logo
ಕನ್ನಡ ಸುದ್ದಿ  /  ಕರ್ನಾಟಕ  /  ನಾಮಫಲಕದಲ್ಲಿ ಶೇ 60 ಕನ್ನಡ ಇಲ್ಲದಿದ್ದರೆ ಮಳಿಗೆ ಮುಚ್ಚುವಂತಿಲ್ಲ; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ

ನಾಮಫಲಕದಲ್ಲಿ ಶೇ 60 ಕನ್ನಡ ಇಲ್ಲದಿದ್ದರೆ ಮಳಿಗೆ ಮುಚ್ಚುವಂತಿಲ್ಲ; ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ

Umesh Kumar S HT Kannada

Mar 19, 2024 07:41 AM IST

ಕರ್ನಾಟಕ ಹೈಕೋರ್ಟ್‌ (ಎಡ ಚಿತ್ರ); ಕರ್ನಾಟಕ ವಿಧಾನ ಸೌಧ ( ಬಲ ಚಿತ್ರ)

  • Court News: ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಇರದಿದ್ದರೂ ವಾಣಿಜ್ಯ ಮಳಿಗೆ ಮುಚ್ಚುವಂತಿಲ್ಲ ಎಂದು ಕರ್ನಾಟಕ ಸರಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ಕೆಲವು ವಾಣಿಜ್ಯ ಮಳಿಗೆಗಳು ಸಲ್ಲಿಸಿರುವ ದಾವೆ ವಿಚಾರಣೆ ನಡೆಸಿದ ನ್ಯಾಯಪೀಠ, ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿದೆ.

ಕರ್ನಾಟಕ ಹೈಕೋರ್ಟ್‌ (ಎಡ ಚಿತ್ರ); ಕರ್ನಾಟಕ ವಿಧಾನ ಸೌಧ ( ಬಲ ಚಿತ್ರ)
ಕರ್ನಾಟಕ ಹೈಕೋರ್ಟ್‌ (ಎಡ ಚಿತ್ರ); ಕರ್ನಾಟಕ ವಿಧಾನ ಸೌಧ ( ಬಲ ಚಿತ್ರ)

ಬೆಂಗಳೂರು: ಕರ್ನಾಟಕ ಸರ್ಕಾರ (Karnataka Govt) ಜಾರಿಗೊಳಿಸಿರುವ ಕನ್ನಡ ಭಾಷಾ ನಿಯಮ ಪ್ರಕಾರ, ರಾಜ್ಯದಲ್ಲಿ ವ್ಯಾಪಾರ ವಹಿವಾಟು ನಡೆಸುವ ಅಂಗಡಿಗಳು, ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡ ಪದಗಳ ಬಳಕೆ ಮಾಡಬೇಕು. ಆದರೆ, ಬಳಕೆ ಮಾಡಿಲ್ಲ ಎಂದಾದರೆ ವಾಣಿಜ್ಯ ಮಳಿಗೆಳನ್ನು ಬಂದ್ ಮಾಡಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಮಧ್ಯಂತರ ಆದೇಶ ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಜಲ ಮಂಡಳಿ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗ್ಗೆ 9.30ಕ್ಕೆ, ಕುಂದುಕೊರತೆ, ಅಹವಾಲು ಸಲ್ಲಿಸಲು ಫೋನ್ ನಂಬರ್ ಇಲ್ಲಿದೆ..

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮ ಪ್ರಕಾರ, ನಾಮಫಲಕದಲ್ಲಿ ಕನ್ನಡ ಬಳಸದಿರುವ ಮಳಿಗೆಗಳನ್ನು ಬಂದ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ತಕರಾರರು ಅರ್ಜಿ ಸಲ್ಲಿಕೆಯಾಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸ ಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.

ಹೈಕೋರ್ಟ್‌ನಲ್ಲಿ ದಾಖಲಾಗಿರುವ ದಾವೆ; ಏನಿದು ಪ್ರಕರಣ?

ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಿರುವ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಮತ್ತು ಶೇ.60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿ 2024ರ ಫೆ.28ರಂದು ಹೊರಡಿಸಿರುವ ಸುತ್ತೋಲೆ ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಪಿವಿಆರ್ ಐನಾಕ್ಸ್‌ ಲಿಮಿಟೆಡ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿವೆ.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠ, ಮಳಿಗೆ ಮುಚ್ಚುವುದು (ಸೀಲ್ಡ್ ಡೌನ್) ಕಠಿಣ ಕ್ರಮವಾಗಲಿದೆ. ದಂಡ ಹಾಕುವ ಅಥವಾ ಪರವಾನಗಿ ರದ್ದುಪಡಿಸುವ ಕ್ರಮದ ಬಗ್ಗೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಮೇಲಾಗಿ ಕಾಯ್ದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ, ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಮಾಡದ ವಾಣಿಜ್ಯ ಸಂಸ್ಥೆಗಳನ್ನು ಸೀಲ್ ಡೌನ್ ಮಾಡುವಂತಹ ಬಲವಂತದ ಕ್ರಮ ಜರುಗಿಸಬಾರದು ಎಂದು ಹೇಳಿತು.

ಗೆಜೆಟ್ ಅಧಿಸೂಚನೆ ಎಲ್ಲಿದೆ; ನಾಮ ಫಲಕ ಅಳವಡಿಕೆಗೆ ಸಮಸ್ಯೆ ಏನು

ಯಾವ ದಿನದಿಂದ 'ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022' ಜಾರಿ ಮಾಡಲಾಗಿದೆ ಎಂಬ ಬಗ್ಗೆ ಗೆಜೆಟ್ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿಲ್ಲ. ಆ ಕುರಿತು ಸರ್ಕಾರ ಮಾಹಿತಿ ನೀಡಬೇಕು. ಉಳಿದಂತೆ ಸುತ್ತೋಲೆ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎನ್ನುತ್ತ ನ್ಯಾಯಪೀಠವು, ವಿಚಾರಣೆಯನ್ನು ಶುಕ್ರವಾರಕ್ಕೆ (ಮಾ.22) ಮುಂದೂಡಿತು.

ಈ ನಡುವೆ, ಕರ್ನಾಟಕದಲ್ಲಿ ವ್ಯಾಪಾರ ಮಾಡುವಾಗ ಕನ್ನಡ ನಾಮಫಲಕ ಹಾಕಬೇಕು. ಸ್ಥಳೀಯರಿಗೆ ಅರ್ಥವಾಗಬೇಕು ಎಂಬ ಕಾರಣಕ್ಕೆ ಸರಿ. ಶೇ 60ರಷ್ಟು ಕನ್ನಡ ನಾಮಫಲಕ ಹಾಕಿದರೆ ಸಮಸ್ಯೆ ಏನು? ಎಂದು ವಾಣಿಜ್ಯ ಮಳಿಗೆಗಳ ಸಂಘದ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿದೆ.

ಎಲ್ಲ ಬಗೆಯ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ-2022 ಜಾರಿ ಸಮರ್ಪಕವಾಗಿಲ್ಲ. ಜಾರಿ ದಿನಾಂಕದ ಬಗ್ಗೆ ಗೆಜೆಟ್‌ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಜತೆಗೆ, ಡಿಜಿಟಲ್‌ ನಾಮಫಲಕಗಳನ್ನು ಬದಲಿಸಲು ಸಾಕಷ್ಟು ಕಾಲಾವಕಾಶ ನೀಡಿಲ್ಲ. ತರಾತುರಿಯಲ್ಲಿ ಜಾರಿಗೊಳಿಸುವ ಪ್ರಯತ್ನ ನಡೆಯಿತು. ಸರಕಾರ ಮತ್ತು ಬಿಬಿಎಂಪಿ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿಲ್ಲದಿದ್ದರೆ ವಾಣಿಜ್ಯ ಸಂಸ್ಥೆಗಳನ್ನು ಸೀಲ್‌ಡೌನ್‌ ಮಾಡಿತ್ತಿವೆ. ಇದು ಸರಕಾರದ ಉಗ್ರ ಕ್ರಮ ಎಂದು ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ