logo
ಕನ್ನಡ ಸುದ್ದಿ  /  ಕರ್ನಾಟಕ  /  Davanagere News: ಗುತ್ತಿಗೆ ಆಧಾರದ ಮೇಲೆ ಶಿಕ್ಷಣ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

Davanagere News: ಗುತ್ತಿಗೆ ಆಧಾರದ ಮೇಲೆ ಶಿಕ್ಷಣ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

HT Kannada Desk HT Kannada

Sep 27, 2023 01:07 PM IST

ಗುತ್ತಿಗೆ ಆಧಾರದ ಮೇಲೆ ಶಿಕ್ಷಣ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

    • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಶಿಕ್ಷಣ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಗುತ್ತಿಗೆ ಆಧಾರದ ಮೇಲೆ ಶಿಕ್ಷಣ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ ಪೂರೈಸುತ್ತಿದ್ದ ನಾರಾ ಶ್ರೀನಿವಾಸ್ ರಾವ್ ಬಂಧನ; ಗೋವಾ ಮಹಿಳೆಯ ಬ್ಲಾಕ್ ಮೇಲ್, ಬೆಂಗಳೂರಿನ ವ್ಯಕ್ತಿ ಸೆರೆ

ಬೆಂಗಳೂರು: ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಜಾಯ್‌ ರೈಡ್‌, ಯುವಕನ ಬಂಧನ, ಡಿಎಲ್ ಅಮಾನತಿಗೆ ಶಿಫಾರಸು

ಕರ್ನಾಟಕ ಹವಾಮಾನ ಮೇ 20; ದಕ್ಷಿಣ ಕನ್ನಡ, ಉಡುಪಿ ಸೇರಿ 8ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಮಳೆ ಮುನ್ಸೂಚನೆ

Hubli News: ಅಂಜಲಿ ಹತ್ಯೆ, ಹುಬ್ಬಳ್ಳಿಯಲ್ಲಿ ಇಂದು ಪರಮೇಶ್ವರ್‌ ಸಭೆ, ಸಿಬಿಐ ತನಿಖೆಗೆ ಜೋಶಿ ಆಗ್ರಹ

ಆನಗೋಡು ಸಮೀಪ ಹುಳುಪಿನಕಟ್ಟೆ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಈ ವಿಜ್ಞಾನ ಕೇಂದ್ರದಲ್ಲಿ ಶಿಕ್ಷಣ ಸಹಾಯಕರ ಎರಡು ಹುದ್ದೆಗೆ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು, ಇಲ್ಲಿ ಪಡೆದು ದೃಢೀಕೃತ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಕಚೇರಿಗೆ ಸಲ್ಲಿಸಬೇಕು.

ಬಿಎಸ್ಸಿ, ಬಿಇಡಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ:9742313992, 9481867596 ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಜಿ.ಕೊಟ್ರೇಶ್ ತಿಳಿಸಿದ್ದಾರೆ.

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ