logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Elections: ಕಿತ್ತೂರು ಕರ್ನಾಟಕದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ 40 ಸೀಟು ಗೆಲ್ಲುವ ಗುರಿ, ಬೆಳಗಾವಿಯಲ್ಲಿ 12 ಸೀಟು ಮೇಲೆ ಕಣ್ಣು

Karnataka Elections: ಕಿತ್ತೂರು ಕರ್ನಾಟಕದ ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ 40 ಸೀಟು ಗೆಲ್ಲುವ ಗುರಿ, ಬೆಳಗಾವಿಯಲ್ಲಿ 12 ಸೀಟು ಮೇಲೆ ಕಣ್ಣು

HT Kannada Desk HT Kannada

Mar 27, 2023 09:49 AM IST

ಸತೀಶ್ ಜಾರಕಿಹೊಳಿ (HT Archive)

  • ಕರ್ನಾಟಕದ ಗಡಿ ಜಿಲ್ಲೆಯಾದ ಬೆಳಗಾವಿಯು ಕಾಂಗ್ರೆಸ್‌ನ ಭದ್ರಕೋಟೆಯೆಂದು ಪರಿಗಣಿಸಲಾಗಿದ್ದು, ಅಲ್ಲಿ 70 ಮತ್ತು 80ರ ದಶಕಗಳಲ್ಲಿ ಪಕ್ಷವು ಎಲ್ಲಾ 18 ಸೀಟುಗಳಲ್ಲಿ ಗೆಲುವು ಪಡೆಯುತ್ತಿತ್ತು. ಇದೀಗ ಅಲ್ಲಿ ಕನಿಷ್ಠ 12 ಸೀಟುಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೊಂದಿದೆ.

 ಸತೀಶ್ ಜಾರಕಿಹೊಳಿ  (HT Archive)
ಸತೀಶ್ ಜಾರಕಿಹೊಳಿ (HT Archive)

ಬೆಳಗಾವಿ: ಕಿತ್ತೂರು ಕರ್ನಾಟಕದಲ್ಲಿ ಮತ್ತೆ ಪ್ರಾಬಲ್ಯ ಸಾಧಿಸುವ ಕನಸಿನಲ್ಲಿ ಕಾಂಗ್ರೆಸ್‌ ಇದ್ದು, "ಐದು ಜಿಲ್ಲೆಗಳಲ್ಲಿ ಕನಿಷ್ಠ 40 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ" ಎಂದು ಕಾಂಗ್ರೆಸ್‌ ಪಕ್ಷದ ಮುಖಂಡರು ತಿಳಿಸಿದ್ದಾರೆ. ಕರ್ನಾಟಕದ ಗಡಿ ಜಿಲ್ಲೆಯಾದ ಬೆಳಗಾವಿಯು ಕಾಂಗ್ರೆಸ್‌ನ ಭದ್ರಕೋಟೆಯೆಂದು ಪರಿಗಣಿಸಲಾಗಿದ್ದು, ಅಲ್ಲಿ 70 ಮತ್ತು 80ರ ದಶಕಗಳಲ್ಲಿ ಪಕ್ಷವು ಎಲ್ಲಾ 18 ಸೀಟುಗಳಲ್ಲಿ ಗೆಲುವು ಪಡೆಯುತ್ತಿತ್ತು. ಇದೀಗ ಅಲ್ಲಿ ಕನಿಷ್ಠ 12 ಸೀಟುಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೊಂದಿದೆ.

ಟ್ರೆಂಡಿಂಗ್​ ಸುದ್ದಿ

ಮಂಗಳೂರು ವಿಮಾನ ನಿಲ್ಧಾಣಕ್ಕೆ ಬಂದು ಗೊಂದಲಕ್ಕೆ ಒಳಗಾದ ಮಹಿಳೆ, ನೆರವಾದ ಭದ್ರತಾ ಸಿಬ್ಬಂದಿ, ನಾಪತ್ತೆ ಪ್ರಕರಣ ಸುಖಾಂತ್ಯ

ದಕ್ಷಿಣ ಕನ್ನಡದ ಮಂಗಳೂರು, ಪುತ್ತೂರಲ್ಲಿ ಹಲಸು, ಮಾವು ಸೇರಿ ವಿವಿಧ ಹಣ್ಣುಗಳ ಮೇಳ, ದಿನಾಂಕ ಮತ್ತು ಇತರೆ ವಿವರ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಆತ್ಮಹತ್ಯೆಯ ನಾಟಕವಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಜಿಮ್ ತರಬೇತುದಾರ; ಮನೆಯಲ್ಲೇ ಬಿಬಿಎ ವಿದ್ಯಾರ್ಥಿನಿ ಶಂಕಾಸ್ಪದ ಸಾವು

"ವಿವಿಧ ಏಜೆನ್ಸಿಗಳು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ತಂಡಗಳ ಮೂಲಕ ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ಆ ಸಮೀಕ್ಷಾ ವರದಿಗಳ ಆಧಾರದಲ್ಲಿ ಕಾಂಗ್ರೆಸ್ ಬೆಳಗಾವಿಯಿಂದ ಸ್ಪರ್ಧಿಸಲು ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ" ಎಂದು ಕಾಂಗ್ರೆಸ್‌ ಮುಖಂಡರು ಹೇಳಿದ್ದಾರೆ.

ಕಾಂಗ್ರೆಸ್‌ನ ಕೇಂದ್ರ ಮತ್ತು ರಾಜ್ಯ ಗುಪ್ತಚರ ಇಲಾಖೆಗಳು ಜಾರಕಿಹೊಳಿ ಅವರ ತಂಡದ ಅಭ್ಯರ್ಥಿಗಳ ಪಟ್ಟಿಯ ಶಿಫಾರಸುಗಳನ್ನು ಅನುಮೋದಿಸಿವೆ. "ಜಾರಕಿಹೊಳಿ ಅವರ ತಂಡದಿಂದ ಆಯ್ಕೆಯಾದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ ತನ್ನ ಸಾಮರ್ಥ್ಯವನ್ನು ಈಗಿನ ಐದು ಸ್ಥಾನಗಳಿಂದ ಒಂಬತ್ತಕ್ಕೆ ಹೆಚ್ಚಿಸಲಿದೆ” ಎಂದು ಕಾಂಗ್ರೆಸ್‌ನ ಗುಪ್ತಚರ ಇಲಾಖೆಗಳು ತಿಳಿಸಿವೆ.

"ಜಾರಕಿಹೊಳಿ ಅವರ ಮೇಲೆ ನಂಬಿಕೆ ಇಟ್ಟು ಬಿಜೆಪಿ ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೈಕಮಾಂಡ್ ನಾಲ್ವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇತ್ತೀಚೆಗಷ್ಟೇ ಪ್ರಕಟಿಸಿದ ತನ್ನ ಮೊದಲ ಪಟ್ಟಿಯಲ್ಲಿ ತನ್ನ ಎಲ್ಲಾ ಐವರು ಶಾಸಕರಿಗೆ ಆಯಾ ಕ್ಷೇತ್ರಗಳಿಂದ ಸ್ಪರ್ಧಿಸಲು ಟಿಕೆಟ್ ಘೋಷಿಸಿದೆ." ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.

“ನಮ್ಮ ಸಂಪೂರ್ಣ ಸಾಮರ್ಥ್ಯದ ಮೇಲೆ ಸರ್ಕಾರವನ್ನು ಸ್ಥಾಪಿಸುವಂತಹ ಉದ್ದೇಶದಿಂದ ನಾವು ಎಲ್ಲಾ ನಾಲ್ಕು ಪ್ರದೇಶಗಳಿಂದ 40 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ. ನಾವು ಚುರುಕಾಗಿ ಕೆಲಸ ಮಾಡಿದರೆ 140 ಸ್ಥಾನಗಳನ್ನು ಗೆಲ್ಲಬಹುದು. ಇಂತಹ ಗುರಿಯನ್ನು ನಾವು ಹೊಂದಿದ್ದೇವೆ" ಎಂದು ಕಾಂಗ್ರೆಸ್‌ನ ಚಿಂತಕರ ಚಾವಡಿ ಸದಸ್ಯ ಜಾರಕಿಹೊಳಿ ಹೇಳಿದ್ದಾರೆ.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆಸಿದ್ದ ಗೋಕಾಕ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಶಾಸಕ ರಮೇಶ ಜಾರಕಿಹೊಳಿ ಕನಿಷ್ಠ 15 ಸೀಟುಗಳನ್ನು ಗೆಲ್ಲಲು ಶ್ರಮಿಸಿದರು. ಅವರು ತಮ್ಮ ಕಾರ್ಯಕ್ಕೆ "ಟಾರ್ಗೆಟ್ 15" ಎಂದು ಹೆಸರಿಸಿದ್ದರು. ಆ ಸಂದರ್ಭದಲ್ಲಿ 8 ಸೀಟು ಗೆಲ್ಲಿಸಲು ಅವರಿಂದ ಸಾಧ್ಯವಾಗಿತ್ತು.

ಆದರೆ, ಅಥಣಿ ಶಾಸಕ ಮಹೇಶ ಕುಮಟೊಳ್ಳಿ ಮತ್ತು ಕಾಗವಾಡ ಶಾಸಕ ಶ್ರೀಮಂತ ಪಾಟೀಲರೊಂದಿಗೆ 2018ರಲ್ಲಿ ಬಿಜೆಪಿಗೆ ಪಕ್ಷಾಂತರ ಮಾಡಿದ ಇವರು ಕಾಂಗ್ರೆಸ್‌ನ ಬಲವನ್ನು ಐದಕ್ಕೆ ಇಳಿಸಿದ್ದರು. ಇವರ ಸಹೋದರ ಸತೀಶ್ ಜಾರಕಿಹೊಳಿ ಈಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. "ಇದೀಗ ಜಾರಕಿಹೊಳಿ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ನೀಡಿದ್ದಾರೆ. ತಾನು ಶಿಫಾರಸು ಮಾಡಿದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕನಿಷ್ಠ 12 ಸ್ಥಾನಗಳನ್ನು ಗೆಲ್ಲುವುದಾಗಿ ಹೈಕಮಾಂಡ್‌ಗೆ ಭರವಸೆ ನೀಡಿದ್ದಾರೆ" ಎಂದು ಮೂಲಗಳು ತಿಳಿಸಿವೆ.

ಅಥಣಿ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ. ಲಕ್ಷ್ಮಣ ಸವದಿ ಅವರನ್ನು ಬಿಟ್ಟು ಬೇರೆ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರೆ ಕಾಂಗ್ರೆಸ್‌ಗೆ ಸುಲಭವಾಗಲಿದೆ ಎನ್ನುವ ಲೆಕ್ಕಾಚಾರವಿದೆ. ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟೊಳ್ಳಿ ವಿರುದ್ಧ ಸೋತರೂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಪಡೆದಿದ್ದರು. ಸವದಿ ಅವರಿಗೆ ರಮೇಶ ಜಾರಕಿಹೊಳಿ ಜತೆ ಉತ್ತಮ ಬಾಂಧವ್ಯವಿಲ್ಲ. ಹೀಗಾಗಿ, ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಲುವಾಗಿ ಪಕ್ಷದ ನಾಯಕರನ್ನು ಒಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ