logo
ಕನ್ನಡ ಸುದ್ದಿ  /  ಕರ್ನಾಟಕ  /  Davanagere News: ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಿದ್ದಂತೆ ಅವರ ಬೀಗರಾದ ಶಾಮನೂರು ವರಸೆಯೂ ಬದಲಾಯಿತು; ಕಾಂಗ್ರೆಸಿಗರು ಸಿಡಿಮಿಡಿ

Davanagere News: ಜಗದೀಶ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಿದ್ದಂತೆ ಅವರ ಬೀಗರಾದ ಶಾಮನೂರು ವರಸೆಯೂ ಬದಲಾಯಿತು; ಕಾಂಗ್ರೆಸಿಗರು ಸಿಡಿಮಿಡಿ

Umesh Kumar S HT Kannada

Jan 27, 2024 06:04 PM IST

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ

  • ಕಳೆದ ವಿಧಾನಸಭಾ ಚುನಾವಣೆಗೆ ಜಗದೀಶ್‌ ಶೆಟ್ಟರ್ ಅವರನ್ನು ತಮ್ಮೆಡೆ ಸೆಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಈಗ ಬಹಳ ಮುಜುಗರದ ಸನ್ನಿವೇಶ. ಶಾಮನೂರು ಶಿವಶಂಕರಪ್ಪ ಮತ್ತು ಶೆಟ್ಟರ್ ಬೀಗರು. ಶೆಟ್ಟರ್ ಮತ್ತೆ ಬಿಜೆಪಿ ಸೇರಿದ ಕೂಡಲೆ ಶಾಮನೂರು ಶಿವಶಂಕರಪ್ಪ, ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಅಲ್ಲಿನ ಜನರಿಗೆ ಕರೆ ನೀಡಿ ದಿಗಿಲುಮೂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (HT_PRINT)

ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್‌ ನಾಯಕರಿಗೆ ಭಾರಿ ಮುಜುಗರ ಸನ್ನಿವೇಶ. ಒಂದೆಡೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದ ಲಿಂಗಾಯತ ನಾಯಕ ಜಗದೀಶ ಶೆಟ್ಟರ್ ವಾಪಸ್ ಬಿಜೆಪಿಗೆ ಹೋದರು. ಇನ್ನೊಂದೆಡೆ ಅವರ ಬೀಗರಾದ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಕಾಂಗ್ರೆಸ್ ಪಕ್ಷದ ನಿಲುವಿಗೆ ವಿರುದ್ಧವಾಗಿ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕರೆ ನೀಡಿದ್ದಾರೆ. ಇದು ಮತ್ತೊಂದು ಹೊಡೆತವನ್ನು ನೀಡಿದೆ. ಬಿವೈ ರಾಘವೇಂದ್ರ ಅವರು ಲಿಂಗಾಯತ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ.

ಟ್ರೆಂಡಿಂಗ್​ ಸುದ್ದಿ

ಪ್ರಜ್ವಲ್ ರೇವಣ್ಣ ಕೇಸ್‌; ಜರ್ಮನಿಯಿಂದ ಲಂಡನ್‌ಗೆ ಹೊರಟ್ರಾ ಹಾಸನ ಸಂಸದ, 2 ದಿನಗಳ 10 ವಿದ್ಯಮಾನಗಳು

Raghunandan S Kamath Death: ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ನ್ಯಾಚುರಲ್ ಐಸ್ ಕ್ರೀಂನ ರಘುನಂದನ್ ಕಾಮತ್ ಇನ್ನಿಲ್ಲ

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

ಬಂಟ್ವಾಳ: 3 ವರ್ಷದ ಮಗುವನ್ನು ರಕ್ಷಿಸಲು ಪ್ರಾಣದ ಹಂಗುತೊರೆದು ಬಾವಿಗಳಿದ ಯುವಕ, ಉಮೇಶ್ ಮಠದಬೆಟ್ಟು ಕಾರ್ಯಕ್ಕೆ ಶ್ಲಾಘನೆ

ಹಿರಿಯ ಮುತ್ಸದ್ದಿ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಮತ್ತು ಧಾರ್ಮಿಕ ಸಮಾವೇಶದಲ್ಲಿ ಭಾಗಿಯಾದ ವೇಳೆ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದರು.

ಶಾಮನೂರು ಶಿವಶಂಕರಪ್ಪ ಅವರಿಗೆ ಈ ಸಲದ ಗುರು ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.

''ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿ ಕಾರ್ಯಗಳು ಆಗಿರುವುದನ್ನು ಗಮನಿಸಿದ್ದೇನೆ. ಒಳ್ಳೆಯ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಸಾರ್ವಜನಿಕರು ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕು. ಶಿವಮೊಗ್ಗ ಜಿಲ್ಲೆ ಇನ್ನಷ್ಟು ಅಭಿವೃದ್ಧಿಯಾಗಬೇಕು. ಬಿವೈ ರಾಘವೇಂದ್ರ ಅವರಂತಹ ಲೋಕಸಭಾ ಸದಸ್ಯರನ್ನು ಹೊಂದಿರುವ ನೀವು ಭಾಗ್ಯಶಾಲಿಗಳು. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದ್ದು, ಇನ್ನೂ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಜನರ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಬೇಕು’’ ಎಂದು ಸಮಾವೇಶದಲ್ಲಿ ಶಿವಶಂಕರಪ್ಪ ಹೇಳಿದರು.

''ಮುಂಬರುವ ಚುನಾವಣೆಯಲ್ಲೂ ಜನಾಭಿಪ್ರಾಯದಂತೆ ಕೆಲಸ ಮಾಡಿದ ಲೋಕಸಭಾ ಸದಸ್ಯರು ಗೆಲ್ಲಬೇಕು. ವೀರಶೈವ ಲಿಂಗಾಯತರಲ್ಲಿ ಹಲವು ಉಪ ಪಂಗಡಗಳಿವೆ. ಅವೆಲ್ಲವನ್ನೂ ಮರೆತು ಎಲ್ಲರೂ ಒಂದೇ ಎಂಬ ಭಾವನೆ ಮೂಡಬೇಕು; ಆಗ ಮಾತ್ರ ಏಕತೆ ಇರುತ್ತದೆ”ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗ ಲಿಂಗಾಯತ ನಾಯಕರ ನಿಲುವು ಧೋರಣೆಗಳಲ್ಲಿ ಆಗುತ್ತಿರುವ ಬದಲಾವಣೆಗಳ ಸ್ಪಷ್ಟವಾಗಿ ಗೋಚರಿಸತೊಡಗಿವೆ ಎಂದು ರಾಜಕೀಯ ಪರಿಣತರು ವಿಶ್ಲೇಷಣೆ ಮಾಡತೊಡಗಿದ್ದಾರೆ.

ಈ ನಡುವೆ, ಶಾಮನೂರು ಹೇಳಿಕೆ ಕಾಂಗ್ರೆಸ್ಸಿಗರಲ್ಲಿ ಭಾರಿ ಅಸಮಾಧಾನ ಮೂಡಿಸಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದೇನು

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು, ಶಾಮನೂರು ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ ಶಿವಮೊಗ್ಗದಲ್ಲಿ ಮಾತ್ರ ಈ ಸಲ ಕಾಂಗ್ರೆಸ್ ಪಕ್ಷವೇ ಗೆಲ್ಲೋದು ಎಂದು ಹೇಳಿದರು.

ಪಕ್ಷದ ಚೌಕಟ್ಟಿನಲ್ಲಿರಬೇಕು ಎಂದ ಪ್ರಿಯಾಂಕ್ ಖರ್ಗೆ

ಬಿಜೆಪಿ ಸಂಸದರನ್ನು ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪ ಬಹಿರಂಗವಾಗಿ ಕರೆ ನೀಡಿದ್ದಾರೆಂದು ಕೇಳಿದೆ. ಅದರ ಬಗ್ಗೆ ಮಾಹಿತಿ ಇಲ್ಲ. ಅವರು ಪಕ್ಷದ ವೇದಿಕೆಯಲ್ಲಿ ಹೇಳಿಲ್ಲ ಅನ್ನಿಸುತ್ತದೆ. ಎಲ್ಲರೂ ಪಕ್ಷದ ಚೌಕಟ್ಟಿನಲ್ಲಿರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.

ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಾಮನೂರು ಅವರನ್ನು ಉಚ್ಚಾಟಿಸಲಿ ಎಂದ ಹೆಚ್. ವಿಶ್ವನಾಥ್

ಕಾಂಗ್ರೆಸ್ ಜೀವಂತವಾಗಿದ್ದರೆ ಮೊದಲು ಶಿವಶಂಕರಪ್ಪ ಅವರನ್ನು ಉಚ್ಛಾಟಿಸಬೇಕು ಎಂದು ಎಂಎಲ್‌ಸಿ ಹೆಚ್ ವಿಶ್ವನಾಥ್ ಅವರು ಚಾಮರಾಜನಗರದಲ್ಲಿ ಆಗ್ರಹಿಸಿದರು.

ಇದೇ ವೇಳೆ, ಶಾಮನೂರು ಶಿವಶಂಕರಪ್ಪನವರು ದೇಶಕ್ಕೆ ಒಂದೊಳ್ಳೆ ಸಂದೇಶ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರನ್ನು ಒಪ್ಪಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆಗಬೇಕು ಅನ್ನೋದನ್ನ ಸೂಕ್ಷ್ಮವಾಗಿ ಹೇಳಿರುವುದಾಗಿ ಬಿಜೆಪಿ ಮಾಜಿ ಸಚಿವ ಸಿ.ಟಿ ರವಿ ಮೆಚ್ಚುಗೆ ಸೂಚಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ