logo
ಕನ್ನಡ ಸುದ್ದಿ  /  ಕರ್ನಾಟಕ  /  ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣಬಿಟ್ಟ ದೈವನರ್ತಕ: ಕಡಬದಲ್ಲೊಂದು ಹೃದಯ ವಿದ್ರಾವಕ ಘಟನೆ!

ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಪ್ರಾಣಬಿಟ್ಟ ದೈವನರ್ತಕ: ಕಡಬದಲ್ಲೊಂದು ಹೃದಯ ವಿದ್ರಾವಕ ಘಟನೆ!

HT Kannada Desk HT Kannada

Mar 30, 2023 02:08 PM IST

ಮೃತ ಕಾಂತು ಅಜಿಲ ಮೂಲಂಗೀರಿ

  • ದೈವನರ್ತನದ ವೇಳೆಯೇ, ದೈವ ನರ್ತಕರೊಬ್ಬರು ಕುಸಿದು ಬಿದ್ದು ತಮ್ಮ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಾಂತು ಅಜಿಲ ಮೂಲಂಗೀರಿ ಎಂಬುವವರೇ ಮೃತ ದುರ್ದೈವಿಯಾಗಿದ್ದು, ಮೂಲಂಗೀರಿ ಅವರ ನಿಧನಕ್ಕೆ ಹೃದಯಾಘಾತ ಕಾರಣ ಎಂದು ಹೇಳಲಾಗಿದೆ.

ಮೃತ ಕಾಂತು ಅಜಿಲ ಮೂಲಂಗೀರಿ
ಮೃತ ಕಾಂತು ಅಜಿಲ ಮೂಲಂಗೀರಿ (HT)

ಕಡಬ: ದೈವನರ್ತನದ ವೇಳೆಯೇ, ದೈವ ನರ್ತಕರೊಬ್ಬರು ಕುಸಿದು ಬಿದ್ದು ತಮ್ಮ ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಎಡಿಎ ರಂಗಮಂದಿರದಲ್ಲಿ ಕಲಾವಿದೆ ವಿದ್ಯಾಶ್ರೀ ಎಚ್‌ಎಸ್ ಅವರ ಭರತನಾಟ್ಯ ರಂಗಾರೋಹಣ ನಾಳೆ

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Hassan Scandal; ಹಾಸನ ಹಗರಣದ ಸಂತ್ರಸ್ತೆ ನಾಪತ್ತೆ ಆತಂಕಕಾರಿ, ಪ್ರಜ್ವಲ್‌ ರೇವಣ್ಣ ಬಂಧನ ಯಾವಾಗ, ಫೇಸ್‌ಬುಕ್ ಪೋಸ್ಟಲ್ಲಿ ವಾಸು ಎಚ್‌ವಿ ಕಳವಳ

Bengaluru Rains: ದಾಖಲೆಯ ಬಿಸಿ ಕಂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ರಣ ಬಿಸಿಲಿಗೆ ಬೆಂದ ಜನ ಫುಲ್ ಖುಷ್

ಕಾಂತು ಅಜಿಲ ಮೂಲಂಗೀರಿ ಎಂಬುವವರೇ ಮೃತ ದುರ್ದೈವಿಯಾಗಿದ್ದು, ಮೂಲಂಗೀರಿ ಅವರ ನಿಧನಕ್ಕೆ ಹೃದಯಾಘಾತ ಕಾರಣ ಎಂದು ಹೇಳಲಾಗಿದೆ.

ಕಡಬ ಸಮೀಪದ ಎಡಮಂಗಲ ಗ್ರಾಮದ ಇಡ್ಯಕ್ಕದಲ್ಲಿ ನೇಮೋತ್ಸವ ನಡೆಯುತ್ತಿತ್ತು. ಈ ವೇಳೆ ಕಾಂತು ಅಜಿಲ ಅವರು ದೈವನರ್ತನ ಸೇವೆ ನೀಡುತ್ತಿದ್ದರು. ದೈವನರ್ತನ ಮಾಡುತ್ತಲೇ ಹಠಾತ್ತನೇ ಕುಸಿದು ಬಿದ್ದ ಕಾಮತು ಅಜಿಲ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತದಾರೂ, ಚಿಕಿತ್ಸೆ ಫಲಕಾರಿಯಗದೇ ಅವರು ಅಸುನೀಗಿದ್ದಾರೆ ಎನ್ನಲಾಗಿದೆ.

55 ವರ್ಷದ ಕಾಂತು ಅಂಜಿಲ ಅವರು ದೈವನರ್ತನಕ್ಕೆ ಹೆಸರುವಾಸಿಯಾಗಿದ್ದರು. ಹಲವು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಕಾಂತು ಅಂಜಿಲ ಅವರು ದೈವಾರಾಧಕರಾಗಿ ಮತ್ತು ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30ರ ಮಧ್ಯರಾತ್ರಿ ನಡೆದ ನೇಮೋತ್ಸವದಲ್ಲಿ ದೈವನರ್ತನ ಸೇವೆ ನೀಡುತ್ತಿದ್ದ ಕಾಂತು ಅಂಜಿಲ ಅವರು, ಹಠಾತ್ತನೇ ಕುಸಿದು ಬಿದ್ದ ದೃಶ್ಯಗಳು ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆ ನಡೆದಾಗ ಕಾಂತು ಅಂಜಿಲ ಅವರು ಶಿರಾಡಿ ದೈವಕ್ಕೆ ನರ್ತನ ಸೇವೆ ನೀಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಂಜಿ ಅವರ ನಿಧನಕ್ಕೆ ಹೃದಯಾಘಾತ ಕಾರಣ ಎಂದು ಹೇಳಲಾಗುತ್ತಿದ್ದರೂ, ವೈದ್ಯರು ಇದನ್ನು ಅಧಿಕೃತವಾಗಿ ದೃಢಪಡಿಸಿಲ್ಲ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು