೆಯಲ್ಲಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ವೆಂಕಟೇಶ್‌ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ