logo
ಕನ್ನಡ ಸುದ್ದಿ  /  ಕರ್ನಾಟಕ  /  Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಎನ್ಐಎ ದಾಳಿ; ಮಹತ್ವದ ದಾಖಲೆಗಳಿಗೆ ಶೋಧ

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಎನ್ಐಎ ದಾಳಿ; ಮಹತ್ವದ ದಾಖಲೆಗಳಿಗೆ ಶೋಧ

HT Kannada Desk HT Kannada

Aug 13, 2023 09:31 PM IST

google News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ (ಸಾಂದರ್ಭಿಕ ಚಿತ್ರ)

    • Karnataka NIA Raid: ಭಾರತದ 5 ರಾಜ್ಯಗಳ 14 ಸ್ಥಳಗಳಲ್ಲಿ ಭಾನುವಾರದಂದು ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ದಾಳಿ ನಡೆಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ (ಸಾಂದರ್ಭಿಕ ಚಿತ್ರ)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ (ಸಾಂದರ್ಭಿಕ ಚಿತ್ರ)

ಮಂಗಳೂರು: ಭಾರತದ 14 ಕಡೆಗಳಲ್ಲಿ ಆಗಸ್ಟ್ 13ರ ಭಾನುವಾರ ಎನ್‌ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ-NIA) ಅಧಿಕಾರಿಗಳು ದಾಳಿ ನಡೆಸಿದ್ದು, ಇದರಲ್ಲಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮನೆಗಳೂ ಸೇರಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಬೋಗೋಡಿಯ ಇಬ್ರಾಹಿಂ ನಂದಾವರ ಎಂಬವರ ಮನೆಗೆ ಭೇಟಿ ನೀಡಿದ ಅಧಿಕಾರಿಗಳು, ಮಹತ್ವದ ದಾಖಲೆಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಮಂಗಳೂರು ಹೊರವಲಯದ ವಳಚ್ಚಿಲ್‌ನ ಮುಸ್ತಾಕ್ ಎಂಬವರ ಮನೆ ಮೇಲೆ ಎನ್‌ಐಎ ದಾಳಿ ನಡೆದಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪ ಕಿನ್ಯ ಎಂಬಲ್ಲಿಯ ಮನೆಯೊಂದಕ್ಕೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಿಷೇದಿತ ಪಿಎಫ್ಐ ಸಂಘಟನೆಗೆ ವಿದೇಶದಿಂದ ಫಂಡಿಂಗ್ ಮಾಡಲಾಗಿದೆ ಎಂಬ ಪ್ರಕರಣದ ತನಿಖೆಯ ಮುಂದುವರಿದ ಭಾಗವಿದು.

ಕೇರಳ ರಾಜ್ಯದಲ್ಲಿ ಧಾರ್ಮಿಕ ಶಿಕ್ಷಕನಾಗಿದ್ದ ವ್ಯಕ್ತಿಯೊಬ್ಬ ಪಿಎಫ್ಐ ನಿಷೇಧದ ಬಳಿಕ ಭೂಗತನಾಗಿದ್ದ. ಇದೀಗ ಆತನ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಎನ್ಐಎ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ದಾಳಿ ಸಂದರ್ಭ ಆತ ಮನೆಯಲ್ಲಿ ಇರಲಿಲ್ಲ. ಈ ಹಿಂದೆ ಪಿಎಫ್ಐ ಸಂಘಟನೆಯ ಫಂಡಿಂಗ್ ನೆಟ್ವರ್ಕ್ ಅನ್ನು ಎನ್ಐಎ ಬೇಧಿಸಿತ್ತು. ಈ ವೇಳೆ ಬಂಧಿತರ ವಿಚಾರಣೆ ಸಂದರ್ಭ ಆತನ ಹೆಸರು ಪ್ರಸ್ತಾಪಗೊಂಡಿತ್ತು. ಪಿಎಫ್ಐ ಫಂಡಿಂಗ್ ನೆಟ್ವರ್ಕ್‌ಗೆ ಲಿಂಕ್ ಇರಬಹುದೇ ಎಂಬ ಸಂಶಯದಿಂದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಎನ್‌ಐಎ ಇಂದು 5 ರಾಜ್ಯಗಳ 14 ಸ್ಥಳಗಳಲ್ಲಿ ದಾಳಿಗಳನ್ನು ನಡೆಸಿದೆ. ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಕೇರಳ ರಾಜ್ಯಗಳಲ್ಲಿ ದಾಳಿ ನಡೆದಿವೆ. ಕಣ್ಣೂರು, ಮಲಪ್ಪುರಂ, ದಕ್ಷಿಣ ಕನ್ನಡ, ನಾಸಿಕ್, ಕೊಲ್ಲಾಪುರ, ಮುರ್ಷಿದಾಬಾದ್ ಮತ್ತು ಕತಿಹಾರ್ ಜಿಲ್ಲೆಗಳಲ್ಲಿ ಸೇರಿ ಒಟ್ಟು 14 ಸ್ಥಳಗಳಲ್ಲಿ ದಾಳಿ ಸಂಘಟಿಸಿದೆ. ದಾಳಿಯ ಸಮಯದಲ್ಲಿ ಹಲವಾರು ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಯುಧಗಳು, ಕಬ್ಬಿಣದ ಸರಳುಗಳು, ಕತ್ತಿಗಳು ಮತ್ತು ಚಾಕುಗಳ ಬಳಕೆಯಲ್ಲಿ ಪಿಎಫ್‌ಐ ಕಾರ್ಯಕರ್ತರಿಗೆ ತರಬೇತಿ ನೀಡಲು ದೇಶದ ವಿವಿಧ ರಾಜ್ಯಗಳಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ನಿಷೇಧಿತ ಸಂಘಟನೆ ನಡೆಸುತ್ತಿತ್ತು ಎನ್ನಲಾಗಿದೆ. ಇದಕ್ಕೆ ಕೆಲ ಮಧ್ಯಮ ಮಟ್ಟದ ಪಿಎಫ್‌ಐ ಏಜೆಂಟ್‌ಗಳು ಮಾಸ್ಟರ್ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಎನ್ಐಎ ಶಂಕಿಸಿದೆ.

ವರದಿ: ಹರೀಶ ಮಾಂಬಾಡಿ, ಮಂಗಳೂರು

NIA Raid: ಕರ್ನಾಟಕ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್​ಐಎ ದಾಳಿ

ನವದೆಹಲಿ: ಕರ್ನಾಟಕ ಸೇರಿದಂತೆ ಭಾರತದ 5 ರಾಜ್ಯಗಳ 14 ಸ್ಥಳಗಳಲ್ಲಿ ಎನ್​ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ-NIA) ಅಧಿಕಾರಿಗಳು ಇಂದು (ಆಗಸ್ಟ್ 13, ಭಾನುವಾರ) ದಾಳಿ ನಡೆಸಿದ್ದಾರೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಳಿ ನಡೆಸಲಾಗಿದೆ.

ಜನರಲ್ಲಿ ಕೋಮುವಾದ ಕೆರಳಿಸುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ಮೂಲಕ ಶಾಂತಿ ಕದಡುವ ಪಿಎಫ್​ಐ (ಪಾಪ್ಯುಲರ್​ ಫ್ರಂಟ್​ ಆಫ್ ಇಂಡಿಯಾ -PFI) ಮತ್ತು ಇತರ ಸಂಘಟನೆಗಳ ಪಿತೂರಿಯನ್ನು ವಿಫಲಗೊಳಿಸುವ ನಿರಂತರ ಪ್ರಯತ್ನಗಳ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಐದು ರಾಜ್ಯಗಳಲ್ಲಿ ಸರಣಿ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ