logo
ಕನ್ನಡ ಸುದ್ದಿ  /  ಕರ್ನಾಟಕ  /  Davanagere News: ಕರ್ನಾಟಕದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌: ಸಿದ್ದರಾಮಯ್ಯ ಅಭಯ

Davanagere news: ಕರ್ನಾಟಕದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌: ಸಿದ್ದರಾಮಯ್ಯ ಅಭಯ

Umesha Bhatta P H HT Kannada

Feb 04, 2024 01:49 PM IST

ದಾವಣಗೆರೆಯಲ್ಲಿ ನಡೆಯುತ್ತಿರುವ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರನ್ನು ಸನ್ಮಾನಿಸಲಾಯಿತು.

    • Journalists Meet ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಉಚಿತ ಬಸ್‌ ಪಾಸ್‌ ಒದಗಿಸಲು ಕ್ರಮ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ದಾವಣಗೆರೆಯಲ್ಲಿ ನಡೆಯುತ್ತಿರುವ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರನ್ನು ಸನ್ಮಾನಿಸಲಾಯಿತು.
ದಾವಣಗೆರೆಯಲ್ಲಿ ನಡೆಯುತ್ತಿರುವ ಪತ್ರಕರ್ತರ ಸಂಘದ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಅವರನ್ನು ಸನ್ಮಾನಿಸಲಾಯಿತು.

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಈ ಬಜೆಟ್ ನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರೆ, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಕೂಡ ಹೇಳಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಬೆಂಗಳೂರಿನಲ್ಲಿ ಮೇ 18, 19ಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ -Bengaluru Rain

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

ಲೈಂಗಿಕ ದೌರ್ಜನ್ಯಕ್ಕೊಳದ ಮಹಿಳೆ ಅಪಹರಣ ಆರೋಪ ಪ್ರಕರಣ; ಮೇ 20ಕ್ಕೆ ಹೆಚ್‌ಡಿ ರೇವಣ್ಣ ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್

ದಾವಣಗೆರೆಯಲ್ಲಿ ನಡೆದಿರುವ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹಲವಾರು ವಿಷಯಗಳ ಪ್ರಸ್ತಾಪವಾಯಿತು. ಇದರಲ್ಲಿ ಗ್ರಾಮೀಣ ಪತ್ರಕರ್ತರ ಸೌಲಭ್ಯವೂ ಕೂಡ ಒಂದು.

ವಸ್ತುನಿಷ್ಠರಾಗಿರಿ

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ ಎಂದರು.

ಅಭಿವೃಕ್ತಿ ಸ್ವಾತಂತ್ರ್ಯ

ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಘನತೆ ತರುವಂತೆ ಮಾಡಬೇಕು. ಸ್ವಾತಂತ್ರ್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದರು.

ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವೃತ್ತಿ ಬದ್ದತೆ ಬದಲಾಗದಿರಲಿ

ಅಚ್ಚುಮೊಳೆಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಪತ್ರಿಕಾ ವೃತ್ತಿ ತಾಂತ್ರಿಕವಾಗಿ ಬಹಳ ಬದಲಾವಣೆ ಕಂಡಿದೆ. ಆದರೆ ಮೂಲ ಆಶಯ ಮತ್ತು ಬದ್ದತೆ ಮಾತ್ರ ಬದಲಾಗಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಭಾನುವಾರ 'ಸರ್ಕಾರ ಮತ್ತು ಮಾಧ್ಯಮ' ಕುರಿತ ಸಂವಾದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈಗ ಅಧಿಕಾರಸ್ಥರ ಮತ್ತು ಪತ್ರಕರ್ತರ ನಡುವೆ ಸಂಪರ್ಕ ಅನಿವಾರ್ಯ ಅನ್ನುವ ಸ್ಥಿತಿ ಬಂದಿದೆ. ಮೊದಲೆಲ್ಲಾ ಪತ್ರಕರ್ತರು ಅಧಿಕಾರಸ್ಥರ ಜತೆ ನಿಕಟ ಸಂಪರ್ಕ ಹೊಂದುವುದಕ್ಕೆ ಬಹಳ ಮುಜುಗರ ಅನುಭವಿಸುತ್ತಿದ್ದರು ಎಂದು ವಿವರಿಸಿದರು.

ಪತ್ರಕರ್ತರು ಮೊದಲು ತಮ್ಮ ಮತ್ತು ತಮ್ಮ ಕುಟುಂಬದ ಆರೋಗ್ಯ, ಯೋಗಕ್ಷೇಮದ ಕಡೆಗೂ ಗಮನ ಹರಿಸಬೇಕು. ಕೆಲಸದ ಒತ್ತಡದ ನಡುವೆಯೂ ಈ ದಿಕ್ಕಿನಲ್ಲೂ ಗಮನ ಹರಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಮತ್ತು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಪತ್ರಕರ್ತ ಸಮುದಾಯದ ವೃತ್ತಿಪರತೆ ಮತ್ತು ಪ್ರಗತಿಗೆ ನೀಡಿದ ನೆರವುಗಳನ್ನು ಪಟ್ಟಿ ಮಾಡಿದ ಕೆ.ವಿ.ಪ್ರಭಾಕರ್ ಅವರು, ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಒದಗಿಸುವ ಕುರಿತು ಗಂಭೀರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ ಸೇರಿ ಸಂಘದ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ