logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Covid: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇರುವ ಕೋವಿಡ್ ಪ್ರಕರಣ; 24 ಗಂಟೆಗಳಲ್ಲಿ ಶೇ 225 ರಷ್ಟು ಏರಿಕೆ

Karnataka Covid: ಕರ್ನಾಟಕದಲ್ಲಿ ಹೆಚ್ಚುತ್ತಲೇ ಇರುವ ಕೋವಿಡ್ ಪ್ರಕರಣ; 24 ಗಂಟೆಗಳಲ್ಲಿ ಶೇ 225 ರಷ್ಟು ಏರಿಕೆ

Raghavendra M Y HT Kannada

Dec 23, 2023 04:13 PM IST

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಮಾಸ್ಕ್ ಧರಿಸಿರುವ ಸಾರ್ವಜನಿಕರು.

  • ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 225 ರಷ್ಟು ಸೋಂಕಿತರ ಪ್ರಮಾಣ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಮಾಸ್ಕ್ ಧರಿಸಿರುವ ಸಾರ್ವಜನಿಕರು.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಮಾಸ್ಕ್ ಧರಿಸಿರುವ ಸಾರ್ವಜನಿಕರು. (PTI)

ಬೆಂಗಳೂರು: ಭಾರತದಲ್ಲಿ ಕೋವಿಡ್ (India Covid) ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕೋವಿಡ್‌ನ ಉಪತಳಿ ಜೆಎನ್.1 (Covid JN.1) ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಹೊಸದಾಗಿ ಕೋವಿಡ್-19 (Karnataka Covid) ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಜಲ ಮಂಡಳಿ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಗ್ಗೆ 9.30ಕ್ಕೆ, ಕುಂದುಕೊರತೆ, ಅಹವಾಲು ಸಲ್ಲಿಸಲು ಫೋನ್ ನಂಬರ್ ಇಲ್ಲಿದೆ..

ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉಳಿದೆಡೆ ಮಳೆ ಮುನ್ಸೂಚನೆ

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

ರಾಜ್ಯದಲ್ಲಿ ಶುಕ್ರವಾರ (ಡಿಸೆಂಬರ್ 22) 78 ಹೊಸ ಪ್ರಕರಣಗಳು ದಾಖಲಾಗಿದ್ದು, ಓರ್ವ ಸೋಂಕಿತ ಮೃತಪಟ್ಟಿದ್ದಾನೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 40,321ಕ್ಕೆ ಏರಿಕೆಯಾಗಿದೆ. ಆ ಮೂಲಕ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಸೋಂಕಿತ ಪ್ರಕರಣಗಳು ಶೇಕಡಾ 225ಕ್ಕೆ ಏರಿಕೆಯಾಗಿದೆ. ಕೇರಳ ನಂತರ ಕರ್ನಾಟಕ ಸೋಂಕಿತರ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಜೆಎನ್‌1 ವೇರಿಯಂಟ್ ಹೆಚ್ಚಾಗುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಕೊರೊನಾ ಪಾಸಿಟಿವಿ ದರ ಗುರುವಾರ (ಡಿಸೆಂಬರ್ 21) ಶೇಕಡಾ 1.06 ರಷ್ಟಿದ್ದು, ಶುಕ್ರವಾರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ (ಡಿಸೆಂಬರ್ 22, ಶುಕ್ರವಾರ) ಹೊಸದಾಗಿ 68 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಗುರುವಾರ 105 ಪ್ರಕರಣಗಳು ದಾಖಲಾಗಿವೆ. 7 ಮಂದಿ ಚೇತರಿಕೆಯಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 156 ಸಕ್ರಿಯ ಪ್ರಕರಣಗಳಿವೆ. ಇತರ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 1, ಚಿಕ್ಕಮಗಳೂರಿನಲ್ಲಿ 4, ಮೈಸೂರಿನಲ್ಲಿ 1, ರಾಮನಗರದಲ್ಲಿ 2 ಹೊಸ ಪ್ರಕರಣಗಳು ವರದಿಯಾಗಿವೆ,.

ಪ್ರಸ್ತುತ ರಾಜ್ಯದಲ್ಲಿ ಒಟ್ಟು 175 ಸಕ್ರಿಯ ಪ್ರಕರಣಗಳಲ್ಲಿ 162 ಸೋಂಕಿತರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಜಡೆಯುತ್ತಿರುವ 13 ಜನರು ಪೈಕಿ ಆರು ಮಂದಿ ಐಸಿಯುನಲ್ಲಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40.89 ಲಕ್ಷ ಹಾಗೂ ಸಾವಿನ ಪ್ರಮಾಣ ಶೇಕಡಾ 1.28 ರಷ್ಟಿದೆ.

ಇನ್ನ ದೇಶದಲ್ಲಿ ಗುರುವಾರ ಹೊಸದಾಗಿ 594 ಹೊಸ ಪ್ರಕರಣಗಳು ದಾಖಲಾಗಿವೆ. ಆದರೆ ಸಕ್ರಿಯ ಪ್ರಕರಣ ಸಂಖ್ಯೆ 2,311 ರಿಂದ 2,669ಕ್ಕೆ ಏರಿದೆ. ಇನ್ನ ಒಟ್ಟು ಸಾವಿನ ಸಂಖ್ಯೆ 5,33,327ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಇಬ್ಬರು, ಪಂಜಾಬ್‌ನಲ್ಲಿ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ