logo
ಕನ್ನಡ ಸುದ್ದಿ  /  ಕರ್ನಾಟಕ  /  Hdk On Dussehra Kavigoshti: ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಮಾಜಿ ಸಿಎಂ ಎಚ್ಡಿಕೆ ಏನಂದ್ರು?

HDK On Dussehra Kavigoshti: ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಮಾಜಿ ಸಿಎಂ ಎಚ್ಡಿಕೆ ಏನಂದ್ರು?

HT Kannada Desk HT Kannada

Sep 28, 2022 10:22 PM IST

ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಮಾಜಿ ಸಿಎಂ ಎಚ್ಡಿಕೆ ಏನಂದ್ರು?

    • ಮೈಸೂರು ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವ ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿಯ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.
ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಮಾಜಿ ಸಿಎಂ ಎಚ್ಡಿಕೆ ಏನಂದ್ರು?
ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಕೊಕ್; ಮಾಜಿ ಸಿಎಂ ಎಚ್ಡಿಕೆ ಏನಂದ್ರು?

ಬೆಂಗಳೂರು: ಮೈಸೂರು ದಸರಾ ಕವಿಗೋಷ್ಟಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವ ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿಯ ನಡೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಜತೆಗೆ ಮಾಧ್ಯಮ ಹೇಳಿಕೆಯನ್ನೂ ನೀಡಿ ಸರಕಾರವನ್ನು ಖಂಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ; ಶೀಘ್ರದಲ್ಲೇ ಹಾಸನ ಸಂಸದ ಇರುವ ಸ್ಥಳ ಪತ್ತೆ

Bangalore News:ಮುಂಗಾರಿಗೆ ಅಣಿಯಾಗುತ್ತಿದೆ ಬೆಂಗಳೂರು, ಬಿಬಿಎಂಪಿಯಿಂದ ಸ್ವಚ್ಛ ಕಾರ್ಯ ಚುರುಕು

Summer Effect: ಬಿಸಿಲಿಗೆ ತತ್ತರಿಸಿದ ಕುಕ್ಕುಟೋದ್ಯಮ, ಕೋಳಿ ಉಳಿಸಿಕೊಳ್ಳಲು ಕೂಲರ್‌ ಮೊರೆ, ಚಿಕನ್‌ ಬೆಲೆಯಲ್ಲಿ ಏರಿಕೆ

ಸಿಇಟಿ, ನೀಟ್ ಕುರಿತು ಆಟೊ ಚಾಲಕನೊಂದಿಗೆ ಮಹಿಳೆ ಚರ್ಚೆ; ಪ್ರಯಾಣದಲ್ಲಿನ ಸಂಭಾಷಣೆ ಪೋಸ್ಟ್‌ ವೈರಲ್, ಭಾರಿ ಮೆಚ್ಚುಗೆ

ಜಗದ್ವಿಖ್ಯಾತ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ. ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. ರಾಜ್ಯ ಬಿಜೆಪಿ ಸರಕಾರದ್ದು ಏಕಪಕ್ಷೀಯ ನಡೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ ಬಿಜೆಪಿ ಸರಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿ ಎಂದು ಅವರು ಟೀಕಿಸಿದ್ದಾರೆ.

ಏಕಭಾಷೆಯನ್ನು ಮೆರೆಸುವ ಬಿಜೆಪಿಗೆ ಈ ನೆಲದ ತಾಯಿಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ. ಇದು ಖಂಡಿತಾ ನಡೆಯುವುದಿಲ್ಲ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ʼಬ್ಯಾರಿ ಸಾಹಿತ್ಯ ಅಕಾಡೆಮಿʼ ಸ್ಥಾಪನೆಗೆ ಅನುಮೋದನೆ ನೀಡಿದ್ದೆ. ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ.

ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ. ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿ ಭಾಷೆಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ. ರಾಜ್ಯ ಬಿಜೆಪಿ ಸರಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು