logo
ಕನ್ನಡ ಸುದ್ದಿ  /  ಕರ್ನಾಟಕ  /  Davanagere News: ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್‌ ಚುನಾವಣೆ; ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗ ಆದೇಶ

Davanagere News: ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್‌ ಚುನಾವಣೆ; ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗ ಆದೇಶ

HT Kannada Desk HT Kannada

Jun 09, 2023 06:39 PM IST

google News

Karnataka Election: ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್‌ ಚುನಾವಣೆ; ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗ ಆದೇಶ

    • Davanagere News: ದಾವಣಗೆರೆ ಜಿಲ್ಲಾ ಪಂಚಾಯತ್ (District panchayat election) ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೆ (grama panchayat election)  ಸರ್ಕಾರ ಸನ್ನದ್ಧವಾಗುತ್ತಿದ್ದು, ಮತದಾರರ ಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Karnataka Election: ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್‌ ಚುನಾವಣೆ; ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗ ಆದೇಶ
Karnataka Election: ಜಿಲ್ಲಾ ಪಂಚಾಯತ್‌ ತಾಲೂಕು ಪಂಚಾಯತ್‌ ಚುನಾವಣೆ; ಅಂತಿಮ ಮತದಾರರ ಪಟ್ಟಿ ಸಿದ್ಧತೆಗೆ ರಾಜ್ಯ ಚುನಾವಣಾ ಆಯೋಗ ಆದೇಶ

ದಾವಣಗೆರೆ: ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಿಗೆ ಸರ್ಕಾರ ಸನ್ನದ್ಧವಾಗುತ್ತಿದ್ದು, ಮತದಾರರ ಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಕಳೆದ 2021 ರಲ್ಲಿಯೇ ನಡೆಯಬೇಕಿದ್ದ ಜಿಪಂ ಮತ್ತು ತಾಪಂ ಚುನಾವಣೆಗಳನ್ನು ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸತತವಾಗಿ ಮುಂದೂಡುತ್ತಲೇ ಬಂದಿತ್ತು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಮೀಸಲಾತಿ ಪಟ್ಟಿಯಲ್ಲಿ ಕೆಲವು ಮಾರ್ಪಾಡುಗಳೊಂದಿಗೆ ಚುನಾವಣೆ ನಡೆಸಲು ಮುಂದಾಗಿದೆ. ಆ ಮೂಲಕ ಮತ್ತೆ ಚುನಾವಣಾ ಕಾವು ಜಿಲ್ಲೆಯಲ್ಲಿ ಏರಲಿದೆ.

ರಾಜ್ಯ ಚುನಾವಣಾ ಆಯೋಗವು ಈಗಾಗಲೇ ಜಿಪಂ ಮತ್ತು ತಾ.ಪಂ.ಚುನಾವಣೆ ನಡೆಸಲು ಸಜ್ಜಾಗುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದು, ಇದಕ್ಕಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಜುಲೈ 7 ರಂದು ರಾಜ್ಯ ಬಜೆಟ್ ನಂತರ ಚುನಾವಣೆಯ ಬಿಸಿ ಪ್ರಾರಂಭವಾಗುವ ಸಾಧ್ಯತೆಯಿದೆ.

ದಾವಣಗೆರೆ 29 ಜಿಲ್ಲಾ ಪಂಚಾಯತ್ ಮತ್ತು 98 ತಾಲೂಕು ಪಂಚಾಯತ್ ಸ್ಥಾನಗಳನ್ನು ಹೊಂದಿದ್ದು, ಜುಲೈ 14 ರಂದು ಚುನಾವಣೆಗೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು, ಈ ಪಟ್ಟಿಗೆ ಜುಲೈ 19 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು, ಇದನ್ನು ಜುಲೈ 22 ರೊಳಗೆ ಪರಿಹರಿಸಿ ಅಂತಿಮ ಕರಡು ಪ್ರತಿಯನ್ನು ನೀಡಬೇಕು. ಜುಲೈ 27 ರೊಳಗೆ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಪಂ ಸಿಇಓ ಸುರೇಶ್ ಇಟ್ನಾಳ್ ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯ ದಿನಾಂಕಗಳು ನಮಗೆ ತಿಳಿದಿಲ್ಲ, ಆದರೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದಿಂದ ನಮಗೆ ನಿರ್ದೇಶನ ಬಂದಿದೆ. ಚುನಾವಣೆಯ ದಿನಾಂಕವನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಲಿದೆ ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು. (ವರದಿ: ಆದಿತಿ, ದಾವಣಗೆರೆ)

ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ. ಈ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಕಲುಷಿತ ನೀರು: ಮಾಹಿತಿ ಕೇಳಿದ ಸಿಎಂ

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ